AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಹಿಜಾಬ್​ಗೆ ನಿಷೇಧ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ, ವಿಶೇಷ ಜಾಗೃತದಳ ನಿಯೋಜನೆ

Karnataka 2nd PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಕಡ್ಡಾಯವಾಗಿ ಪಾಲಿಸಬೇಕು.

Rakesh Nayak Manchi
|

Updated on:Mar 09, 2023 | 10:26 AM

Share

ಬೆಂಗಳೂರು: ಪರೀಕ್ಷೆ ಅನ್ನೋದು ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಘಟ್ಟ. ಉನ್ನತ ಶಿಕ್ಷಣಕ್ಕೆ ಟರ್ನಿಂಗ್ ಪಾಯಿಂಟ್. ಇದೀಗ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ (Karnataka 2nd PUC Exams) ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಕೊಂಚ ಢವಢವ ಶುರುವಾಗಿದೆ. ಅದ್ಯಾವುದನ್ನೂ ಟೆನ್ಷನ್ ಮಾಡಿಕೊಳ್ಳದೇ ವಿದ್ಯಾರ್ಥಿಗಳು ಕೂಲ್​ ಆಗಿ ಪರೀಕ್ಷೆ ಬರೆಯಿರಿ. ಹಾಲ್ ಟಿಕೆಟ್, ಪೆನ್, ಪೆನ್ಸಿಲ್ ಇತ್ಯಾದಿ ಅವಶ್ಯ ವಸ್ತುಗಳನ್ನು ಮರೆಯದೆ ತೆಗೆದುಕೊಂಡು ಹೋಗಿ, ಆಲ್​ ದಿ ಬೆಸ್ಟ್. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ. ಆದರೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಕಡ್ಡಾಯವಾಗಿ ಪಾಲಿಸಬೇಕಾಗಿದ್ದು, ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ. ಕಳೆದ ವರ್ಷದ ನಿಯಮವೇ ಈ ಬಾರಿಯೂ ಜಾರಿಯಲ್ಲಿರಲಿದೆ. ರಾಜ್ಯದ 1,109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,716 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಹಿಜಾಬ್ ಧರಿಸಿದರೆ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ, ನಿಷೇಧಾಜ್ಞೆ ಜಾರಿ

ಪರೀಕ್ಷೆಗೆ ಹಾಜರಾಗುವ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ. ಕಳೆದ ವರ್ಷದ ನಿಯಮ ಈ ಬಾರಿಯೂ ಮುಂದುವರಿಯಲಿದ್ದು, ಒಂದೊಮ್ಮೆ ಹಿಜಾಬ್ ಧರಿಸಿ ಬಂದರೆ ಅಂತಹ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಸಮವಸ್ತ್ರ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ಕಳೆದ ವರ್ಷ ಹಿಜಾಬ್​ಗೆ ಪಟ್ಟು ಹಿಡಿದಿದ್ದ 6 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿರಲಿಲ್ಲ. ಪರೀಕ್ಷಾ ಕೇಂದ್ರದ 200 ಮೀಟರ್​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ 1109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತದಳ, 525 ತಾಲೂಕು ಜಾಗೃತ ದಳ ಹಾಗೂ 2373 ವಿಶೇಷ ಜಾಗೃತದಳ ನಿಯೋಜನೆ ಮಾಡಲಾಗುತ್ತದೆ.

ಪರೀಕ್ಷೆಗೆ ಭದ್ರತಾ ಕ್ರಮಗಳು

    • ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
    • ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್
    • ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ
    • ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ
    • ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ
    • ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ
    • ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳ ನಿಷೇಧ
    • ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ
    • ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ
    • ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ
    • ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ
    • ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೆಸಿಕ್ ಮೊಬೈಲ್‌ಫೋನ್ ಬಳಕೆಗೆ ಅನುಮತಿ

ಇದನ್ನೂ ಓದಿ: 2nd PUC Exam: ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ, ಪರೀಕ್ಷೆ ಸರಳೀಕರಣ

ಮಕ್ಕಳ ಅನುಕೂಲಕ್ಕಾಗಿ ಮಲ್ಟಿಪಲ್ ಚಾಯ್ಸ್

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬಾರಿ 20 ಅಂಕಗಳ ಬಹುಆಯ್ಕೆ ಪ್ರಶ್ನೆಗಳು ಇರಲಿವೆ. ಈ ಹಿಂದೆ 5 ಅಥವಾ 6 ಬಹು ಆಯ್ಕೆಯ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಈ ಬಾರಿ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರಲಿದೆ. ಮೌಲ್ಯಮಾಪನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಗ್ರೇಸ್ ಮಾರ್ಕ್ಸ್​​ಗೆ ಸಂಬಂಧಿಸಿಯೂ ತಿದ್ದುಪಡಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದರು. ಅಲ್ಲದೆ, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳ ವಾರ್ಷಿಕ ಬಸ್ ಪಾಸ್ ಅವಧಿ ಮುಕ್ತಾಯವಾಗಿದ್ದರೆ ಚಿಂತಿಸಬೇಕಿಲ್ಲ. ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಉಚಿತವಾಗಿ ಪ್ರಯಾಣ ಮಾಡಬಹುದು.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 am, Thu, 9 March 23

171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ