AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main 2021 Admit Card: 4ನೇ ಹಂತದ ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ ಇಲ್ಲಿದೆ

ಜಂಟಿ ಪ್ರವೇಶ ಪರೀಕ್ಷೆಯನ್ನು ಈ ಬಾರಿ ನಾಲ್ಕು ಹಂತಗಳಲ್ಲಿ ನಡೆಸಲಾಗಿದೆ. ಒಂದು ಮತ್ತು 2ನೇ ಹಂತ ಫೆಬ್ರವರಿ ಹಾಗೂ ಮಾರ್ಚ್​ನಲ್ಲಿ ನಡೆದಿತ್ತು. ಆದರೆ ಕೊರೊನಾ ಕಾರಣದಿಂದ ಮೂರು ಮತ್ತು ನಾಲ್ಕನೇ ಹಂತದ ಪರೀಕ್ಷೆ ನಡೆಸಲು ಹಿನ್ನಡೆಯಾಗಿತ್ತು.

JEE Main 2021 Admit Card: 4ನೇ ಹಂತದ ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 22, 2021 | 4:49 PM

Share

ಜೆಇಇ ಮುಖ್ಯ ಪರೀಕ್ಷೆ 2021 (JEE Main 2021)ರ ನಾಲ್ಕನೇ ಸೆಶನ್ಸ್​ನ ಪರೀಕ್ಷೆಯ ಪ್ರವೇಶ ಪತ್ರವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency-NTA) ಬಿಡುಗಡೆ ಮಾಡಿದ್ದು, ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ (Admit Card)ವನ್ನು jeemain.nta.nic.in ವೆಬ್​ಸೈಟ್ ಮೂಲಕ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಜೆಇಇ ಮುಖ್ಯ ಪರೀಕ್ಷೆಯ ನಾಲ್ಕನೇ (ಕೊನೇ) ಹಂತದ ಪರೀಕ್ಷೆಗಳನ್ನು ಆಗಸ್ಟ್​ 26, 27, 31 ಮತ್ತು ಸೆಪ್ಟೆಂಬರ್​ 1, 2ರಂದು ನಡೆಸಲು ಎನ್​ಟಿಎ (NTA) ನಿರ್ಧರಿಸಿದ್ದು, ಈ ಹಂತದಲ್ಲಿ 7.3 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಅಡ್ಮಿಟ್​ ಕಾರ್ಡ್ ಡೌನ್​ ಲೋಡ್ ಮಾಡಿಕೊಳ್ಳುವ ಸರಳ ವಿಧಾನ ಇಲ್ಲಿದೆ..

1. ಮೊದಲು ಜೆಇಇ ಅಧಿಕೃತ ವೆಬ್​ಸೈಟ್  jeemain.nta.nic.in.ಗೆ ಲಾಗಿನ್​ ಆಗಿ 2. ಅದರಲ್ಲಿ   Download JEE (Main) 2021 (Session – 4) Admit Card Paper (BE/B Tech/B Arch/ B Plan) ಎಂಬ ಹೆಸರಿನಲ್ಲಿ ಮೂರು ಲಿಂಕ್​ಗಳು ಕಾಣಿಸುತ್ತವೆ. ನೀವು ಯಾವುದೇ ಲಿಂಕ್​ ಮೇಲೆ ಕ್ಲಿಕ್​ ಮಾಡಬಹುದು 3. ಒಂದು ಹೊಸ ಪೇಜ್​ ತೆರೆದುಕೊಳ್ಳುತ್ತದೆ. 4. ಅದರಲ್ಲಿ ನಿಮ್ಮ ಅಪ್ಲಿಕೇಶನ್​ ನಂಬರ್​, ಪರೀಕ್ಷೆಯ ಸೆಶನ್ಸ್, ಹುಟ್ಟಿದ ದಿನ, ಸೆಕ್ಯೂರಿಟಿ ಪಿನ್​ಗಳನ್ನು ಕೇಳಲಾಗುತ್ತದೆ. ಅದನ್ನು ತುಂಬಿ, Submit ಎಂಬಲ್ಲಿ ಕ್ಲಿಕ್​ ಮಾಡಿ. 5. ಆಗ ಸ್ಕ್ರೀನ್​ ಮೇಲೆ ನಿಮ್ಮ ಪ್ರವೇಶ ಪತ್ರ ಕಾಣಿಸುತ್ತದೆ. 6. ಅದನ್ನು ಡೌನ್​ಲೋಡ್ ಮಾಡಿಕೊಳ್ಳಿ ಮತ್ತು ಪ್ರಿಂಟ್​ ತೆಗೆದಿಟ್ಟುಕೊಳ್ಳಿ.

ಜಂಟಿ ಪ್ರವೇಶ ಪರೀಕ್ಷೆಯನ್ನು ಈ ಬಾರಿ ನಾಲ್ಕು ಹಂತಗಳಲ್ಲಿ ನಡೆಸಲಾಗಿದೆ. ಒಂದು ಮತ್ತು 2ನೇ ಹಂತ ಫೆಬ್ರವರಿ ಹಾಗೂ ಮಾರ್ಚ್​ನಲ್ಲಿ ನಡೆದಿತ್ತು. ಆದರೆ ಕೊರೊನಾ ಕಾರಣದಿಂದ ಮೂರು ಮತ್ತು ನಾಲ್ಕನೇ ಹಂತದ ಪರೀಕ್ಷೆ ನಡೆಸಲು ಹಿನ್ನಡೆಯಾಗಿತ್ತು. ಜೆಇಇ ಮುಖ್ಯ ಪರೀಕ್ಷೆ ಸೆಶನ್ಸ್ 3ನ್ನು ಜುಲೈನಲ್ಲಿ ನಡೆಸಲಾಗಿದ್ದು, ಇದೀಗ ನಾಲ್ಕನೇ ಹಂತದ ಪರೀಕ್ಷೆ ಆಗಸ್ಟ್​ 26ರಿಂದ ನಡೆಯಲಿದೆ. ದೇಶದಲ್ಲಿ ಕೊರೊನಾ ಸ್ವಲ್ಪ ತಗ್ಗಿದ್ದು, ಲಸಿಕೆ ಅಭಿಯಾನವೂ ನಡೆಯುತ್ತಿದೆ. ಕೊವಿಡ್​ 19 ಸಂಬಂಧಪಟ್ಟ ಎಲ್ಲ ಮಾರ್ಗಸೂಚಿಗಳನ್ನೂ ಅನುಸರಿಸಿಯೇ ಪರೀಕ್ಷೆ ನಡೆಸುವುದಾಗಿ ಎನ್​​ಟಿಎ ತಿಳಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಮರದ ದಿಮ್ಮಿಗಳನ್ನು ಹೊತ್ತ ಟ್ರ್ಯಾಕ್ಟರ್​ ಹಿಮ್ಮುಖವಾಗಿ ಚಲಿಸಿ ಪಲ್ಟಿ; ಜಿಗಿದು ಬಚಾವಾದ ಚಾಲಕ

‘ಕೆಬಿಸಿ’ಯಲ್ಲಿ 5 ಕೋಟಿ ರೂ ಗೆದ್ದ ನಂತರ ಪ್ರಪಾತಕ್ಕೆ ಬಿದ್ದ ಬದುಕು; ನಂತರ ಏನಾಯಿತು? ಸುಶೀಲ್ ತೆರೆದಿಟ್ಟ ಜೀವನ ಕತೆ ಇಲ್ಲಿದೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?