ಶಾಲಾ ಮಕ್ಕಳಿಗೂ ತಟ್ಟಿದೆ ರಷ್ಯಾ ಉಕ್ರೇನ್ ಯುದ್ಧದ ಬಿಸಿ, ಪಠ್ಯ ಪುಸ್ತಕ ಮುದ್ರಣಕ್ಕೆ ಸಂಚಕಾರ

ಶೇ 40ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪರಿಷ್ಕೃತ ಪಠ್ಯಪುಸ್ತಕಗಳ ಮುದ್ರಣ ಬಾಕಿಯಿದೆ. ರಷ್ಯಾ-ಉಕ್ರೇನ್‌ ನಡುವಿನ ಯುದ್ಧದಿಂದಾಗಿ ಮುದ್ರಣ ಕಾಗದ ಸಿಗುತ್ತಿಲ್ಲ

ಶಾಲಾ ಮಕ್ಕಳಿಗೂ ತಟ್ಟಿದೆ ರಷ್ಯಾ ಉಕ್ರೇನ್ ಯುದ್ಧದ ಬಿಸಿ, ಪಠ್ಯ ಪುಸ್ತಕ ಮುದ್ರಣಕ್ಕೆ ಸಂಚಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 12, 2022 | 11:16 AM

ಬೆಂಗಳೂರು: ಉಕ್ರೇನ್ ಮೇಲಿನ ರಷ್ಯಾ ದಾಳಿ ಯಾವುದೋ ಎರಡು ದೇಶಗಳ ನಡುವಣ ಯುದ್ಧವಾಗಿ ಉಳಿದಿಲ್ಲ. ವಿಶ್ವದ ಹಲವು ದೇಶಗಳ ಮೇಲೆ ಇದರ ಪರಿಣಾಮಗಳು ಈಗಾಗಲೇ ಗೋಚರಿಸುತ್ತಿವೆ. ಅಡುಗೆ ಎಣ್ಣೆ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಸೇರಿದಂತೆ ಹಲವು ರೀತಿಯಲ್ಲಿ ರಷ್ಯಾ-ಉಕ್ರೇನ್ ಸಂಘರ್ಷದ ಪರಿಣಾಮಗಳು ಕರ್ನಾಟಕದ ಜನರನ್ನು ಬಾಧಿಸುತ್ತಿವೆ. ಶಾಲಾ ಮಕ್ಕಳಿಗೂ ರಷ್ಯಾ-ಉಕ್ರೇನ್ ಸಂಘರ್ಷದ ಬಿಸಿ ತಟ್ಟಿರುವ ವಿದ್ಯಮಾನ ಇದೀಗ ಬೆಳಕಿಗೆ ಬಂದಿದೆ. ಪ್ರತಿವರ್ಷ ಪಠ್ಯಪುಸ್ತಕ ಸಿದ್ಧತೆ ಮತ್ತು ಪೂರೈಕೆ ಹತ್ತು ಹಲವು ಕಾರಣಗಳಿಂದ ತಡವಾಗುವುದು, ವಿವಾದಗಳು ಚರ್ಚೆಗೆ ಬರುವುದು ಹೊಸದಲ್ಲ. ಆದರೆ ಈ ಬಾರಿ ಮಾತ್ರ ರಷ್ಯಾ-ಉಕ್ರೇನ್ ಸಂಘರ್ಷದಿಂದ ಪಠ್ಯಪುಸ್ತಕ ಪೂರೈಕೆ ತಡವಾಗಬಹುದು ಎಂದು ವಿಶ್ಲೇಷಿಸಲಾಗಿದೆ. ಶಾಲೆಗಳು ಆರಂಭವಾದ ನಂತರವೂ ಪಠ್ಯಪುಸ್ತಕಗಳು ಮಕ್ಕಳ ಕೈಸೇರುವುದು ಕಷ್ಟ ಎಂದು ಹೇಳಲಾಗಿದೆ. ಪಠ್ಯಪುಸ್ತಕ ಲಭ್ಯತೆಯ ಸಮಸ್ಯೆ ಬಗ್ಗೆ ಶಿಕ್ಷಣ ಇಲಾಖೆಗೆ (Education Department) ಚಿಂತೆ ಶುರುವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯಾಗಿದೆ. ಹೊಸ ಪಠ್ಯಪುಸ್ತಕ ಇಲ್ಲದ ಕಾರಣ ಶಿಕ್ಷಕರಿಗೆ ಪಾಠ ಮಾಡಲು ಕಷ್ಟವಾಗುತ್ತಿದೆ. ಹಳೆಯ ಪಠ್ಯಪುಸ್ತಕಗಳನ್ನು ಬಳಸಿ, ಪಾಠ ಮಾಡಲು ಮತ್ತು ಕಲಿಯಲು ಮಕ್ಕಳಿಗೆ ಸಾಧ್ಯವಿಲ್ಲ.

ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಇನ್ನಷ್ಟು ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

2021-22ನೇ ಸಾಲಿನಲ್ಲಿ 83 ಶೀರ್ಷಿಕೆಯಡಿ ಮುದ್ರಣಗೊಂಡಿರುವ 6,76,997 ಪಠ್ಯಪುಸ್ತಕಗಳು ಅನುಪಯುಕ್ತವಾಗಿವೆ. ಶೇ 40ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪರಿಷ್ಕೃತ ಪಠ್ಯಪುಸ್ತಕಗಳ ಮುದ್ರಣ ಬಾಕಿಯಿದೆ. ರಷ್ಯಾ-ಉಕ್ರೇನ್‌ ನಡುವಿನ ಯುದ್ಧದಿಂದಾಗಿ ಮುದ್ರಣ ಕಾಗದ ಸಿಗುತ್ತಿಲ್ಲ. ಕಚ್ಚಾ ಕಾಗದ ಇಲ್ಲದ ಕಾರಣ ಪಠ್ಯ ಮುದ್ರಣಕ್ಕೆ ಸಮಸ್ಯೆ ಎದುರಾಗಿದೆ. ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುದ್ರಣ ಕಾಗದ ತಯಾರಿ ಕಾರ್ಖಾನೆಗಳು ಪ್ರತಿ ತಿಂಗಳು ಒಟ್ಟು ಬೇಡಿಕೆಯ ಕೇವಲ ಶೇ 10ರಷ್ಟು ಕಾಗದವನ್ನು ಮಾತ್ರ ಸರಬರಾಜು ಮಾಡುತ್ತಿವೆ. ಹೀಗಾಗಿ ಪಠ್ಯಪುಸ್ತಕ ಮುದ್ರಣ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕೊವಿಡ್ ಆತಂಕ ಕಳಚಿಕೊಂಡ ನಂತರ ಶಾಲೆಗಳನ್ನು ಆರಂಭಿಸುವ ಉತ್ಸಾಹದಲ್ಲಿರುವ ಶಿಕ್ಷಣ ಇಲಾಖೆಯು ಈ ಬಾರಿ ವಾಡಿಕೆಗಿಂತಲೂ ಎರಡು ವಾರ ಮೊದಲು ಶಾಲೆಗಳ ಆರಂಭಕ್ಕೆ ಮುಂದಾಗಿದೆ. ಆದರೆ ಪಠ್ಯಪುಸ್ತಕ ಮುದ್ರಣ ಮತ್ತು ವಿತರಣೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಮೇ 16ರಿಂದ ಶಾಲೆಗಳು ಆರಂಭ

ಇದೇ ತಿಂಗಳು 16ರಿಂದ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಶಾಲೆ ಆರಂಭಕ್ಕೆ ಇನ್ನು ಕೇವಲ 5 ದಿನಗಳು ಬಾಕಿಯಿದೆ. ಬೇಸಿಗೆ ರಜೆಯಲ್ಲಿರುವ (Summer Holidays) ಮಕ್ಕಳು ಶಾಲೆಗೆ ಹೋಗಲು ಸಿದ್ಧರಾಗುತ್ತಿದ್ದಾರೆ. ಸರ್ಕಾರ ಸಹ 2021-22ರ ಶೈಕ್ಷಣಿಕ ವರ್ಷದ ಕ್ಯಾಲೆಂಡರ್​ನ ಈಗಾಗಲೇ ಬಿಡುಗಡೆ ಮಾಡಿದೆ. ಆದರೆ ಮಕ್ಕಳಿಗೆ ಬೇಕಿರುವ ಪಠ್ಯಪುಸ್ತಕ ಸರಬರಾಜಿನಲ್ಲಿ ಹಲವು ತೊಂದರೆಗಳು ಎದುರಾಗಿವೆ.

ಶಾಲೆ ಆರಂಭವಾಗಲು ಇನ್ಕ್ಕೆನು ನಾಲ್ಕು ದಿನ ಬಾಕಿಯಿವೆ. ಶೇ.45ರಷ್ಟು ಶಾಲೆಗಳಿಗೆ ಇನ್ನೂ ಪಠ್ಯಪುಸ್ತಕ ಸಿಕ್ಕಿಲ್ಲ. 21 ಸಾವಿರ ಖಾಸಗಿ ಶಾಲೆಗೆ ಒಂದು ಪುಸ್ತಕವೂ ಸಿಕ್ಕಿಲ್ಲ. 6 ತಿಂಗಳ ಹಿಂದೆಯೇ ದುಡ್ಡು ಪಡೆದಿದ್ದರೂ ಪಠ್ಯ ಪೂರೈಸಿಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟ ಶಿಕ್ಷಣ ಇಲಾಖೆ ನಡೆಗೆ ಕಿಡಿಕಾರಿದೆ. ಕೊವಿಡ್ ಕಾರಣಕ್ಕೆ ಮಕ್ಕಳಿಗೆ ಕಲಿಕೆಯಾಗಿಲ್ಲ ಅಂತಾ ಶಿಕ್ಷಣ ಇಲಾಖೆ ಎರಡು ವಾರಗಳ ಕಾಲ ಬೇಸಿಗೆ ರಜೆಗೆ ಕತ್ತರಿ ಹಾಕಿ 16 ರಿಂದಲೇ ಶಾಲೆ ಆರಂಭ ಮಾಡುತ್ತಿದೆ. ಆದರೆ ಪಠ್ಯ ಪುಸ್ತಕಗಳು ಇಲ್ಲದೆ ಶಾಲೆ ನಡೆಸುವುದು ಹೇಗೆ ಎನ್ನುವ ಗೊಂದಲದಲ್ಲಿ ಶಾಲೆಗಳು ಇವೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಮೇ‌ 16ರಿಂದ ಜೂನ್ 15ರವರೆಗೆ, ಒಂದು ತಿಂಗಳ ಅವಧಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಮೇ 16ರಿಂದಲೇ ಮಕ್ಕಳ ದಾಖಲಾತಿ ಆರಂಭಿಸಿ, ಜುಲೈ 31ರೊಳಗೆ ಮುಗಿಸಬೇಕು. ಮೇ 14ರಿಂದ ತರಗತಿ ಆರಂಭಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಮೇ 16ರಿಂದ 20ರವರೆಗೆ ದಾಖಲಾತಿ ಆಂದೋಲನ ನಡೆಸಬೇಕು. ಜೂನ್ 1ರಿಂದ ಕಲಿಕಾ ಚೇತನ ಕಾರ್ಯಕ್ರಮದಡಿ ಪಠ್ಯ ಬೋಧನೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಹೇಳಿದೆ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್