ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ: ಕುಳಿತಲ್ಲೇ ರಿಸಲ್ಟ್ ನೋಡಲು ಹೀಗೆ ಮಾಡಿ..!
ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟವಾಗಿದೆ. 1,11,002 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 22,446 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ವೆಬ್ಸೈಟ್ನಲ್ಲಿ ಪರೀಕ್ಷೆಸುವುದು ಹೇಗೆ? ಇಲಾಖೆಯ ಅಧಿಕೃತ ವೆಬ್ಸೈಟ್ ಯಾವುದು? ಫಲಿತಾಂಶ ಪ್ರತಿ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಜೂನ್ 30: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3 (Second PU Exam)ರ ಫಲಿತಾಂಶ ಪ್ರಕಟವಾಗಿದೆ. ದ್ವಿತೀಯ ಪಿಯು ಪರೀಕ್ಷೆ-3ಕ್ಕೆ 1,11,002 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ ಪರೀಕ್ಷೆ-1 ಮತ್ತು 2ರಲ್ಲಿ ಉತ್ತೀರ್ಣರಾಗಿದ್ದ 82,683 ವಿದ್ಯಾರ್ಥಿಗಳೂ ಸಹಿತ ಇದ್ದರು. 1,11,002 ವಿದ್ಯಾರ್ಥಿಗಳ ಪೈಕಿ 22,446 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಂಗಳವಾರ (ಜುಲೈ 1) ಮಧ್ಯಾಹ್ನ 1 ಗಂಟೆ ನಂತರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ PU ಪರೀಕ್ಷೆ-3ರಲ್ಲಿ ಶೇ 20.22 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ದ್ವಿತೀಯ ಪಿಯು ಫಲಿತಾಂಶ ನೋಡುವುದು ಹೇಗೆ?
ದ್ವಿತೀಯ ಪಿಯು ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.
ದ್ವಿತೀಯ ಪಿಯು ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ
- ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
- ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
- ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.
- Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
- ಈಗ ನೀವು ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಇರುತ್ತದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡ ಒಟ್ಟು 6,37,805 ವಿದ್ಯಾರ್ಥಿಗಳಲ್ಲಿ, ಪರೀಕ್ಷೆ 1 ರಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಮತ್ತು 54,168 ವಿದ್ಯಾರ್ಥಿಗಳು ಪರೀಕ್ಷೆ 2ರಲ್ಲಿ ಪಾಸಾಗಿದ್ದರು. ಪರೀಕ್ಷೆ 1 ಮತ್ತು ಪರೀಕ್ಷೆ 2 ಫಲಿತಾಂಶಗಳನ್ನು ಪರಿಗಣಿಸಿ ಉತ್ತೀರ್ಣ ಶೇಕಡಾವಾರು 81.94 ರಷ್ಟು ಆಗಿದೆ. ಕರ್ನಾಟಕ ಪಿಯುಸಿ ಪರೀಕ್ಷೆ 1 ಫಲಿತಾಂಶವನ್ನು ಏಪ್ರಿಲ್ 8 ರಂದು ಘೋಷಿಸಲಾಯಿತು, ಪರೀಕ್ಷೆ 2 ಫಲಿತಾಂಶವನ್ನು ಮೇ 16 ರಂದು ಘೋಷಿಸಲಾಯಿತು.
ಇದನ್ನೂ ಓದಿ: CA ಅಂತಿಮ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ; ಪರಿಶೀಲಿಸುವುದು ಹೇಗೆ?
ಪಿಯುಸಿ ಪರೀಕ್ಷೆ 2 ಮತ್ತು 3 ಏಕೆ?
ವಿದ್ಯಾರ್ಥಿಗಳ ಒಟ್ಟಾರೆ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಹಾಯ ಮಾಡಲು, KSEAB ಮೂರು ಪರೀಕ್ಷಾ ವ್ಯವಸ್ಥೆಯನ್ನು ಪರಿಚಯಿಸಿದೆ. ದ್ವಿತಿಯ ಪಿಯುಸಿ ಪರೀಕ್ಷೆ 1, ಪರೀಕ್ಷೆ 2 ಮತ್ತು ಪರೀಕ್ಷೆ 3. ಮೂರು ಪ್ರಯತ್ನಗಳಲ್ಲಿ, ಹೆಚ್ಚಿನ ಅಂಕಗಳನ್ನು ಅಂತಿಮ ಫಲಿತಾಂಶಕ್ಕೆ ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ







