Karnataka 2nd PUC Result 2022: ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಫಲಿತಾಂಶದ ಬಗ್ಗೆ ಹೇಳಿದ್ದೇನು?
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹುಬ್ಬಳ್ಳಿಯ ಸಾನಿಕಾ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದುಕೊಂಡಿದ್ದಾಳೆ. ತನ್ನ ಓದುವಿಕೆಗೆ ಶಿಕ್ಷಕಕರ ಹಾಗೂ ಪೋಷಕರ ಪ್ರೋತ್ಸಾಹ ಹೇಗಿತ್ತು ಎಂಬೂದರ ಬಗ್ಗೆ ವಿದ್ಯಾರ್ಥಿನಿ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾಳೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಹುಬ್ಬಳ್ಳಿಯ ಸಾನಿಕಾ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದುಕೊಂಡಿದ್ದಾಳೆ. ಪ್ರಕಟಗೊಂಡ ಫಲಿತಾಂಶದ ಬಗ್ಗೆ ಹಾಗೂ ತನ್ನ ಓದುವಿಕೆಯ ಬಗ್ಗೆ ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾಳೆ. ”ನಾನು ಈ ಫಲಿತಾಂಶವನ್ನು ನಿರೀಕ್ಷಿಸದಿದ್ದರೂ ನನಗೆ ಶಿಕ್ಷಕ ವರ್ಗ ಮತ್ತು ಪೋಷಕರು ಹುರಿದುಂಬಿಸುತ್ತಿದ್ದರು. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ನಿಟ್ಟಿನಲ್ಲಿ ಓದುವಿಕೆಗೆ ಹೆಚ್ಚು ಗಮನಹರಿಸುತ್ತಿದ್ದೆ. ಪರೀಕ್ಷೆಯ ಒತ್ತಡವನ್ನು ಯಾವ ರೀತಿ ಎದುರಿಸಬೇಕು ಎಂದು ಕಾಲೇಜಿನಲ್ಲಿ ಹೇಳಿಕೊಟ್ಟಿದ್ದರಿಂದ ಯಾವುದೇ ಒತ್ತಡ ಇಲ್ಲದೆ ಪರೀಕ್ಷೆಯನ್ನು ಬರೆಯಲು ಸಾಧ್ಯವಾಯಿತು. ಇಂದು ಈ ಸ್ಥಾನದಲ್ಲಿ ನಿಲ್ಲಲು ನನಗೆ ಸೈಕಾಲಜಿ ಶಿಕ್ಷಕಿಯೇ ಕಾರಣ” ಎಂದು ಹೇಳಿದ್ದಾಳೆ.
ಇದನ್ನೂ ಓದಿ: Karnataka 2nd PUC Result 2022: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ