AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO YUVIKA 2025: ವಿದ್ಯಾರ್ಥಿಗಳಿಗಾಗಿ ‘ಯುವ ವಿಜ್ಞಾನಿ ಕಾರ್ಯಕ್ರಮ’ ಪ್ರಾರಂಭಿಸಿದ ಇಸ್ರೋ; ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶಾಲಾ ವಿದ್ಯಾರ್ಥಿಗಳಿಗೆ 'ಯುವ ವಿಜ್ಞಾನಿ ಕಾರ್ಯಕ್ರಮ' ಆರಂಭಿಸಿದೆ. ಮಾರ್ಚ್ 23 ಕೊನೆಯ ದಿನಾಂಕ. ಅಧಿಕೃತ ವೆಬ್​​​ ಸೈಟ್​​​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 7 ರಂದು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಕಾರ್ಯಕ್ರಮ ಮೇ 19 ರಿಂದ 30 ರವರೆಗೆ ನಡೆಯಲಿದೆ. 9ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ISRO YUVIKA 2025: ವಿದ್ಯಾರ್ಥಿಗಳಿಗಾಗಿ 'ಯುವ ವಿಜ್ಞಾನಿ ಕಾರ್ಯಕ್ರಮ' ಪ್ರಾರಂಭಿಸಿದ ಇಸ್ರೋ; ಇಂದೇ ಅರ್ಜಿ ಸಲ್ಲಿಸಿ
Isro Yuvika 2025
ಅಕ್ಷತಾ ವರ್ಕಾಡಿ
|

Updated on:Mar 23, 2025 | 2:19 PM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶಾಲಾ ವಿದ್ಯಾರ್ಥಿಗಳಿಗಾಗಿ ‘ಯುವ ವಿಜ್ಞಾನಿ ಕಾರ್ಯಕ್ರಮ’ ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಇಂದು ಅಂದರೆ ಮಾರ್ಚ್ 23 ಕೊನೆಯ ದಿನಾಂಕವಾಗಿದೆ. ಇಸ್ರೋದ ಈ ವಿಶೇಷ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು/ಪೋಷಕರು ಅಧಿಕೃತ ವೆಬ್‌ಸೈಟ್ jigyasa.iirs.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿಗಳನ್ನು ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ವಿಜ್ಞಾನದ ಕಡೆಗೆ ಆಕರ್ಷಿಸಲು ಇಸ್ರೋ ಈ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಈ ಕಾರ್ಯಕ್ರಮವು ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಆಧಾರಿತ ಸಂಶೋಧನೆ/ವೃತ್ತಿಗಳನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಹಾಗಿದ್ರೆ ನಿಮ್ಮ ಸಿದ್ದತೆ ಹೇಗಿರಬೇಕು?

ಇಸ್ರೋ ಹೊರಡಿಸಿದ ಅಧಿಸೂಚನೆಯ ಪ್ರಕಾರ, ‘ಯುವ ವಿಜ್ಞಾನಿ ಕಾರ್ಯಕ್ರಮ’ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಮೊದಲ ಪಟ್ಟಿಯನ್ನು ಏಪ್ರಿಲ್ 7 ರಂದು ಬಿಡುಗಡೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಮೇ 19 ರೊಳಗೆ ಅಥವಾ ನೋಂದಾಯಿತ ಇಮೇಲ್ ವಿಳಾಸದಲ್ಲಿ ಉಲ್ಲೇಖಿಸಲಾದ ದಿನಾಂಕದೊಳಗೆ ಆಯಾ ಇಸ್ರೋ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಈ ಕಾರ್ಯಕ್ರಮವು ಮೇ 19 ರಂದು ಪ್ರಾರಂಭವಾಗಿ ಮೇ 30 ರವರೆಗೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಇಸ್ರೋ ಯುವಿಕಾ 2025 ಗೆ ಅರ್ಜಿ ಸಲ್ಲಿಸಲು, ಮೊದಲು ಅಧಿಕೃತ ವೆಬ್‌ಸೈಟ್ jigyasa.iirs.gov.inಗೆ ಭೇಟಿ ನೀಡಿ.
  • ನಂತರ ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ವಿವರಗಳನ್ನು ಭರ್ತಿ ಮಾಡಿ.
  • ಅದರ ನಂತರ ನಿಮ್ಮ ಖಾತೆಗೆ ಲಾಗಿನ್ ಆಗಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಈಗ ಭರ್ತಿ ಮಾಡಿದ ಫಾರ್ಮ್ ಅನ್ನು ಸಲ್ಲಿಸಿ.
  • ಈ ಕಾರ್ಯಕ್ರಮಕ್ಕೆ ಯಾವುದೇ ನೋಂದಣಿ ಶುಲ್ಕವಿಲ್ಲ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:18 pm, Sun, 23 March 25

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್