ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರೀ-ಯೂನಿವರ್ಸಿಟಿ ಸರ್ಟಿಫಿಕೇಟ್ (PUC) ಮೊದಲ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 30 ರ ಶನಿವಾರ ಬಿಡುಗಡೆ ಮಾಡಿದೆ. ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್- result.dkpucpa.com ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಪರಿಶೀಲಿಸಬಹುದು. ಗಮನಿಸಿ, ಈ ವೆಬ್ಸೈಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಫಲಿತಾಂಶವನ್ನು ನೀಡಲಾಗಿದೆ. ನೀವು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಯಾಗಿದ್ದು, ಫಲಿತಾಂಶ ಪರಿಶೀಲಿಸುವುದು ಹೇಗೆ ಎಂಬ ಗೊಂದಲವಿದ್ದರೆ ಇಲ್ಲಿದೆ ನೋಡಿ.
ಈ ವರ್ಷ ಕರ್ನಾಟಕ ಮಂಡಳಿಯು ಪ್ರಥಮ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಕೊರೊನಾ ಕಾರಣದಿಂದಾಗಿ ಕರ್ನಾಟಕ ಸರ್ಕಾರದ ಪದವಿ ಪೂರ್ವ ಇಲಾಖೆ ಈ ನಿರ್ಧಾರ ಕೈಗೊಂಡಿತ್ತು. ಜತೆಗೆ ವಿದ್ಯಾರ್ಥಿಗಳೆಲ್ಲರೂ ತೇರ್ಗಡೆ ಹೊಂದಿರುವುದಾಗಿ ಘೋಷಿಸಿತ್ತು.
ದ.ಕ ಜಿಲ್ಲೆಯ ಪ್ರಥಮ ಪಿಯುಸಿ ಫಲಿತಾಂಶದ ಸುದ್ದಿಯನ್ನು ಇಂಗ್ಲಿಷ್ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ
ದ್ವಿತೀಯ ಪಿಯು ಪರೀಕ್ಷೆ ಎದುರಿಸುತ್ತಿದ್ದಾರೆ 6.8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು:
ಈ ನಡುವೆ 6.8 ಲಕ್ಷಕ್ಕೂ ಹೆಚ್ಚು (6,84,255) ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಎದುರಿಸುತ್ತಿದ್ದಾರೆ. ಏಪ್ರಿಲ್ 22 ರಂದು ಪರೀಕ್ಷೆ ಆರಂಭವಾಗಿತ್ತು. ಏಪ್ರಿಲ್ 22 ರಂದು ಲಾಜಿಕ್ ಮತ್ತು ಬ್ಯುಸಿನೆಸ್ ಸ್ಟಡೀಸ್ ವಿಷಯದೊಂದಿಗೆ ಪರೀಕ್ಷೆ ಪ್ರಾರಂಭವಾಗಿತ್ತು. ಪರೀಕ್ಷೆಯು ಬೆಳಗ್ಗೆ 10:15 AM ರಿಂದ 1:30 PMರ ಅವಧಿಯಲ್ಲಿ ನಡೆಯುತ್ತಿದೆ. 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ. ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ PU ಫಲಿತಾಂಶ ತಡವಾಗುವುದಿಲ್ಲ. ದ್ವಿತೀಯ PU ಪರೀಕ್ಷೆ ಫಲಿತಾಂಶ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗ್ತಿತ್ತು. ಆದರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ.
ಇದನ್ನೂ ಓದಿ: WhatsApp: ವಾಟ್ಸ್ಆ್ಯಪ್ನಲ್ಲಿ ಕ್ವಿಕ್ ರಿಯಾಕ್ಷನ್ ಆಯ್ಕೆ: ರೆಡಿಯಾಗಿರಿ ಆಕರ್ಷಕವಾದ ಹೊಸ ಫೀಚರ್ಗೆ
Published On - 3:43 pm, Sat, 30 April 22