Karnataka 1st PUC Result 2022: ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಘೋಷಣೆ; ಪರಿಶೀಲಿಸೋದು ಹೇಗೆ?

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2022: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರೀ-ಯೂನಿವರ್ಸಿಟಿ ಸರ್ಟಿಫಿಕೇಟ್ (PUC) ಮೊದಲ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 30 ರ ಶನಿವಾರ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಯು ಫಲಿತಾಂಶ ನೋಡೋದು ಹೇಗೆ? ಇಲ್ಲಿದೆ ನೋಡಿ.

Karnataka 1st PUC Result 2022: ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಘೋಷಣೆ; ಪರಿಶೀಲಿಸೋದು ಹೇಗೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Apr 30, 2022 | 4:19 PM

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರೀ-ಯೂನಿವರ್ಸಿಟಿ ಸರ್ಟಿಫಿಕೇಟ್ (PUC) ಮೊದಲ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 30 ರ ಶನಿವಾರ ಬಿಡುಗಡೆ ಮಾಡಿದೆ. ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್- result.dkpucpa.com ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಪರಿಶೀಲಿಸಬಹುದು. ಗಮನಿಸಿ, ಈ ವೆಬ್​ಸೈಟ್​ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಫಲಿತಾಂಶವನ್ನು ನೀಡಲಾಗಿದೆ. ನೀವು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಯಾಗಿದ್ದು, ಫಲಿತಾಂಶ ಪರಿಶೀಲಿಸುವುದು ಹೇಗೆ ಎಂಬ ಗೊಂದಲವಿದ್ದರೆ ಇಲ್ಲಿದೆ ನೋಡಿ.

  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ- result.dkpucpa.com
  2. PUC 1 ಫಲಿತಾಂಶ 2022 ಲಿಂಕ್ ಅನ್ನು ಕ್ಲಿಕ್ ಮಾಡಿ
  3. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  4. ಪಿಯುಸಿ 1 ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ
  5. ಪಿಯುಸಿ 1 ಫಲಿತಾಂಶವನ್ನು ಡೌನ್‌ಲೋಡ್ ಮಾಡಿ, ದಾಖಲೆಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.
  6. ವಿದ್ಯಾರ್ಥಿಗಳು ತಮ್ಮ ಪ್ರಥಮ ಪಿಯುಸಿ ಫಲಿತಾಂಶವನ್ನು ಎಸ್​ಎಂಎಸ್ ಮೂಲಕವೂ ಪರಿಶೀಲಿಸಬಹುದು.

ಈ ವರ್ಷ ಕರ್ನಾಟಕ ಮಂಡಳಿಯು ಪ್ರಥಮ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಕೊರೊನಾ ಕಾರಣದಿಂದಾಗಿ ಕರ್ನಾಟಕ ಸರ್ಕಾರದ ಪದವಿ ಪೂರ್ವ ಇಲಾಖೆ ಈ ನಿರ್ಧಾರ ಕೈಗೊಂಡಿತ್ತು. ಜತೆಗೆ ವಿದ್ಯಾರ್ಥಿಗಳೆಲ್ಲರೂ ತೇರ್ಗಡೆ ಹೊಂದಿರುವುದಾಗಿ ಘೋಷಿಸಿತ್ತು.

ದ.ಕ ಜಿಲ್ಲೆಯ ಪ್ರಥಮ ಪಿಯುಸಿ ಫಲಿತಾಂಶದ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ

ದ್ವಿತೀಯ ಪಿಯು ಪರೀಕ್ಷೆ ಎದುರಿಸುತ್ತಿದ್ದಾರೆ 6.8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು:

ಈ ನಡುವೆ 6.8 ಲಕ್ಷಕ್ಕೂ ಹೆಚ್ಚು (6,84,255) ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಎದುರಿಸುತ್ತಿದ್ದಾರೆ. ಏಪ್ರಿಲ್ 22 ರಂದು ಪರೀಕ್ಷೆ ಆರಂಭವಾಗಿತ್ತು. ಏಪ್ರಿಲ್ 22 ರಂದು ಲಾಜಿಕ್ ಮತ್ತು ಬ್ಯುಸಿನೆಸ್ ಸ್ಟಡೀಸ್ ವಿಷಯದೊಂದಿಗೆ ಪರೀಕ್ಷೆ ಪ್ರಾರಂಭವಾಗಿತ್ತು. ಪರೀಕ್ಷೆಯು ಬೆಳಗ್ಗೆ 10:15 AM ರಿಂದ 1:30 PMರ ಅವಧಿಯಲ್ಲಿ ನಡೆಯುತ್ತಿದೆ. 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ. ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ PU ಫಲಿತಾಂಶ ತಡವಾಗುವುದಿಲ್ಲ. ದ್ವಿತೀಯ PU ಪರೀಕ್ಷೆ ಫಲಿತಾಂಶ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗ್ತಿತ್ತು. ಆದರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ.

ಇದನ್ನೂ ಓದಿ: WhatsApp: ವಾಟ್ಸ್​ಆ್ಯಪ್​​ನಲ್ಲಿ ಕ್ವಿಕ್ ರಿಯಾಕ್ಷನ್ ಆಯ್ಕೆ: ರೆಡಿಯಾಗಿರಿ ಆಕರ್ಷಕವಾದ ಹೊಸ ಫೀಚರ್​ಗೆ

Published On - 3:43 pm, Sat, 30 April 22

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ