ಅಮೆರಿಕಾದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಭಾರತ ನಂಬರ್ ಒನ್, 3.3 ಲಕ್ಷ ಭಾರತೀಯರು ಅಮೆರಿಕದ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ

ಅನೇಕ ವಿದ್ಯಾರ್ಥಿಗಳು ವಿದೇಶದಲ್ಲಿ ಓದಬೇಕು ಎನ್ನುವ ಬಯಕೆಯನ್ನು ಇಟ್ಟುಕೊಂಡಿರುತ್ತಾರೆ. ಹೀಗಾಗಿ ಉನ್ನತ್ತ ಶಿಕ್ಷಣ ಪಡೆಯಲು ಅದೆಷ್ಟೋ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುತ್ತಾರೆ. ಭಾರತೀಯ ವಿದ್ಯಾರ್ಥಿಗಳು ಯುಎಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಮೇರಿಕಾದಲ್ಲಿ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಲ್ಲಿ ಭಾರತ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಓಪನ್ ಡೋರ್ಸ್ 2024 ವರದಿಯಲ್ಲಿ ಬಹಿರಂಗವಾಗಿದೆ.

Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 22, 2024 | 6:30 PM

ವಿಶ್ವದರ್ಜೆಯ ಶಿಕ್ಷಣಕ್ಕಾಗಿ ವಿಶ್ವಾದ್ಯಂತ ಹೆಸರುವಾಸಿಯಾಗಿರುವ ವಿಶ್ವದ ರಾಷ್ಟ್ರಗಳಲ್ಲಿ ಅಮೆರಿಕವು ಒಂದು. ಹೀಗಾಗಿ ಭಾರತ ಸೇರಿದಂತೆ ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ಈ ದೇಶದಲ್ಲಿ ಅಧ್ಯಯನಕ್ಕೆಂದು ತೆರಳುತ್ತಾರೆ. ಆದರೆ ಉನ್ನತ ಹುದ್ದೆಯಿಂದ ಹಿಡಿದು ವ್ಯಾಪಾರದವರೆಗೆ ಭಾರತೀಯರು ಮುಂದಿದ್ದಾರೆ. ಆದಾಗ್ಯೂ, ಭಾರತೀಯರ ಪ್ರಾಬಲ್ಯವು ಸಾಮಾಜಿಕ ಕ್ಷೇತ್ರವನ್ನು ಮೀರಿ ಶಿಕ್ಷಣ ಕ್ಷೇತ್ರಕ್ಕೆ ವಿಸ್ತರಿಸಿದೆ. ಇದೀಗ ಅಮೇರಿಕಾಕ್ಕೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವಿಚಾರವು ಬಹಿರಂಗವಾಗಿದೆ.

ಮುಂಬೈನ ಯುಎಸ್ ಕಾನ್ಸುಲೇಟ್ ಜನರಲ್ ಮೈಕ್ ಕ್ಯಾಂಕಿ ಯವರು ಪತ್ರಿಕಾಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಯುನೈಟೆಡ್ ಸ್ಟೇಟ್ಸ್‌ಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಯ ಕುರಿತು ವಾರ್ಷಿಕ ವರದಿಯನ್ನು ನೀಡಿದ್ದೇವೆ. ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವವರ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಯುಎಸ್‌ಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಲ್ಲಿ ಭಾರತವು ನಂಬರ್ ಒನ್ ತಲುಪಿರುವುದು ನಮಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: 25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಉಚಿತ ನೀಟ್ ಕೋಚಿಂಗ್

2023-24ರ ಅವಧಿಯಲ್ಲಿ 331,600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಮೆರಿಕದ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ 23% ಹೆಚ್ಚಾಗಿದೆ. ಭಾರತೀಯ ಪದವಿ ವಿದ್ಯಾರ್ಥಿಗಳ ಸಂಖ್ಯೆಯು 196,567 ಕ್ಕೆ ತಲುಪಲು 19% ರಷ್ಟು ಹೆಚ್ಚಾಗಿದೆ. ಪದವಿಪೂರ್ವ ವಿದ್ಯಾರ್ಥಿಗಳ ಸಂಖ್ಯೆಯು 13% ರಂತೆ 36,053 ಕ್ಕೆ ಏರಿಕೆಯಾಗಿದೆ. ಆದರೆ ಪದವಿ ರಹಿತ ವಿದ್ಯಾರ್ಥಿಗಳ ಸಂಖ್ಯೆ 28% ರಷ್ಟು ಇಳಿಕೆ ಕಂಡಿದೆ ಎನ್ನಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:25 pm, Fri, 22 November 24

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!