AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Supplementary Results 2022: ಇಂದು (ಸೆ. 12) ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಬೆಳಗ್ಗೆ 11ಕ್ಕೆ ಪ್ರಕಟ

ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿರಲಿದೆ.

2nd PUC Supplementary Results 2022: ಇಂದು (ಸೆ. 12) ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಬೆಳಗ್ಗೆ 11ಕ್ಕೆ ಪ್ರಕಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 12, 2022 | 8:06 AM

Share

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿರಲಿದೆ. ಪೂರಕ ಪರೀಕ್ಷೆಗೆ 1,85,421 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯಾದ್ಯಂತ ಒಟ್ಟು 307 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 678 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ಈ ವರ್ಷ ಕರ್ನಾಟಕ 2nd PUC ಫಲಿತಾಂಶಗಳನ್ನು ಜೂನ್ 18, 2022 ರಂದು ಪ್ರಕಟಿಸಲಾಯಿತು.  ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ ಒಟ್ಟು 4,22,966 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

61,838 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 14,403 ಪಾಸ್‌ ಆಗಿದ್ದಾರೆ. ಇನ್ನೂ 21,931 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,866 ಉತ್ತೀರ್ಣರಾಗಿದ್ದಾರೆ. ಈ ಸಾಲಿನಲ್ಲಿ ಒಟ್ಟು ಶೇಕಡ 61.88 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅರ್ಹತೆ ಪಡೆಯದ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಿದ್ದರು. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು PUE, ಕರ್ನಾಟಕದ ಅಧಿಕೃತ ಸೈಟ್​ನ್ನು ಪರಿಶೀಲಿಸಬಹುದು.

PUC II ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಳಗೆ ನೀಡಲಾದ ಈ ಸರಳ ಹಂತಗಳ ಮೂಲಕ ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಫಲಿತಾಂಶಗವನ್ನು ಈ ಹಂತದಲ್ಲಿ ಪರಿಶೀಲಿಸಿ: 

1. Karresults.nic.in ನಲ್ಲಿ Karresults ನ ಅಧಿಕೃತ ಸೈಟ್‌ಗೆ ಭೇಟಿ ನೀಡಿ.

2. ಫಲಿತಾಂಶದ ಲಿಂಕ್​ನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

3. ಫಲಿತಾಂಶದ ಲಿಂಕ್ ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

4. ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

5. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ.

6. ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಸಹ ಪಡೆದುಕೊಳ್ಳಬಹುದು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:47 am, Mon, 12 September 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?