AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result Websites: ಪಿಯುಸಿ ಫಲಿತಾಂಶ ಪ್ರಕಟ: ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ?

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ಬೇರೆ ಬೇರೆ ವೆಬ್ ಸೈಟ್​ ಗಳು: ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳ ಎಲ್ಲಾ ಕಾಯುವಿಕೆಗೆ ಇಂದು ತೆರೆ ಬೀಳಲಿದೆ. 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಮಧ್ಯಾಹ್ನ 1:30ರ ನಂತರದಲ್ಲಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟವಾಗಲಿದೆ. ಹೀಗಾಗಿ ಮನೆಯಲ್ಲಿ ಈ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ಬೇರೆ ಬೇರೆ ವೆಬ್ ಸೈಟ್ ಗಳು ಲಭ್ಯವಿದೆ. ಹಾಗಾದ್ರೆ ದ್ವಿತೀಯ ಪಿಯುಸಿ ಫಲಿತಾಂಶವು ಯಾವ ವೆಬ್ ಸೈಟ್ ನಲ್ಲಿ ಲಭ್ಯ? ಪಿಯುಸಿ ಫಲಿತಾಂಶ ನೋಡುವುದು ಹೇಗೆ? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka 2nd PUC Result Websites: ಪಿಯುಸಿ ಫಲಿತಾಂಶ ಪ್ರಕಟ: ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 08, 2025 | 12:55 PM

Share

ಬೆಂಗಳೂರು ಏಪ್ರಿಲ್ 8: ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Exam 2025 Result ) ಇಂದು (ಏಪ್ರಿಲ್ 8) ಪ್ರಕಟವಾಗಿದೆ. ಹೌದು, ಕಳೆದ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದಿದ್ದ ಪರೀಕ್ಷೆಯಲ್ಲಿ ರಾಜ್ಯದ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂದು ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಪಿಯುಸಿ ಫಲಿತಾಂಶ ನೋಡಲು ಕಾತುರರಾಗಿದ್ದಾರೆ. ಇಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ (Minister of Primary and Secondary Education Madhu Bangarappa) ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ಯಾವ ಸೈಟ್ ಗಳಲ್ಲಿ ಲಭ್ಯ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು karresults.nic.in, kseab.karnataka.gov.in ಹಾಗೂ digilocker mobile application ಅಥವಾ digilocker.gov.inಈ ಅಧಿಕೃತ ವೆಬ್ ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಇದನ್ನೂ ಓದಿ: ದ್ವಿತೀಯ ಪಿಯುಸಿ ನಂತರ ಯಾವ ಕೋರ್ಸ್ ಆಯ್ಕೆ ಮಾಡಬೇಕು? ವಿಜ್ಞಾನ, ಕಲಾ, ವಾಣಿಜ್ಯ ವಿಭಾಗಕ್ಕೆ ಸಂಬಂಧಿಸಿದ ಬೆಸ್ಟ್​​ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶ ನೋಡುವುದು ಹೇಗೆ?

* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.

* ಸ್ಕ್ರೀನ್ ಮೇಲೆ ಕಾಣುವ 2nd PUC Result 2025 ಎಂಬಲ್ಲಿ ಕ್ಲಿಕ್ ಮಾಡಿ ಲಿಂಕ್ ಓಪನ್ ಮಾಡಿ.

* ತದನಂತರದಲ್ಲಿ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಪಾಸ್ ವರ್ಡ್ ನಮೂದಿಸಿಕೊಳ್ಳಿ.

* ಆ ಬಳಿಕ ಸಬ್ಮಿಟ್‌ ಕೊಟ್ಟರೆ ಫಲಿತಾಂಶ ಸ್ಕ್ರೀನ್ ಮೇಲೆ ಕಾಣುತ್ತದೆ. ಈ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬಹುದು.

ಪಿಯುಸಿ ಪರೀಕ್ಷೆಯಲ್ಲಿ 7.13 ಲಕ್ಷ ವಿದ್ಯಾರ್ಥಿಗಳು ಹಾಜರು

ಕಳೆದ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ರಾಜ್ಯದಲ್ಲಿ ಒಟ್ಟು 7.13 ಲಕ್ಷ ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು