KCET Results 2022: ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ವಿದ್ಯಾರ್ಥಿನಿಯರದ್ದೇ ಮೇಲುಗೈ

ಕರ್ನಾಟಕ ಸಿಇಟಿ ಫಲಿತಾಂಶ 2022: 2021-22ನೇ ಸಾಲಿನ ಸಿಇಟಿ (CET) ಪರೀಕ್ಷಾ ಫಲಿತಾಂಶವನ್ನು ಸಚಿವ ಅಶ್ವತ್ಥ್​ ನಾರಾಯಣ ಪ್ರಕಟಿಸಿದರು. Kea.kar.nic.in ಮತ್ತು karesults.nic.in ಫಲಿತಾಂಶ ಲಭ್ಯ.

KCET Results 2022: ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ವಿದ್ಯಾರ್ಥಿನಿಯರದ್ದೇ ಮೇಲುಗೈ
KCET Results 2022
Follow us
| Edited By: ಗಂಗಾಧರ​ ಬ. ಸಾಬೋಜಿ

Updated on:Jul 30, 2022 | 11:27 AM

ಬೆಂಗಳೂರು: 2021-22ನೇ ಸಾಲಿನ ಸಿಇಟಿ (CET) ಪರೀಕ್ಷಾ ಫಲಿತಾಂಶವನ್ನು ಸಚಿವ ಅಶ್ವತ್ಥ್​ ನಾರಾಯಣ ಪ್ರಕಟಿಸಿದರು. ಈ ಬಾರಿಯ ಸಿಇಟಿಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಒಟ್ಟು 83 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, 88 ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಈ ಭಾರಿ ಸಿಇಟಿ ಫಲಿತಾಂಶದಲ್ಲಿ ತೇರ್ಗಡೆ ಹೊಂದಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ 1,71,656 ರ್ಯಾಂಕ್​​​, ಕೃಷಿ ಕೋರ್ಸ್​ಗೆ 1,39,968 ರ್ಯಾಂಕ್, ಪಶುಸಂಗೋಪನೆ 1,42,2820 ಯೋಗ ಮತ್ತು ನ್ಯಾಚುರೋಪತಿ 1,42,750 ರ್ಯಾಂಕ್, ಬಿ.ಫಾರ್ಮ್ ಕೋರ್ಸ್ ಮತ್ತು ಫಾರ್ಮ-ಡಿ ಕೋರ್ಸಿಗೆ 1,74,568 ರ್ಯಾಂಕ್ ಬಂದಿದೆ. Kea.kar.nic.in ಮತ್ತು karesults.nic.in ಫಲಿತಾಂಶ ಪ್ರಕಟ ಮಾಡಲಾಗಿದೆ.

ಇಂಜಿನಿಯರಿಂಗ್ ಕೋರ್ಸ್

ಯಲಹಂಕ ನ್ಯಾಷನಲ್ ಪಬ್ಲಿಕ್ ಸ್ಕೂಲ್​ ವಿದ್ಯಾರ್ಥಿ  ಅಪೂರ್ವ ತಂಡೋನ್ 97% ಪ್ರಥಮ ರ್ಯಾಂಕ್ ಪಡೆದಿದ್ದು, ಮಾರತ್ತಹಳ್ಳಿ ಶ್ರೀ ಚೈತನ್ಯ ಟೆಕ್ನೊ ಸ್ಕೂಲ್  ವಿದ್ಯಾರ್ಥಿ  ಸಿದ್ದಾರ್ಥ ಸಿಂಗ್ 96% ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಅತ್ಮಕುರಿ ವೆಂಕಟ ತೃತಿಯ ರ್ಯಾಂಕ್ ಪಡೆದುಕೊಂಡಿದ್ದಾರೆ.

ನ್ಯಾಚುರೋಪರಿ ಮತ್ತು ಯೋಗ

ನ್ಯಾಷನಲ್ ಸೆಂಟರ್ ಫಾರ್ ಎಕ್ಸ್ಲೆನ್ಸ್ ಹೃಷಿಕೇಶ್ 98% ಪ್ರಥಮ ರ್ಯಾಂಕ್ ಪಡೆದರೆ, ಉಡುಪಿಯ ಮಾದವ ಕೃಪ ಇಂಗ್ಲೀಷ್ ಸ್ಕೂಲ್ ವಿದ್ಯಾರ್ಥಿ ವ್ರಜೇಶ್, 96% ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಶ್ರೀ ಚೈತನ್ಯ ಟೆಕ್ನೊ ಸ್ಕೂಲ್​ನ ಕೃಷ್ಣ, 96% ತೃತೀಯ ರ್ಯಾಂಕ್ ಪಡೆದುಕೊಂಡಿದ್ದಾರೆ.

B.sc ಅಗ್ರಿಕಲ್ಚರ್

HAL ಪಬ್ಲಿಕ್ ಸ್ಕೂಲ್​ನ ಅರ್ಜುನ್, 93%, ಶ್ರೀ ಚೈತನ್ಯ ಟೆಕ್ನೊ ಸ್ಕೂಲ್, ಉಲ್ಲಾಳ ಸುಮೀತ್, 92%, ತುಮಕೂರು ವಿದ್ಯಾನಿಕೇತನ ಪಿಯು ಕಾಲೇಜ್ ಸುದೀಪ್ 92%. ಸಿಇಟಿ ಪರೀಕ್ಷೆಯಲ್ಲಿ ಒಟ್ಟು 7 ಅಂಕ ಕೃಪಾಂಕ ನೀಡಲಾಗಿದೆ.

B.v.sc (ವೆಟರ್ನರಿ ಸೈನ್ಸ್)

ನ್ಯಾಷನಲ್ ಸೆಂಟರ್ ಫಾರ್ ಎಕ್ಸ್ಲೆನ್ಸ್, ಬೆಂಗಳೂರು ಹೃಷಿಕೇಶ್, 98%, ಪ್ರಥಮ ರ್ಯಾಂಕ್ ಪಡೆದಿದ್ದು, ಶ್ರೀ ಚೈತನ್ಯ ಟೆಕ್ನೊ ಸ್ಕೂಲ್, ಕೆ.ಆರ್.ಪುರ ಮನೀಶ್, 97%, ದ್ವಿತೀಯ ರ್ಯಾಂಕ್​ ಶುಭಾ ಕೌಶಿಕ್, 96%, ತೃತೀಯ ರ್ಯಾಂಕ್ ಪಡೆದಿದ್ದಾರೆ. ಸೆಪ್ಟೆಂಬರ್ 1 ರಿಂದ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ಆರಂಭವಾಗಲಿದೆ.

KCET ಫಲಿತಾಂಶ 2022 ಅನ್ನು ಹೇಗೆ ಪರಿಶೀಲಿಸುವುದು?: – ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ kea.kar.nic.inಗೆ ಭೇಟಿ ನೀಡಿ

– ವೆಬ್​ಸೈಟ್​​ನಲ್ಲಿ ಮುಖಪುಟದಲ್ಲಿ ‘KCET ಫಲಿತಾಂಶ 2022’ ಮೇಲೆ ಕ್ಲಿಕ್ ಮಾಡಿ

– ಲಾಗ್ ಇನ್ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮೂದಿಸಿ

– ಆಗ ನಿಮ್ಮ KCET ಫಲಿತಾಂಶಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ

– ರಿಸಲ್ಟ್​ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್‌ಔಟ್ ತೆಗೆದುಕೊಳ್ಳಿ

Published On - 10:37 am, Sat, 30 July 22

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ