ಬೆಂಗಳೂರು: ಏಪ್ರಿಲ್ 22 ರಿಂದ ಮೇ 18ರವರೆಗೆ 2021-22ನೇ ಸಾಲಿನ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಸುಸೂತ್ರವಾಗಿ ಮಾಡಿಮುಗಿಸಿದೆ. ಪರೀಕ್ಷೆ ಮುಗಿದು ತಿಂಗಳು ಕಳೆದರು ಇನ್ನೂ ಫಲಿತಾಂಶ ಮಾತ್ರ ಬಂದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೊಷಕರು ಆತಂಕಕೊಳಗಾಗಿದ್ದಾರೆ. ಜೂನ್ 18ರಂದು ಫಲಿತಾಂಶವನ್ನು ಪ್ರಕಟಿಸಲಿದೆ. ಈ ಬಗ್ಗೆ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿಂದೆ ಜೂನ್ 15 ರೊಳಗೆ ಫಲಿತಾಂಶವನ್ನು ಪ್ರಕಟ ಮಾಡಲು ಶಿಕ್ಷಣ ಇಲಾಖೆ ಎಲ್ಲಾ ತಯಾರಿಯನ್ನು ಮಾಡಿಕೊಂಡಿತ್ತು. ಆದರೆ ಮೌಲ್ಯಮಾಪನಕ್ಕೆ ನೋಂದಣಿ ಮಾಡಿಕೊಂಡ ಮೌಲ್ಯಮಾಪಕರು ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಳದ ಕಾರಣ ಫಲಿತಾಂಶ ಪ್ರಕಟದಲ್ಲಿ ವಿಳಂಭವಾಗಿದೆ. ಇದರ ಮಧ್ಯೆ ಸಾಲು ಸಾಲು ರಜೆಗಳು ಬಂದಿದ್ದು, ಸಮಯಕ್ಕೆ ಸರಿಯಾಗಿ ಮೌಲ್ಯಮಾಪನ ಕಾರ್ಯ ಮಾಡಿ ಮುಗಿಸಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.
ಇದನ್ನೂ ಓದಿ: IT Raid: ಎಂಜಿಎಂ ಕಂಪನಿ ಮೇಲೆ ಐಟಿ ದಾಳಿ, ತೆರಿಗೆ ವಂಚನೆ ದೂರು
2021-22ನೇ ಸಾಲಿನಲ್ಲಿ, ರಾಜ್ಯಾದ್ಯಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದರು. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದರು.
ಫಲಿತಾಂಶ ಚೆಕ್ ಮಾಡುವುದು ಹೇಗೆ?
ಫಲಿತಾಂಶವನ್ನು ಚೆಕ್ ಮಾಡಲು ವಿದ್ಯಾರ್ಥಿಗಳಿಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೆಬ್ ಸೈಟ್ ವಿಳಾಸವನ್ನು ನೀಡಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ವಿದ್ಯಾರ್ಥಿಗಳ ಮೊಬೈಲ್ ನಂಬರ್‌ಗಳಿಗೆ ಫಲಿತಾಂಶವು ಬರಲಿದೆ. ಜೊತೆಗೆ ಕಾಲೇಜುಗಳಿಗೂ ರಿಸಲ್ಟ್ ಪ್ರತಿಯನ್ನು ಕಳಿಸಿಕೊಡಲಾಗುತ್ತದೆ. ನೀವು ವೆಬ್ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ವೆಬ್ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಳಸಿಕೊಂಡು ಕೂಡ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ: Live: ಜೂನ್ 18ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ
ವಿಧಾನ:
1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
2. ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
3. ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬಹುದು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:13 am, Wed, 15 June 22