AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ, ಆನ್​ಲೈನಲ್ಲಿ ನೋಡೋದು ಹೇಗೆಂಬ ಮಾಹಿತಿ ಇಲ್ಲಿದೆ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ: 2026ರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ ನಂಬರ್ ಬಳಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಫಲಿತಾಂಶ ಯಾವಾಗ ಪ್ರಕಟ ಆಗಬಹುದು? ರಿಸಲ್ಟ್ ಅನ್ನು ಆನ್​ಲೈನ್​ನಲ್ಲಿ ನೋಡುವುದು ಹೇಗೆಂಬ ಮಾಹಿತಿ ಇಲ್ಲಿದೆ.

Karnataka 2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ, ಆನ್​ಲೈನಲ್ಲಿ ನೋಡೋದು ಹೇಗೆಂಬ ಮಾಹಿತಿ ಇಲ್ಲಿದೆ
ದ್ವಿತೀಯ ಪಿಯುಸಿ ಫಲಿತಾಂಶImage Credit source: TV9 Network
ಗಣಪತಿ ಶರ್ಮಾ
|

Updated on: Apr 01, 2026 | 3:40 PM

Share

ಬೆಂಗಳೂರು, ಏಪ್ರಿಲ್ 1: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಾರ್ಚ್ 31ರಂದು ಪ್ರಥಮ ಪಿಯುಸಿ ಫಲಿತಾಂಶ ಯಶಸ್ವಿಯಾಗಿ ಪ್ರಕಟಗೊಂಡ ಬೆನ್ನಲ್ಲೇ, ಈಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕೌತುಕ ಹೆಚ್ಚಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಏಪ್ರಿಲ್ ಎರಡನೇ ವಾರದಲ್ಲಿ (ಏಪ್ರಿಲ್ 7 ಅಥವಾ 8) ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.

ಆನ್​ಲೈನ್​ನಲ್ಲಿ ಸೆಕೆಂಡ್ ಪಿಯುಸಿ ಫಲಿತಾಂಶ ನೋಡುವುದು ಹೇಗೆ?

  • ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.
  • ಭವಿಷ್ಯದ ಉಲ್ಲೇಖಕ್ಕಾಗಿ ಇದರ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಫಲಿತಾಂಶದ ನಂತರ ಅಂಕಗಳ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ (Re-evaluation) ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಏಪ್ರಿಲ್ 25 ರಿಂದ ಮೇ ಮೊದಲ ವಾರದವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಮಂಡಳಿ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕರ್ನಾಟಕ ಪ್ರಥಮ ಪಿಯು ಫಲಿತಾಂಶ ಪ್ರಕಟ

2026ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ರಾಜ್ಯದ 1217 ಕೇಂದ್ರಗಳಲ್ಲಿ ನಡೆದಿದ್ದವು. ಈ ಬಾರಿ 7 ಲಕ್ಷಕ್ಕೂ ಹೆಚ್ಚು ಮಂದಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು