
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಇಂದು 10ನೇ ತರಗತಿ (ICSE) ಮತ್ತು 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆಯಾಗಲಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ವಿದ್ಯಾರ್ಥಿಗಳು ತಮ್ಮ ಯುನಿಕ್ ಐಡಿ (Unique ID) ಮತ್ತು ಇಂಡೆಕ್ಸ್ ಸಂಖ್ಯೆಯನ್ನು (Index Number) ಬಳಸಿಕೊಂಡು ತಮ್ಮ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು.
ನಿಮ್ಮ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ ಪಡೆಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ:
ವೆಬ್‌ಸೈಟ್ ಸರ್ವರ್ ಸಮಸ್ಯೆಯಿದ್ದಲ್ಲಿ ವಿದ್ಯಾರ್ಥಿಗಳು ಎಸ್‌ಎಂಎಸ್ ಮೂಲಕವೂ ಫಲಿತಾಂಶ ಪಡೆಯಬಹುದು.
ಇದನ್ನೂ ಓದಿ: ಎಸ್ಎಸ್ಎಲ್ಸಿ ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ
ಫಲಿತಾಂಶದಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಮರುಪರಿಶೀಲನೆಗೆ (Re-checking) ಅರ್ಜಿ ಸಲ್ಲಿಸಲು ಮಂಡಳಿಯು ಅವಕಾಶ ನೀಡಿದೆ. ಮೇ 1 ರಿಂದ ಮೇ 4 ರವರೆಗೆ ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಯಾವುದಾದರೂ ವಿಷಯದಲ್ಲಿ ಅನುತ್ತೀರ್ಣರಾದಲ್ಲಿ ಅಥವಾ ಅಂಕ ಸುಧಾರಣೆ ಬಯಸುವವರು ಜೂನ್ ತಿಂಗಳಿನಲ್ಲಿ ನಡೆಯಲಿರುವ ಪೂರಕ ಪರೀಕ್ಷೆಗಳಿಗೆ ಹಾಜರಾಗಬಹುದು.
ವಿದ್ಯಾರ್ಥಿಗಳು ತಮ್ಮ ಮೂಲ ಅಂಕಪಟ್ಟಿ ಮತ್ತು ಉತ್ತೀರ್ಣ ಪ್ರಮಾಣಪತ್ರಗಳನ್ನು ಫಲಿತಾಂಶ ಪ್ರಕಟವಾದ ಕೆಲ ದಿನಗಳ ನಂತರ ತಮ್ಮ ಶಾಲೆಗಳಿಂದ ಅಥವಾ ಡಿಜಿಲಾಕರ್ (DigiLocker) ಮೂಲಕ ಪಡೆದುಕೊಳ್ಳಬಹುದು.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:15 am, Thu, 30 April 26