AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2022: ಇಂದು ಕರ್ನಾಟಕ ದ್ವಿತೀಯ ಪಿಯುಸಿ ರಿಸಲ್ಟ್; 11 ಗಂಟೆಗೆ www.karresults.nic.in ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ವಿದ್ಯಾರ್ಥಿಗಳು ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ವೆಬ್‌ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.

Karnataka 2nd PUC Result 2022: ಇಂದು ಕರ್ನಾಟಕ ದ್ವಿತೀಯ ಪಿಯುಸಿ ರಿಸಲ್ಟ್; 11 ಗಂಟೆಗೆ www.karresults.nic.in ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 18, 2022 | 8:30 AM

Share

ಬೆಂಗಳೂರು: ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ (result) ಬೆಳಿಗ್ಗೆ 11 ಗಂಟೆಗೆ  www.karresults.nic.in  ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್‌ ತಿಳಿಸಿದೆ.  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಅವರು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ kseeb.kar.nic.in, pue.kar.nic.in ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ಪಿಯುಸಿ ಫಲಿತಾಂಶವನ್ನೂ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್‌ ಸಂಖ್ಯೆಗೂ ಕಳುಹಿಸಲಾಗುತ್ತದೆ.

ಇದನ್ನೂ ಓದಿ: Horoscope Today- ದಿನ ಭವಿಷ್ಯ; ಇಂದು ತುಲಾ ರಾಶಿಯವರು ತಮ್ಮ ಜೀವನದಲ್ಲಿ ಸುವರ್ಣ ಕ್ಷಣಗಳನ್ನು ಅನುಭವಿಸಲಿದ್ದೀರಿ

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶ ಚೆಕ್‌ ಮಾಡುವುದು ಹೇಗೆ?

ಫಲಿತಾಂಶವನ್ನು ಚೆಕ್‌ ಮಾಡಲು ವಿದ್ಯಾರ್ಥಿಗಳಿಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೆಬ್‌ ಸೈಟ್‌ ವಿಳಾಸವನ್ನು ನೀಡಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ವಿದ್ಯಾರ್ಥಿಗಳ ಮೊಬೈಲ್ ನಂಬರ್‌ಗಳಿಗೆ ಫಲಿತಾಂಶವು ಬರಲಿದೆ. ಜೊತೆಗೆ ಕಾಲೇಜುಗಳಿಗೂ ರಿಸಲ್ಟ್‌ ಪ್ರತಿಯನ್ನು ಕಳಿಸಿಕೊಡಲಾಗುತ್ತದೆ. ನೀವು ವೆಬ್‌ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ವೆಬ್‌ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಳಸಿಕೊಂಡು ಕೂಡ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: Live: ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ವಿಧಾನ:

1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.

2. ಓಪನ್‌ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತದೆ.

3. ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರಕಟಗೊಳ್ಳುತ್ತದೆ ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಬಹುದು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 am, Sat, 18 June 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು