AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಫಲಿತಾಂಶ ಪ್ರಕಟ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ: ರಿಸಲ್ಟ್​​ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಟ

ಎಂಜಿನಿಯರ್​​ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಏಪ್ರಿಲ್​​ನಲ್ಲಿ ನಡೆದಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ಆದರೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಫಲಿತಾಂಶ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. KEA ಸದ್ಯ ಪರ್ಯಾಯ ವ್ಯವಸ್ಥೆಯೊಂದು ಕಲ್ಪಿಸಿದೆ.

ಸಿಇಟಿ ಫಲಿತಾಂಶ ಪ್ರಕಟ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ: ರಿಸಲ್ಟ್​​ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಟ
ಪ್ರಾತಿನಿಧಿಕ ಚಿತ್ರImage Credit source: jagranjosh.com
Vinay Kashappanavar
| Edited By: |

Updated on: Jun 06, 2026 | 4:14 PM

Share

ಬೆಂಗಳೂರು, ಜೂನ್​​ 06: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET) ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಬಾರಿ ಕೂಡ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಇದೀಗ ತಾಂತ್ರಿಕ ಸಮಸ್ಯೆ ಒಂದು ಎದುರಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಫಲಿತಾಂಶ ನೋಡಬಹುದು ಎಂದು ಕೆಇಎ ಹೇಳಿತ್ತು, ಆದರೆ ತಾಂತ್ರಿಕ ಸಮಸ್ಯೆಯಿಂದ ಸಿಇಟಿ ಫಲಿತಾಂಶ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಮುಖ್ಯಾಂಶಗಳು

  • ಸಿಇಟಿ ಫಲಿತಾಂಶ ಪ್ರಕಟ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ
  • ಸಿಇಟಿ ಫಲಿತಾಂಶ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಟ
  • ವಾಟ್ಸಾಪ್ ಮೂಲಕ ಫಲಿತಾಂಶ ಕಳುಹಿಸುವುದಾಗಿ KEA ಭರವಸೆ

ವಾಟ್ಸಾಪ್ ಮೂಲಕ ಫಲಿತಾಂಶ: KEA ಭರವಸೆ

ಸದ್ಯ ತಾಂತ್ರಿಕ ಸಮಸ್ಯೆಯಿಂದಾಗಿ ಲಾಗಿನ್ ಪ್ರಕ್ರಿಯೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಗಂಟೆ ವೆಬ್​ಸೈಟ್​ಗೆ ಲಾಗಿನ್ ಆಗದಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಪರ್ಯಾಯ ವ್ಯವಸ್ಥೆಯಾಗಿ ಪ್ರತಿ ವಿದ್ಯಾರ್ಥಿಯ ಫಲಿತಾಂಶವನ್ನು ಅವರ ವಾಟ್ಸಾಪ್​​ಗೆ ನೇರವಾಗಿ ಕಳುಹಿಸಿಕೊಡುವುದಾಗಿ ಪ್ರಾಧಿಕಾರ ಭರವಸೆ ನೀಡಿದೆ.

ಇದನ್ನೂ ಓದಿ: KCET Result 2026: ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ..

ಏಪ್ರಿಲ್​​ 22 ರಿಂದ 24ರವರೆಗೆ ನಡೆದಿದ್ದ ಯುಜಿ ಸಿಇಟಿ 2026ರ ಫಲಿತಾಂಶ ಇಂದು ಹೊರಬಿದ್ದಿದೆ. ಕೃಷಿ ವಿಭಾಗದಲ್ಲಿ ಬೆಂಗಳೂರಿನ ಜಯನಗರದ ಆರ್.ವಿ. ಪಿಯು ಕಾಲೇಜಿನ ವಿದ್ಯಾರ್ಥಿ ನಿನಾದ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಧಾರವಾಡದ ಅರ್ಜುನ್ ಸೈನ್ಸ್ ಕಾಲೇಜಿನ ಅನ್ಮೋಲ್ ದ್ವಿತೀಯ ಸ್ಥಾನ ಗಳಿಸಿದರೆ, ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ಎ.ಎಸ್. ಸಮಯ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್​​ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್​​ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು,​ ಈ ವರ್ಷ ಒಟ್ಟು 3.36 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 3,09,014 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಒಟ್ಟು 2,92,782 ವಿದ್ಯಾರ್ಥಿಗಳು ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಹತೆ ಪಡೆದಿದ್ದಾರೆ. ಜೊತೆಗೆ ಈ ಬಾರಿಯ ಪರೀಕ್ಷೆಯ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಲ್ಲಿ ಅಭ್ಯರ್ಥಿಗಳಿಗೆ ತಲಾ ಒಂದು ಕೃಪಾಂಕವನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Vinay Kashappanavar
Vinay Kashappanavar