2nd PUC Result: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಸಮಯ? ರಿಸಲ್ಟ್ ನೋಡುವುದೇಗೆ? ಇಲ್ಲಿದೆ ವಿವರ
Karnataka PUC 2 Result 2024: ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಇಂದು (ಏ.10) ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು, ಏಪ್ರಿಲ್ 09: ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು (Second PU Result) ಇಂದು (ಏ.10) ಪ್ರಕಟವಾಗುತ್ತದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ವೆಬ್ಸೈಟ್ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತದೆ.
ಫಲಿತಾಂಶ ಪರಿಶೀಲಿಸುವುದು ಹೇಗೆ ಮತ್ತ ಎಲ್ಲಿ?
- karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
- ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
- ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಲ್ಲಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರು ಭಾಗಗಳಲ್ಲಿ ನಡೆಸಲಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ ಶೀಘ್ರ ಪ್ರಕಟ, ಆನ್ಲೈನ್ನಲ್ಲಿ ನೋಡೋದು ಹೇಗೆ? ಇಲ್ಲಿದೆ ವಿವರ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಪ್ರಕಾರ, ಕಳೆದ ವರ್ಷ 7,27,923 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಳೆದ ವರ್ಷ 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.
ಇದನ್ನೂ ಓದಿ: 2nd PUC RESULT: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇವತ್ತಲ್ಲ (ಏ.03), ಇದು ನಕಲಿ ನೋಟಿಸ್
ಗಣಿತದಲ್ಲಿ 2,704 ವಿದ್ಯಾರ್ಥಿಗಳು 100 ಅಂಕ ಗಳಿಸಿದ್ದರೆ, ಕಂಪ್ಯೂಟರ್ ಸೈನ್ಸ್‌ನಲ್ಲಿ 5,335 ಮತ್ತು ಅಕೌಂಟೆನ್ಸಿಯಲ್ಲಿ 3,475 ವಿದ್ಯಾರ್ಥಿಗಳು 100 ಅಂಕ ಗಳಿಸಿದ್ದರು.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:11 pm, Tue, 9 April 24