Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಹೊಸ ನಿಯಮ ತರಲು ಮುಂದಾದ ಕೆಇಎ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಕೌನ್ಸೆಲಿಂಗ್‌ನಲ್ಲಿನ ಅಕ್ರಮಗಳನ್ನು ತಡೆಯಲು 2025ರಿಂದ ಎಲ್ಲಾ ಪ್ರವೇಶ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ. ಇದು ಸೀಟ್ ಬ್ಲಾಕಿಂಗ್, ನಕಲಿ ಅರ್ಜಿಗಳು ಮತ್ತು ಇತರ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದ್ದಾರೆ.

ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಹೊಸ ನಿಯಮ ತರಲು ಮುಂದಾದ ಕೆಇಎ
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಹೊಸ ನಿಯಮ ತರಲು ಮುಂದಾದ ಕೆಇಎ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 29, 2025 | 7:26 PM

ಬೆಂಗಳೂರು, ಜನವರಿ 29: ಪಿಯುಸಿ ನಂತರ ಭವಿಷ್ಯದ ವೃತ್ತಿ ಆಯ್ಕೆಗೆ ಪೂರಕವಾದ ಶಿಕ್ಷಣ ಆಯ್ಕೆ ಮಾಡಲು ಸಿಇಟಿ (CET) ಪರೀಕ್ಷೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿ ಬರೆಯಲೇಬೇಕು. ಆದರೆ ಇತ್ತೀಚೆಗೆ ಸಿಇಟಿ ಕೌನ್ಸೆಲಿಂಗ್​​​ನಲ್ಲಿ ಸೀಟ್ ಬ್ಲಾಕಿಂಗ್, ಹೆಚ್ಚು ಹಣ ನೀಡಿದವರಿಗೆ ಸೀಟು ನೀಡುವ ದಂಧೆಗಳು ನಡೆದಿದ್ದು ಕಂಡುಬಂದಿತ್ತು. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮುಂದಾಗಿದ್ದು, ಕಠಿಣ ಸೇರಿದಂತೆ ಕೆಲ ಹೊಸ ನಿಯಮಗಳನ್ನು ತರಲು ಮುಂದಾಗಿದೆ.

2023 ಮತ್ತು 2024ರ ಸಿಇಟಿ ಕೌನ್ಸೆಲಿಂಗ್​ನಲ್ಲಿ ಸೀಟ್ ಬ್ಲಾಕಿಂಗ್ ಹಗರಣಗಳು ನಡೆದಿದ್ದವು. ಹಾಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗಳಾದ ಸಿಇಟಿ, ನೀಟ್ ಮತ್ತು ಇತರ ನೇಮಕಾತಿ ಪರೀಕ್ಷೆಗಳಂತಹ ಪ್ರವೇಶ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ ತರಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.

ಇದನ್ನೂ ಓದಿ: NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?

ಈ ಕುರಿತಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇ-ಆಡಳಿತ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಅನುಮೋದಿಸಿದ ನಂತರ 2025 ರಿಂದ ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ ತರಲು ಪ್ರಾಧಿಕಾರ ನಿರ್ಧರಿಸಿದೆ. ಆದರೆ ಇದನ್ನು ಜಾರಿಗೆ ತರಲು ಕೆಲವು ನಿಯಮಗಳನ್ನು ತಿದ್ದುಪಡಿ ಮಾಡಬೇಕಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್​​ ಪ್ರಸನ್ನ ಹೇಳಿದ್ದಿಷ್ಟು

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದ ತಕ್ಷಣ, ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಕಳುಹಿಸಲಾಗುತ್ತದೆ. ಈ ಒಟಿಪಿಯನ್ನು ನೇರವಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ (ಯುಐಡಿಎಐ) ಪಡೆಯಲಾಗುತ್ತದೆ. ಈ ಒಟಿಪಿಯನ್ನು ನಮೂದಿಸಿದ ನಂತರ ಅಪ್ಲಿಕೇಶನ್ ಮುಂದಿನ ಹಂತಕ್ಕೆ ಹೋಗುತ್ತದೆ. ಒಂದು ವೇಳೆ ತಪ್ಪಾದ ನಂಬರ್​ ಹಾಕಿದ್ದಲ್ಲಿ ಅರ್ಜಿಯು ಮುಂದುವರಿಯುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್​​ ಪ್ರಸನ್ನ ಅವರು ತಿಳಿಸಿದ್ದಾರೆ.

ಇದು ವೃತ್ತಿಪರ ಕೋರ್ಸ್‌ಗಳಿಗೆ ಸೀಟು ಹಂಚಿಕೆಯಲ್ಲಿನ ಅಕ್ರಮಗಳನ್ನು ತಡೆಗಟ್ಟುವುದು ಮಾತ್ರವಲ್ಲದೆ, ನೇಮಕಾತಿ ಪರೀಕ್ಷೆಗಳಲ್ಲಿ ಬೆಳಕಿಗೆ ಬಂದಿರುವ ನಕಲಿ ಅರ್ಜಿಗಳು, ಪರೀಕ್ಷೆಗಳಲ್ಲಿನ ಇತರೆ ಅಕ್ರಮಗಳನ್ನು ತಡೆಯಲು ಸಹಾಯವಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: UPSC ನಾಗರಿಕ ಸೇವೆಗಳ ಪರೀಕ್ಷೆಯ ಅಧಿಸೂಚನೆ ಬಿಡುಗಡೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಸಿಇಟಿ ಸೇರಿದಂತೆ ಇತರೆ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಹೆಚ್ಚಿನ ವಿದ್ಯಾರ್ಥಿಗಳು ಸೈಬರ್ ಕೆಫೆಗಳನ್ನು ಅವಲಂಬಿಸಿದ್ದಾರೆ. ಒಟಿಪಿ ಪಡೆಯಲು ಸೈಬರ್ ಕೇಂದ್ರದ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಅನೇಕ ಅರ್ಜಿಗಳನ್ನು ಸಲ್ಲಿಸುವುದು ಸಾಮಾನ್ಯವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಬಗ್ಗೆ ಅಗತ್ಯ ಮಾಹಿತಿ ಸಿಗುವುದಿಲ್ಲ. ಸೀಟ್ ಬ್ಲಾಕ್ ಮಾಡಲು ಈ ಸಂಖ್ಯೆಯನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಗಳಿವೆ. ಹಾಗಾಗಿ ಆಧಾರ್ ಅನ್ನು ಕಡ್ಡಾಯಗೊಳಿಸುವ ಮೂಲಕ ಇದನ್ನು ತಡೆಯುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ