2nd PUC Exam 2023 Timetable: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Karnataka 2nd PUC Exam 2023 Schedule: 2023ರ ಮಾರ್ಚ್‌ನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2nd PUC Exam 2023 Timetable: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
BC Nagesh Tweet
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 21, 2022 | 6:41 PM

ಬೆಂಗಳೂರು: 2023 ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 10-3-2023ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು(ಅಕ್ಟೋಬರ್ 21) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ,ಸಿ, ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇನ್ನೂ ಈ ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದರೇ ವಿದ್ಯಾರ್ಥಿಗಳು ದಿನಾಂಕ 21-11-2022ರೊಳಗೆ jdexam.dpue@gmail.com ಗೆ ಸಲ್ಲಿಸುವಂತೆ ಪಿಯು ಬೋರ್ಡ್ ತಿಳಿಸಿದ್ದಾರೆ.

ಪರೀಕ್ಷಾ ದಿನಾಂಕ ವಿಷಯ
10-03-2023 ಕನ್ನಡ, ಅರೇಬಿಕ್
11-03-2023 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
13-03-2023 ಅರ್ಥಶಾಸ್ತ್ರ
14-03-2023 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
15-03-2023 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
16-03-2023 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
18-03-2023 ಭೂಗೋಳಶಾಸ್ತ್ರ, ಜೀವಶಾಸ್ತ್ರ
20-03-2023 ಇತಿಹಾಸ, ಭೌತಶಾಸ್ತ್ರ
21-03-2023 ಹಿಂದಿ
23-03-2023 ಇಂಗ್ಲೀಷ್
25-03-2023 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
29-03-2023 ಸಮಾಜ ಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Published On - 6:04 pm, Fri, 21 October 22