KCET Results 2026: ಇಂದು ಪ್ರಕಟವಾಗಲಿದೆ ಕೆಸಿಇಟಿ ಫಲಿತಾಂಶ; ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ

ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ಕರ್ನಾಟಕ UGCET ಫಲಿತಾಂಶವು ಇಂದು (ಜೂನ್ 6) ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಬಿಡುಗಡೆ ಮಾಡಲಿದೆ. ವೈದ್ಯಕೀಯ ಶಿಕ್ಷಣ ಸಚಿವರು ಟಾಪರ್‌ಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಬಳಸಿ ಫಲಿತಾಂಶ ವೀಕ್ಷಿಸಬಹುದು.

KCET Results 2026: ಇಂದು ಪ್ರಕಟವಾಗಲಿದೆ ಕೆಸಿಇಟಿ ಫಲಿತಾಂಶ; ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ
ಇಂದು 'ಕೆಸಿಇಟಿ-2026' ಫಲಿತಾಂಶ ಪ್ರಕಟ
Image Credit source: Pinterest

Updated on: Jun 06, 2026 | 8:44 AM

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವು ಇಂದು (ಜೂನ್ 6, ಶನಿವಾರ) ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ:

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ 12:00 ಗಂಟೆಗೆ ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಾಗೂ ಟಾಪರ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಕೆಸಿಇಟಿ ರಿಸಲ್ಟ್ ಪ್ರಕಟ; ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಡಿಟೇಲ್ಸ್!

ಮಧ್ಯಾಹ್ನ 2 ಗಂಟೆಯ ನಂತರ ರಿಸಲ್ಟ್ ಲಭ್ಯ:

ಸುದ್ದಿಗೋಷ್ಠಿ ಮುಗಿದ ಬಳಿಕ, ಮಧ್ಯಾಹ್ನ 2:00 ಗಂಟೆಯ ನಂತರ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಫಲಿತಾಂಶ ಹಾಗೂ ರ‍್ಯಾಂಕ್ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಒಂದೇ ಬಾರಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್ ಆಗುವುದರಿಂದ ಸರ್ವರ್ ನಿಧಾನವಾಗುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೊಂಚ ಸಮಯ ಕಾಯ್ದು ಪರ್ಯಾಯ ಲಿಂಕ್‌ಗಳ ಮೂಲಕ ಪ್ರಯತ್ನಿಸಬೇಕಾಗಿ ವಿನಂತಿಸಲಾಗಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us