AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Results 2026 Toppers: ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ಯಾರು? ಇಲ್ಲಿದೆ ವಿಭಾಗವಾರು ಕಂಪ್ಲೀಟ್​​ ಮಾಹಿತಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಟಾಪರ್: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025-26 ಪ್ರಕಟವಾಗಿದ್ದು, ದಾಖಲೆಯ 86% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ 13% ಸುಧಾರಣೆ ಕಂಡಿದೆ. 7.10 ಲಕ್ಷ ವಿದ್ಯಾರ್ಥಿಗಳಲ್ಲಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಿದ್ದು, ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಲ್ಲಿ ಮತ್ತು ಬಾಲಕ-ಬಾಲಕಿಯರ ಸಾಧನೆಯ ವಿವರಗಳನ್ನು ನೀಡಿದ್ದಾರೆ.

2nd PUC Results 2026 Toppers: ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ಯಾರು? ಇಲ್ಲಿದೆ ವಿಭಾಗವಾರು ಕಂಪ್ಲೀಟ್​​ ಮಾಹಿತಿ
ಪ್ರಿನ್ಸಿಲ್ಲಾ ಮತ್ತು ದಿಶಾImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Apr 09, 2026 | 7:43 PM

Share

ಬೆಂಗಳೂರು, ಏಪ್ರಿಲ್​​ 09: 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದುಮ ಶೇಕಡಾ 86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದಿದ್ದ 6,32,200 ಮಂದಿ ಪೈಕಿ 5,46,698 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ದಾಖಲೆ ಮಟ್ಟದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಏರಿಕೆ ಕಂಡಿದೆ. ಕಳೆದ ವರ್ಷ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ಪ್ರಸಕ್ತ ಸಾಲಿನಲ್ಲಿ ಶೇಕಡಾ 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದಬಾರಿಗಿಂತ ಈ ಬಾರಿ ಶೇಕಡಾ 13ರಕ್ಕಿಂತಲೂ ಹೆಚ್ಚು ಪ್ರತಿಶತ ಫಲಿತಾಂಶದಲ್ಲಿ ಸುಧಾರಣೆ ಆಗಿದೆ ಎಂದಿದ್ದಾರೆ.

ಕಲಾ ವಿಭಾಗದಲ್ಲಿ ಶೇ.72.86, ವಾಣಿಜ್ಯ ವಿಭಾಗದಲ್ಲಿ ಶೇ.88.04 ಮತ್ತು ವಿಜ್ಞಾನ ವಿಭಾಗದಲ್ಲಿ ಶೇ.86.48 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಪೈಕಿ ಶೇ. 83.65ರಷ್ಟು ಬಾಲಕರು ಮತ್ತು ಶೇ. 88.70ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. 44 ಸಾವಿರ ಮಕ್ಕಳು ಒಂದು ವಿಷಯದಲ್ಲಿ ಫೇಲ್​​ ಆಗಿದ್ದರೆ, ಎರಡು ಸಬ್ಜೆಕ್ಟ್​​ಗಳಲ್ಲಿ 18 ಸಾವಿರ ಮಕ್ಕಳು ಅನುತ್ತೀರ್ಣರಾಗಿದ್ದಾರೆ. ಹಾಗೆಯೇ ಎಲ್ಲ ವಿಷಯಗಳಲ್ಲಿಯೂ ಫೇಲ್​​ ಆದವರ ಸಂಖ್ಯೆ 1,772ಕ್ಕೆ ಇಳಿದಿದೆ ಎಂದು ಅವರು ತಿಳಿಸಿದ್ದಾರೆ. 1,70,529 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​​, 2,95,385 ವಿದ್ಯಾರ್ಥಿಗಳು ಪ್ರಥಮ ದರ್ಜೆ 63,957 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು ಶೇಕಡಾ 50ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳ ಸಂಖ್ಯೆ 63,957 ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಬಾರಿ ಮೂರನೇ ಪರಿಕ್ಷೆ ಇರುವುದಿಲ್ಲ ಎಂದೂ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC District Wise Result 2026; ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್

ವಿಜ್ಞಾನ ವಿಭಾಗದಲ್ಲಿ ಸಾಧನೆ

  • 600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿಗಳು- 01
  • 600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು-12
  • 600ಕ್ಕೆ 597 ಅಂಕ ಪಡೆದ ವಿದ್ಯಾರ್ಥಿಗಳು-19

ದಕ್ಷಿಣ ಕನ್ನಡದ ಕಾವೂರಿನ ದಿ ಲರ್ನಿಂಗ್​​ ಸೆಂಟರ್​​ ಪಿಯು ಕಾಲೇಜಿನ ಪ್ರಿನ್ಸಿಲ್ಲಾ 600ಕ್ಕೆ 599 ಅಂಕ ಪಡೆಯುವ ಮೂಲಕ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಸಾಧನೆ

  • 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು- 02
  • 600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿಗಳು- 02
  • 600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು- 06

ಬೆಂಗಳೂರಿನ ವಿವಿ ಪುರಂನ ಎಸ್​​ಬಿ ಮಹಾವೀರ ಜೈನ್​​ ಪಿಯು ಕಾಲೇಜಿನ ಅದಿತಿ, ಮೂಡುಬಿದಿರೆಯ ಆಳ್ವಾಸ್​​ ಕಾಲೇಜಿನ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಸಾಧನೆ

  • 600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು- 03
  • 600ಕ್ಕೆ 595 ಅಂಕ ಪಡೆದ ವಿದ್ಯಾರ್ಥಿಗಳು- 05
  • 600ಕ್ಕೆ 594 ಅಂಕ ಪಡೆದ ವಿದ್ಯಾರ್ಥಿಗಳು- 08

ಕೊಟ್ಟೂರಿನ ಇಂದು ಪಿಯು ಕಾಲೇಜಿನ ಅರ್ಚನಾ, ಸಂಗೀತಾ ಮತ್ತು ಕಲಬುರಗಿಯ ಎಸ್​​ಎಂವಿಟಿ ವಿಜಿ ಮಹಿಳಾ ಪಿಯು ಕಾಲೇಜಿನ ಶ್ರುತಿ 600ಕ್ಕೆ 598 ಅಂಕಗಳನ್ನು ಪಡೆಯುವ ಮೂಲಕ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:40 pm, Thu, 9 April 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?