ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶಾಲಾ ವಿದ್ಯಾರ್ಥಿಗಳಿಗಾಗಿ ‘ಯುವ ವಿಜ್ಞಾನಿ ಕಾರ್ಯಕ್ರಮ’ ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಇಂದು ಅಂದರೆ ಮಾರ್ಚ್ 23 ಕೊನೆಯ ದಿನಾಂಕವಾಗಿದೆ. ಇಸ್ರೋದ ಈ ವಿಶೇಷ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು/ಪೋಷಕರು ಅಧಿಕೃತ ವೆಬ್‌ಸೈಟ್ jigyasa.iirs.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿಗಳನ್ನು ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ವಿಜ್ಞಾನದ ಕಡೆಗೆ ಆಕರ್ಷಿಸಲು ಇಸ್ರೋ ಈ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.
ಈ ಕಾರ್ಯಕ್ರಮವು ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಆಧಾರಿತ ಸಂಶೋಧನೆ/ವೃತ್ತಿಗಳನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಹಾಗಿದ್ರೆ ನಿಮ್ಮ ಸಿದ್ದತೆ ಹೇಗಿರಬೇಕು?
ಇಸ್ರೋ ಹೊರಡಿಸಿದ ಅಧಿಸೂಚನೆಯ ಪ್ರಕಾರ, ‘ಯುವ ವಿಜ್ಞಾನಿ ಕಾರ್ಯಕ್ರಮ’ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಮೊದಲ ಪಟ್ಟಿಯನ್ನು ಏಪ್ರಿಲ್ 7 ರಂದು ಬಿಡುಗಡೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಮೇ 19 ರೊಳಗೆ ಅಥವಾ ನೋಂದಾಯಿತ ಇಮೇಲ್ ವಿಳಾಸದಲ್ಲಿ ಉಲ್ಲೇಖಿಸಲಾದ ದಿನಾಂಕದೊಳಗೆ ಆಯಾ ಇಸ್ರೋ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಈ ಕಾರ್ಯಕ್ರಮವು ಮೇ 19 ರಂದು ಪ್ರಾರಂಭವಾಗಿ ಮೇ 30 ರವರೆಗೆ ನಡೆಯಲಿದೆ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:18 pm, Sun, 23 March 25