
ಬೆಂಗಳೂರು, ಮಾರ್ಚ್ 31: ಕರ್ನಾಟಕ ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ಇದೇ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಈ ಬಾರಿ ಫಲಿತಾಂಶ ಪ್ರಕಟಿಸುವ ವಿಧಾನದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ವೇಳೆ ಫಲಿತಾಂಶ ಲಭ್ಯವಾಗಿಲ್ಲ. ಹಂತ ಹಂತವಾಗಿ ಫಲಿತಾಂಶಗಳನ್ನು ಬಿಡುಗಡೆ ಮಾಡುವ ಕ್ರಮವನ್ನು ಮಂಡಳಿ ಅನುಸರಿಸಿದೆ. ಇದರ ಪರಿಣಾಮವಾಗಿ, ಕೆಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮೊದಲು ಫಲಿತಾಂಶ ಲಭ್ಯವಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳ ಕಾಲೇಜುಗಳಿಗೆ ಮೊದಲ ಹಂತದಲ್ಲೇ ಫಲಿತಾಂಶ ತಲುಪುವ ಸಾಧ್ಯತೆ ಇದ್ದು, ಇತರ ಪ್ರದೇಶಗಳ ವಿದ್ಯಾರ್ಥಿಗಳು ಸ್ವಲ್ಪ ಸಮಯ ಕಾಯಬೇಕಾಗಬಹುದು.
2025-26 ರ ಶೈಕ್ಷಣಿಕ ಅವಧಿಯ ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 28 ರಿಂದ ಮಾರ್ಚ್ 17, 2026 ರವರೆಗೆ ನಡೆಸಲಾಯಿತು. ಪರೀಕ್ಷೆಗಳನ್ನು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಒಂದೇ ಪಾಳಿಯಲ್ಲಿ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲಾಯಿತು. ಮೂರು ವಿಭಾಗಗಳ (ವಿಜ್ಞಾನ, ವಾಣಿಜ್ಯ ಮತ್ತು ಕಲೆ) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಿದ್ದರು ಮತ್ತು ಎಲ್ಲಾ ವಿಭಾಗಗಳ ಫಲಿತಾಂಶಗಳನ್ನು ಒಟ್ಟಿಗೆ ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಲು ಈ ಸರಳ ಹಂತಗಳನ್ನು ಅನುಸರಿಸಿ;
ವೆಬ್‌ಸೈಟ್ ಮೇಲೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಮಂಡಳಿ ಸೂಚಿಸಿದ್ದು, ದಿನದ ಅವಧಿಯಲ್ಲಿ ಎಲ್ಲರಿಗೂ ಫಲಿತಾಂಶ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:28 am, Tue, 31 March 26