AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC-2 Result 2026: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 2026 ಫಲಿತಾಂಶ ಪ್ರಕಟ: 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟವಾಗಿದೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ ಸೈಟ್​​ನಲ್ಲಿ ರಿಸಲ್ಟ್ ಪ್ರಕಟಿಸಿದೆ. ಹಾಗಾದ್ರೆ, ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ನೋಡುವುದ್ಹೇಗೆ ಎನ್ನುವ ವಿವರ ಈ ಕೆಳಗಿನಂತಿದೆ.

Karnataka 2nd PUC-2 Result 2026: ದ್ವಿತೀಯ ಪಿಯುಸಿ ಪರೀಕ್ಷೆ-2  ಫಲಿತಾಂಶ ಪ್ರಕಟ
ಪ್ರಾತಿನಿಧಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:May 21, 2026 | 2:39 PM

Share

ಬೆಂಗಳೂರು, (ಮೇ 21): 2026ರ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು (Karnataka 2nd PUC Exam 2 Result 2026)  ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿದಂತೆ ಒಟ್ಟು 80,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು. ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮುಖ್ಯಾಂಶಗಳು

  • ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
  • ಕಲಾ, ವಾಣಿಜ್ಯ, ವಿಜ್ಞಾನದಲ್ಲಿ 80,535 ವಿದ್ಯಾರ್ಥಿಗಳು ಹಾಜರು
  • ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣ

ಫಲಿತಾಂಶದ ವಿವರ

ಪಿಯುಸಿ ಎರಡನೇ ಪರೀಕ್ಷೆ-2 ಪರೀಕ್ಷೆಗೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ ಒಟ್ಟು 80,535 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 36,764 ವಿದ್ಯಾರ್ಥಿಗಳು ತೇಗರ್ಡೆಯಾಗಿದ್ದಾರೆ. ಇನ್ನು ಪರೀಕ್ಷೆ ಬರೆದಿದ್ದ 43,311 ಬಾಲಕರಲ್ಲಿ 19367 ವಿದ್ಯಾರ್ಥಿಗಳು ಪಾಸಾಗಿದ್ದರೆ, 37,224 ಬಾಲಕಿಯರ ಪೈಕಿ 17,397 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದೆಯೇ? ಚಿಂತಿಸಬೇಡಿ, ಯಶಸ್ಸಿಗೆ ಇಲ್ಲಿವೆ ಸಾವಿರ ಹಾದಿಗಳು!

ಉನ್ನತ ಶ್ರೇಣಿ: 85%ಕ್ಕಿಂತ ಹೆಚ್ಚು ಅಂಕ ಪಡೆದವರು 62 ವಿದ್ಯಾರ್ಥಿಗಳು,

ಪ್ರಥಮ ದರ್ಜೆ: 60%-85% ಅಂಕ‌ ಪಡೆದ ವಿದ್ಯಾರ್ಥಿಗಳು 8086

 ದ್ವಿತೀಯ ದರ್ಜೆ : 50%-60% ಅಂಕ ಪಡೆದ ವಿದ್ಯಾರ್ಥಿಗಳು 16,940, ಇನ್ನು ಶೇಕಡಾ 50% ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು 11,676.

ಹೊಸಬರು : 80,535 ವಿದ್ಯಾರ್ಥಿಗಳ‌ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣ

ಪುನರಾವರ್ತಿತ : 34,419 ವಿದ್ಯಾರ್ಥಿಗಳ ಪೈಕಿ 10,279 ವಿದ್ಯಾರ್ಥಿಗಳು ಉತ್ತೀರ್ಣ

ಖಾಸಗಿ : 5456 ವಿದ್ಯಾರ್ಥಿಗಳ ಪೈಕಿ 1562 ವಿದ್ಯಾರ್ಥಿಗಳು ಉತ್ತೀರ್ಣ

ಫಲಿತಾಂಶ ಪರಿಶೀಲಿಸುವುದು ಹೇಗೆ?

ಮಂಡಳಿಯ ಅಧಿಕೃತ ವೆಬ್ ಸೈಟ್ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು. 2026ರ ದ್ವಿತೀಯ ಪಿಯುಸಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ ನಿಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Thu, 21 May 26

Follow Us
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!