AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICAI CA Results 2025: CA ಫೌಂಡೇಶನ್, ಇಂಟರ್ ಮತ್ತು ಫೈನಲ್​ ಪರೀಕ್ಷೆಯ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

ಐಸಿಎಐ ಸಂಸ್ಥೆಯು ಸಿಎ ಫೌಂಡೇಶನ್, ಇಂಟರ್ಮೀಡಿಯೇಟ್ ಮತ್ತು ಫೈನಲ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಿದೆ. ವೃಂದಾ ಅಗರ್ವಾಲ್ (ಫೌಂಡೇಶನ್), ದಿಶಾ ಅನೀಶ್ ಗೋಖ್ರು (ಇಂಟರ್ಮೀಡಿಯೇಟ್), ಮತ್ತು ರಾಜನ್ ಕಬ್ರಾ (ಫೈನಲ್) ಅವರು ತಮ್ಮ ತಮ್ಮ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅಭ್ಯರ್ಥಿಗಳು icai.nic.in ನಲ್ಲಿ ತಮ್ಮ ಫಲಿತಾಂಶಗಳನ್ನು ನೋಂದಣಿ ಸಂಖ್ಯೆ ಮತ್ತು ರೋಲ್ ಸಂಖ್ಯೆಯನ್ನು ಬಳಸಿ ಪರಿಶೀಲಿಸಬಹುದು.

ICAI CA Results 2025: CA ಫೌಂಡೇಶನ್, ಇಂಟರ್ ಮತ್ತು ಫೈನಲ್​ ಪರೀಕ್ಷೆಯ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?
Icai Ca May 2025 Results
ಅಕ್ಷತಾ ವರ್ಕಾಡಿ
|

Updated on:Jul 06, 2025 | 2:58 PM

Share

ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಸಿಎ ಫೌಂಡೇಶನ್, ಇಂಟರ್ಮೀಡಿಯೇಟ್ ಮತ್ತು ಫೈನಲ್ ಮೇ ಪರೀಕ್ಷೆಗಳ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಐಸಿಎಐನ ಅಧಿಕೃತ ವೆಬ್‌ಸೈಟ್ icai.nic.in ನಲ್ಲಿ ಪರಿಶೀಲಿಸಬಹುದು. ಇದಕ್ಕಾಗಿ, ಅವರು ತಮ್ಮ ನೋಂದಣಿ ಸಂಖ್ಯೆ ಮತ್ತು ರೋಲ್ ಸಂಖ್ಯೆಯನ್ನು ಬಳಸಬೇಕಾಗುತ್ತದೆ. ಐಸಿಎಐ ಮೂರು ಪರೀಕ್ಷೆಗಳ ಟಾಪರ್‌ಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ, ಇದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ನೋಡಬಹುದು.

ವೃಂದಾ ಅಗರ್ವಾಲ್ 400 ಅಂಕಗಳಿಗೆ 362 ಅಂಕಗಳನ್ನು ಗಳಿಸುವ ಮೂಲಕ CA ಫೌಂಡೇಶನ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದರೆ, ದಿಶಾ ಅನೀಶ್ ಗೋಖ್ರು CA ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದರು ಮತ್ತು ಮುಂಬೈನ ರಾಜನ್ ಕಬ್ರಾ CA ಫೈನಲ್ ಪರೀಕ್ಷೆಯಲ್ಲಿ 600 ಅಂಕಗಳಿಗೆ 516 ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 14,247 ಅಭ್ಯರ್ಥಿಗಳು ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕೋಲ್ಕತ್ತಾದ ನಿಶ್ತಾ ಬೋತ್ರಾ 503 ಅಂಕಗಳೊಂದಿಗೆ ಎರಡನೇ ಸ್ಥಾನ ಮತ್ತು ಮುಂಬೈನ ಮಾನವ್ ರಾಕೇಶ್ ಶಾ 493 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ದೇಶದ ಮೊದಲ ಎಂಜಿನಿಯರಿಂಗ್ ಕಾಲೇಜು ಯಾವುದು ಗೊತ್ತಾ?

CA ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ?

  • ಮೊದಲು ICAI ನ ಅಧಿಕೃತ ವೆಬ್‌ಸೈಟ್ icai.nic.in ತೆರೆಯಿರಿ.
  • ನಂತರ ಮುಖಪುಟದಲ್ಲಿ CA ಫೈನಲ್, ಇಂಟರ್ಮೀಡಿಯೇಟ್ ಅಥವಾ ಫೌಂಡೇಶನ್ ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅದರ ನಂತರ ನಿಮ್ಮ ಲಾಗಿನ್ ಆಗಿ ಮತ್ತು ಸಲ್ಲಿಸು ಬಟನ್​​ ಕ್ಲಿಕ್​​ ಮಾಡಿ.
  • ಈಗ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sun, 6 July 25

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ