Karnataka 2nd PUC Result 2023: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಚೆಕ್ ಮಾಡಲು ಲಿಂಕ್ ಇಲ್ಲಿದೆ..

ಕರ್ನಾಟಕ ದ್ವಿತೀಯ ಪಿಯುಸಿ ರಿಸಲ್ಟ್​​ 2023: ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಸಹ ತೀವ್ರ ಕುತೂಹಲದಿಂದ ಕಾಯುತ್ತಿದ್ದ 2022-23ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆನ್​ಲೈನ್​ಲ್ಲಿ ಫಲಿತಾಂಶ ಚೆಕ್ ಮಾಡುವುದೇಗೆ? ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್? ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka 2nd PUC Result 2023: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಚೆಕ್ ಮಾಡಲು ಲಿಂಕ್ ಇಲ್ಲಿದೆ..
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Apr 21, 2023 | 10:36 AM

ಬೆಂಗಳೂರು:  ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ(Karnataka 2nd PUC Result 2023) ಪ್ರಕಟವಾಗಿದೆ. ಇಂದು(ಏಪ್ರಿಲ್ 21) ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ 95.33ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: Karnataka 2nd PUC Result 2023 Live: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ಲೈವ್

ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಟಾಸ್ಟ್?

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(95.33ರಷ್ಟು ಫಲಿತಾಂಶ), ಉಡುಪಿ ಜಿಲ್ಲೆಗೆ 2ನೇ ಸ್ಥಾನ(ಶೇಕಡಾ 95.24ರಷ್ಟು ಫಲಿತಾಂಶ), ಕೊಡಗು ಜಿಲ್ಲೆಗೆ 3ನೇ ಸ್ಥಾನದಲ್ಲಿದ್ದರೆ(ಶೇಕಡಾ 90.55ರಷ್ಟು ಫಲಿತಾಂಶ), ಉತ್ತರ ಕನ್ನಡ ಜಿಲ್ಲೆಗೆ 4ನೇ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ.

ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಯಾರು ಟಾಪರ್ಸ್?

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದ NMKRV ಕಾಲೇಜಿನ ವಿದ್ಯಾರ್ಥಿನಿ ತಬಸ್ಸುಮ್ 593 ಅಂಕಗಳೊಂದಿಗೆ ಕರ್ನಾಟಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ- ಆಳ್ವಾಸ್ ಕಾಲೇಜಿನ ಅನನ್ಯಾ 600ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ವಿಜ್ಞಾನ ವಿಭಾಗದಲ್ಲಿ ಕೌಶಿಕ್ 600ಕ್ಕೆ  596 ಅಂಕ ಪಡೆದು ಫಸ್ಟ್ ರ್ಯಾಂಕ್ ಪಡೆದುಕೊಂಡಿದ್ದಾರೆ.

ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?

ಹಂತ 1: ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ (karresults.nic.in/) ಭೇಟಿ ನೀಡಿ

ಹಂತ 2: ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ

ಹಂತ 3: ಫಲಿತಾಂಶದ ಲಿಂಕ್‌ನಲ್ಲಿ ದ್ವಿತೀಯ ಪಿಯುಸಿ ರೋಲ್ ಸಂಖ್ಯೆಯನ್ನು ನಮೂದಿಸಿ

ಹಂತ 4:  ಗೋಚರವಾದ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಮಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು.

ಇನ್ನಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 21 April 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ