AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Language in Colleges: ಕಾಲೇಜು ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Karnataka High Court: ರಾಷ್ಟ್ರೀಯ ಶಿಕ್ಷಣ ನೀತಿಯಡಿ (NCERT) ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಹಾಗಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಒಪ್ಪಿಗೆಯ ಮುದ್ರೆ ನೀಡಿಲ್ಲ.

Kannada Language in Colleges: ಕಾಲೇಜು ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Updated By: ಸಾಧು ಶ್ರೀನಾಥ್​|

Updated on:Apr 06, 2022 | 2:01 PM

Share

ಬೆಂಗಳೂರು: ಕಾಲೇಜು ಹಂತದಲ್ಲಿಯೂ ಕನ್ನಡ ಕಲಿಕೆ (Kannada Language Compulsory) ಕಡ್ಡಾಯಗೊಳಿಸಿ, ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹಿನ್ನಡೆಯಾಗಿದ್ದು, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಸಂಬಂಧ ಸರ್ಕಾರ ಹೊರಡಿಸಿದ್ದ ಎರಡು ಆದೇಶಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2021 ನೇ ಸಾಲಿನಲ್ಲಿ ಆಗಸ್ಟ್​ 7 ಮತ್ತು ಸೆಪ್ಟೆಂಬರ್ 15 ರಂದು ಹೊರಡಿಸಿದ್ದ ಆದೇಶಗಳಿಗೆ ಇದೀಗ ತಡೆಯಾಜ್ಞೆ ಬಿದ್ದಿದೆ (Karnataka High Court).

ರಾಷ್ಟ್ರೀಯ ಶಿಕ್ಷಣ ನೀತಿಯಡಿ (NCERT) ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಹಾಗಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಒಪ್ಪಿಗೆಯ ಮುದ್ರೆ ನೀಡಿಲ್ಲ.

ಬಿಡಿಎ ಆಯುಕ್ತರಾಗಿ ಎಂ.ಬಿ. ರಾಜೇಶ್ ಗೌಡ ನೇಮಕ ಅಸಿಂಧು?: ಬಿಡಿಎ ಆಯುಕ್ತರಾಗಿ ಎಂ.ಬಿ. ರಾಜೇಶ್ ಗೌಡ ನೇಮಕ ಪ್ರಶ್ನಿಸಿ ರಿಟ್ ಸಲ್ಲಿಸಲಾಗಿದ್ದು ಈ ಸಂಬಂಧ KASನಿಂದ IASಗೆ ಪದೋನ್ನತಿ ಹೊಂದಿದವರು ಆಯುಕ್ತರಾಗಬಹುದೇ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಇದಕ್ಕೆ ಉತ್ತರಿಸಲು ಸರ್ಕಾರಕ್ಕೆ ಹೆಚ್ಚಿನ ಕಾಲಾವಕಾಶ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇಂತಹ ವಿಚಾರಗಳಲ್ಲಿ ಕಣ್ಮುಚ್ಚಿ ಕೂರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸಿಜೆ‌ ರಿತುರಾಜ್ ಅವಸ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಕೀಲ ಮೋಹನ್ ಕುಮಾರ್ ಎಂಬುವವರು ರಿಟ್ ಸಲ್ಲಿಸಿದ್ದರು. ಬಿಡಿಎ ನಿಯಮಾವಳಿಯಂತೆ ನೇಮಕ ನಡೆದಿಲ್ಲ. ವಿಭಾಗೀಯ ಆಯುಕ್ತ ದರ್ಜೆಯ ಅಧಿಕಾರಿ ನೇಮಕವಾಗಬೇಕಿತ್ತು. ಆದರೆ ಅದಕ್ಕಿಂತ ಕೆಳ ಹಂತದ ಅಧಿಕಾರಿಯ ನೇಮಕವಾಗಿದೆ. ಹಾಗಾಗಿ ಎಂ.ಬಿ. ರಾಜೇಶ್ ಗೌಡ ನೇಮಕವನ್ನು ಅನೂರ್ಜಿತಗೊಳಿಸಲು ರಿಟ್​ ಮೂಲಕ ಮನವಿ ಮಾಡಲಾಗಿದೆ. ತತ್ಸಂಬಂಧ ಎಂ.ಬಿ. ರಾಜೇಶ್ ಗೌಡ, ಬಿಡಿಎ ಮತ್ತು ಸರ್ಕಾರಕ್ಕೆ ಕೋರ್ಟ್​ ನೋಟಿಸ್ ನೀಡಿದೆ. ಏಪ್ರಿಲ್​ 13ರೊಳಗೆ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ: Kashi, Varanasi: ಕಾಶಿಗೆ ಹೋದಾಗ ಇಷ್ಟವಾದುದನ್ನು ಬಿಟ್ಟು ಬರುವುದರ ಒಳಮರ್ಮ ಏನು? ಇದನ್ನೂ ಓದಿ: ನಾವು ದೇವರ ವಿಗ್ರಹಗಳಿಗೆ ಸಲ್ಲಿಸುವ ಪೂಜೆ, ನಿಜವಾಗಿಯೂ ದೇವರಿಗೆ ತಲುಪುತ್ತದೆಯೇ? ಮಾರ್ಮಿಕ ಉತ್ತರ ಇಲ್ಲಿದೆ!

Published On - 1:50 pm, Wed, 6 April 22

ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ