AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2025: ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025: ಸೆಕೆಂಡ್ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಫಲಿತಾಂಶವನ್ನು ಪತ್ರಿಕಾಗೋಷ್ಠಿ ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದೆ. ಆನ್​ಲೈನ್ ಮೂಲಕವೂ ಫಲಿತಾಂಶ ಪರಿಶೀಲಿಸಬಹುದಾಗಿದೆ. ವಿವರಗಳಿಗೆ ಮುಂದೆ ಓದಿ.

Karnataka 2nd PUC Result 2025: ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
Ganapathi Sharma
| Edited By: |

Updated on:Apr 08, 2025 | 8:30 AM

Share

ಬೆಂಗಳೂರು, ಏಪ್ರಿಲ್ 7: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ  (Second PU Exam) ಫಲಿತಾಂಶವನ್ನು ಇಂದು ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದು, ಆ ನಂತರ ವೆಬ್​ಸೈಟ್​​ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21 ರಂದು ಆನ್ಸರ್ ಕೀ (Second PUC Answer Key) ಬಿಡುಗಡೆ ಮಾಡಲಾಗಿತ್ತು.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ನೋಡುವುದು ಎಲ್ಲಿ?

ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.

ಇದನ್ನೂ ಓದಿ
Image
ಪ್ರತಿಭಾವಂತ ಕ್ರಿಕೆಟ್​​ ಆಟಗಾರ ಇಂದು ಐಪಿಎಸ್ ಅಧಿಕಾರಿ
Image
ಸರ್ಕಾರಿ ಶಾಲಾ ಶಿಕ್ಷಕಿ ಎಡವಟ್ಟು: ಕಣ್ಣಿನ ದೃಷ್ಟಿ ಕಳೆದುಕೊಂಡ ಬಾಲಕ
Image
ಪರೀಕ್ಷೆಯ ನಂತರದ ಗೊಂದಲ ನಿವಾರಣೆ, ಸರಿಯಾದ ಕೋರ್ಸ್​ ಆಯ್ಕೆ ಹೇಗೆ?
Image
ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕ ಫಿಕ್ಸ್? ರಿಸಲ್ಟ್ ನೋಡೋದು ಹೇಗೆ?

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ಆನ್​ಲೈನ್​ನಲ್ಲಿ ಪರಿಶೀಲಿಸುವುದು ಹೇಗೆ?

  1. ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
  2. ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
  3. ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
  4. Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
  5. ನಂತರ ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.

ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ

ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆ 2025: ಮುಖ್ಯಾಂಶಗಳು

  • ಪರೀಕ್ಷಾ ಅವಧಿ: ಮಾರ್ಚ್ 1 ರಿಂದ ಮಾರ್ಚ್ 20 ರ ವರೆಗೆ
  • ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ
  • ಫಸ್ಟ್ ಪೇಪರ್: ಕನ್ನಡ ಮತ್ತು ಅರೇಬಿಕ್
  • ಲಾಸ್ಟ್ ಪೇಪರ್: ಹಿಂದಿ
  • ಮಾಡೆಲ್ ಆನ್ಸರ್ ಕೀ: ಮಾರ್ಚ್ 21
  • ಅಧಿಕೃತ ಫಲಿತಾಂಶ ದಿನಾಂಕ: ಇನ್ನಷ್ಟೇ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಫಿಕ್ಸ್? ರಿಸಲ್ಟ್ ನೋಡೋದು ಹೇಗೆಂದು ಇಲ್ಲಿ ನೋಡಿ

ಕಳೆದ ಮೂರು ವರ್ಷಗಳ ದ್ವಿತೀಯ ಪಿಯುಸಿ ಫಲಿತಾಂಶಗಳಲ್ಲಿ ಹುಡುಗಿಯರು ನಿರಂತರವಾಗಿ ಹುಡುಗರಿಗಿಂತ ಮೇಲುಗೈ ಸಾಧಿಸಿದ್ದಾರೆ. 2022 ರಲ್ಲಿ ಶೇ 13.5 ರಷ್ಟು ಗಮನಾರ್ಹ ಅಂತರದೊಂದಿಗೆ ಮೇಲುಗೈ ಸಾಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Mon, 7 April 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ