ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ (result) ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್ ಇದೀಗತಾನೆ ತಿಳಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ವೆಬ್ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.
ಫಲಿತಾಂಶ ಚೆಕ್ ಮಾಡುವುದು ಹೇಗೆ?
ಫಲಿತಾಂಶವನ್ನು ಚೆಕ್ ಮಾಡಲು ವಿದ್ಯಾರ್ಥಿಗಳಿಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೆಬ್ ಸೈಟ್ ವಿಳಾಸವನ್ನು ನೀಡಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ವಿದ್ಯಾರ್ಥಿಗಳ ಮೊಬೈಲ್ ನಂಬರ್‌ಗಳಿಗೆ ಫಲಿತಾಂಶವು ಬರಲಿದೆ. ಜೊತೆಗೆ ಕಾಲೇಜುಗಳಿಗೂ ರಿಸಲ್ಟ್ ಪ್ರತಿಯನ್ನು ಕಳಿಸಿಕೊಡಲಾಗುತ್ತದೆ. ನೀವು ವೆಬ್ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ವೆಬ್ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಳಸಿಕೊಂಡು ಕೂಡ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ವಿಧಾನ:
1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
2. ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
3. ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬಹುದು.
Published On - 4:17 pm, Fri, 17 June 22