ಬೆಂಗಳೂರು, ಮೇ 17: ಕರ್ನಾಟಕ ದ್ವಿತೀಯ ಪಿಯುಸಿ (Second PUC) 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ kseab.karnataka.gov.in/ ಇದರಲ್ಲಿ ಪ್ರಕಟಿಸಿದೆ. ಪರೀಕ್ಷೆಯು ಜೂನ್ 6 ರಿಂದ 20 ರ ರವರೆಗೆ ನಡೆಯಲಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ರಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 3 ನೇ ಪರೀಕ್ಷೆಗೆ ಹಾಜರಾಗಬಹುದು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 3 ರ ಹಾಲ್ ಟಿಕೆಟ್ ಅನ್ನು ಮಂಡಳಿಯು ಮೇ ಕೊನೆಯ ವಾರದಲ್ಲಿ ತಾತ್ಕಾಲಿಕವಾಗಿ ಬಿಡುಗಡೆ ಮಾಡುತ್ತದೆ.
2025 ರ ಕರ್ನಾಟಕ ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ. ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆಗಳು ನಡೆಯಲಿವೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ, 3ನೇ ಬಾರಿಯ ಪರೀಕ್ಷೆಗೆ ದಿನಾಂಕ ಘೋಷಣೆ
ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ-2 ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ 3ನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು.
ಶಿಕ್ಷಣ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ