2nd PUC District Wise Result 2026: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್

ಕರ್ನಾಟಕ ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ 2026: 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮೊದಲು ಆನ್​​ಲೈನ್​​ನಲ್ಲಿ ಪ್ರಕಟವಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಹಾಗಾದ್ರೆ, ಈ ಬಾರಿ ಫಲಿತಾಂಶದಲ್ಲಿ ಯಾವ ಜಿಲ್ಲೆ ಫಸ್ಟ್, ಯಾವ ಜಿಲ್ಲೆ ಲಾಸ್ಟ್? ಎನ್ನುವ ಲಿಸ್ಟ್​ ಈ ಕೆಳಗಿನಂತ್ತಿದ್ದು, ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿ ಎನ್ನುವುದನ್ನು ನೋಡಿ.

2nd PUC District Wise Result 2026: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್
Madhu Bangarappa

Updated on: Apr 09, 2026 | 8:33 PM

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC Results 2026) ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಆನ್​​ಲೈನ್​​ನಲ್ಲಿ ಪ್ರಕಟಗೊಂಡಿದ್ದು, ಬಳಿಕ ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ದಾಖಲೆಯ ರಿಸಲ್ಟ್​ ಬಂದಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ.  7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಇನ್ನು ಈ ಬಾರಿಯ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ಯಾದಗಿರಿಗೆ ಮತ್ತೆ ಕೊನೆ ಸ್ಥಾನ.

ದ್ವಿತೀಯ ಪಿಯು  ಫಲಿತಾಂಶದ ವಿವರ

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.88.07ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದರೆ, ಶೇಕಡಾ 83.65 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಇನ್ನು ಕಲಾ ವಿಭಾಗದಲ್ಲಿ ಶೇಕಡಾ 72.86ರಷ್ಟು ಫಲಿತಾಂಶ ಬಂದಿದ್ದರೆ, ವಾಣಿಜ್ಯ ವಿಭಾಗದಲ್ಲಿ ಶೇಕಡಾ 88.04ರಷ್ಟು ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ 91.69ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಯಾವ ಜಿಲ್ಲೆ ಎಷ್ಟನೇ ಸ್ಥಾನ?

ಕಳೆದ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಯಾದಗಿರಿ ಕೊನೆ ಸ್ಥಾನದಲ್ಲಿತ್ತು. ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ, ಯಾದಗಿರಿ ಕೊನೇ ಸ್ಥಾನದಲ್ಲಿದೆ. ಶೇಕಡಾ  9639 ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 96.35 ಫಲಿತಾಂಶದ ಮೂಲಕ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದೆ. ಇನ್ನು ಯಾದಗಿರಿ ಜಿಲ್ಲೆ ಶೇಕಡಾ 71.21 ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನದಲ್ಲಿದೆ.

ಇದನ್ನೂ ನೋಡಿ: ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರು ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪ್

ಜಿಲ್ಲಾವಾರು ಫಲಿತಾಂಶ ಹೀಗಿದೆ

  1. ಉಡುಪಿ – 96.39%
  2. ದಕ್ಷಿಣ ಕನ್ನಡ – 96.35%
  3. ಕೊಡಗು – 92.34%
  4. ವಿಜಯಪುರ – 92%
  5. ಉತ್ತರ ಕನ್ನಡ – 91.78%
  6. ಬೆಂಗಳೂರು ಗ್ರಾಮಾಂತರ – 91.00%
  7. ಚಿಕ್ಕಮಗಳೂರು – 90.80%
  8. ಬೆಂಗಳೂರು ದಕ್ಷಿಣ – 90.55%
  9. ಚಿಕ್ಕಬಳ್ಳಾಪುರ – 90.24%
  10. ಬೆಂಗಳೂರು ಉತ್ತರ – 90.05%
  11. ಹಾಸನ – 89.71%
  12. ಮಂಡ್ಯ – 88.85%
  13. ರಾಮನಗರ – 87.90%
  14. ಕೋಲಾರ – 87.38%
  15. ಶಿವಮೊಗ್ಗ – 87.62%
  16. ತುಮಕೂರು – 86.89%
  17. ಕೊಪ್ಪಳ – 86.80%
  18. ಚಾಮರಾಜನಗರ – 84.68%
  19. ಮೈಸೂರು – 84.80%
  20. ಬೀದರ್ – 84.61%
  21. ಬಾಗಲಕೋಟೆ – 84.12%
  22. ಹಾವೇರಿ – 84.11%
  23. ಧಾರವಾಡ – 83.31%
  24. ಚಿಕ್ಕೋಡಿ – 83.10%
  25. ದಾವಣಗೆರೆ – 81.99%
  26. ಬೆಳಗಾವಿ – 80.32%
  27. ಚಿತ್ರದುರ್ಗ – 79.12%
  28. ಬಳ್ಳಾರಿ – 78.69%
  29. ಕಲಬುರಗಿ – 76.97%
  30. ಗದಗ – 76.65%
  31. ರಾಯಚೂರು – 74.09%
  32. ಯಾದಗಿರಿ – 71.21%

Published On - 6:59 pm, Thu, 9 April 26

Follow Us