ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದಿನಿಂದ (ಮಾರ್ಚ್ 9) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುತ್ತಿದೆ. ವರದಿಗಳ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆ 2023 (PUC Exam 2023) ಕ್ಕೆ ಸುಮಾರು 7,26,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳಿವೆ. ಬೋರ್ಡ್ ಮಾರ್ಚ್ 29, 2023 ರವರೆಗೆ ಪರೀಕ್ಷೆಗಳನ್ನು ನಡೆಸುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರವನ್ನು (Hall ticket) ತಮ್ಮೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡುಹೋಗತಕ್ಕದ್ದು.
ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C Nagesh) ಅವರು ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ಬೋರ್ಡ್ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಶಿಕ್ಷಣ ಇಲಾಖೆಯಿಂದ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಸಚಿವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು. @BSBommai
— B.C Nagesh (@BCNagesh_bjp) March 8, 2023
ವರದಿಗಳ ಪ್ರಕಾರ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪರೀಕ್ಷೆಯ ದಿನದಂದು ವಿದ್ಯಾರ್ಥಿಗಳನ್ನು ಅವರ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಉಚಿತ ಬಸ್ ಸೇವೆಗಳನ್ನು ಸಹ ನೀಡುತ್ತದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಹಾಲ್ ಟಿಕೆಟ್ ಅಥವಾ ಕರ್ನಾಟಕ ಪಿಯುಸಿ ಪ್ರವೇಶ ಚೀಟಿಯನ್ನು ತೋರಿಸುವ ಮೂಲಕ ಉಚಿತ ಸೇವೆಯನ್ನು ಪಡೆಯಬಹುದು.
ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮುಖ್ಯ ಆಯ್ಕೆಪಟ್ಟಿ ಪ್ರಕಟ