Karnataka SSLC Result Websites: ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟ: ಫಲಿತಾಂಶ ಯಾವ ಸೈಟ್ ಗಳಲ್ಲಿ ಲಭ್ಯ? ಇಲ್ಲಿದೆ ಮಾಹಿತಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ​ ಫಲಿತಾಂಶ ನೋಡಲು ಬೇರೆ ಬೇರೆ ವೆಬ್ ಸೈಟ್​ ಗಳು : ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದು ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾದು ಕುಳಿತ್ತಿದ್ದು, 2024-25ನೇ ಸಾಲಿನ ಎಸ್​​ಎಸ್​ಎಲ್​​ಸಿ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಡೆದುಕೊಂಡ ಮಾರ್ಕ್ ಎಷ್ಟು ಎಂದು ಮಧ್ಯಾಹ್ನ 12.30ರ ನಂತರ ಆನ್​​ಲೈನ್​ನಲ್ಲಿಯೂ ವೀಕ್ಷಿಸಬಹುದಾಗಿದ್ದು, ಹಾಗಾದ್ರೆ ಎಸ್ ಎಸ್ ಎಲ್ ಸಿ ಫಲಿತಾಂಶವು ಯಾವೆಲ್ಲಾ ವೆಬ್ಸೈಟ್ ನಲ್ಲಿ ಲಭ್ಯವಿದೆ. ಫಲಿತಾಂಶ ನೋಡುವುದು ಹೇಗೆ? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka SSLC Result Websites: ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟ: ಫಲಿತಾಂಶ ಯಾವ ಸೈಟ್ ಗಳಲ್ಲಿ ಲಭ್ಯ? ಇಲ್ಲಿದೆ ಮಾಹಿತಿ
Karnataka SSLC Result 2025

Updated on: May 02, 2025 | 12:02 PM

kseab.karnataka.gov.in – Karnataka KSEAB Class10 Result 2025

ಬೆಂಗಳೂರು ಮೇ 2: ವಿದ್ಯಾರ್ಥಿಗಳು ಬಹುನಿರೀಕ್ಷೆಯಿಂದ ಕಾಯುತ್ತಿರುವ ಎಸ್ ಎಸ್ ಎಲ್ ಸಿ ಫಲಿತಾಂಶ (Karnataka KSEAB Class10 Result 2025) ಪ್ರಕಟಣೆಗೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್‌ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. ಅವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಮಧ್ಯಾಹ್ನ 12.30ರ ನಂತರದಲ್ಲಿ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

ಎಸ್ ಎಸ್ ಎಲ್ ಸಿ ಫಲಿತಾಂಶ ಯಾವ ಸೈಟ್ ಗಳಲ್ಲಿ ಲಭ್ಯ

ಬಹುನಿರೀಕ್ಷೆಯಿಂದ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ಕಾಯುವಿಕೆಗೆ ಇಂದು ತೆರೆ ಬೀಳಲಿದೆ. ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವು ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಗೊಳ್ಳಲಿದೆ. ಹೀಗಾಗಿ ವಿದ್ಯಾರ್ಥಿಗಳು kseab.karnataka.gov.in ಅಥವಾ karresults.nic.in/ ಹಾಗೂ sslc.karnataka.gov.in ಈ ಮೂರು ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಅದಲ್ಲದೇ, ಎಸ್ ಎಂ ಎಸ್ ಮೂಲಕ ಕೂಡ ಫಲಿತಾಂಶವನ್ನು ಪರಿಶೀಲಿಸುವ ಅವಕಾಶವು ಇದೆ. ಹೌದು, ನಿಮ್ಮ ಮೊಬೈಲ್ ಫೋನ್ ನಲ್ಲಿ KAR 10 ಎಂದು ಬರೆದು ಸ್ಪೇಸ್ ಕೊಟ್ಟು ನೋಂದಣಿ ಸಂಖ್ಯೆಯನ್ನು ನಮೂದಿಸಿ 56263ಗೆ ಸಂದೇಶ ಕಳುಹಿಸಿ. ಸ್ವಲ್ಪ ಸಮಯದ ಬಳಿಕ ಅದೇ ಮೊಬೈಲ್ ಗೆ ಫಲಿತಾಂಶವು ಬರುತ್ತದೆ.

ಇದನ್ನೂ ಓದಿ : ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ; ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಇದನ್ನೂ ಓದಿ
SSLC Result: ಇಂದು SSLC ಪರೀಕ್ಷೆ ಫಲಿತಾಂಶ, ನೋಡುವುದು ಹೇಗೆ?
CISCE Results 2025: CISCE 10ನೇ, ಐಎಸ್​ಸಿ 12ನೇ ತರಗತಿ ಫಲಿತಾಂಶ ಪ್ರಕಟ
SSLC Result 2025: ಮೇ 3ರಂದು ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ ಸಾಧ್ಯತೆ
'FMGE' ನೋಂದಣಿ ಪ್ರಕ್ರಿಯೆ ಮತ್ತು ಪರೀಕ್ಷಾ ದಿನಾಂಕ ಪ್ರಕಟ

ಎಸ್ ಎಸ್ ಎಲ್ ಸಿ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ karresults.nic.in ನಲ್ಲಿ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  • ವೆಬ್ ಸೈಟ್ ನಲ್ಲಿ 2025ರ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಲಿಂಕ್​ ಮೇಲೆ ಕ್ಲಿಕ್ ಮಾಡಿ.
  • ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್​ ಪೇಜ್​ ತೆರೆದುಕೊಳ್ಳುತ್ತದೆ, ಅಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  •  ಈ ವೇಳೆಯಲ್ಲಿ ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶವು ಪ್ರಕಟವಾಗುತ್ತದೆ.

8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

ಎಸ್ ಎಸ್ ಎಲ್ ಸಿ ಪರೀಕ್ಷೆಯೂ ಮಾರ್ಚ್‌ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. 8.96 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಹಾಜರಿದ್ದು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ಎಸ್ ಎಸ್ ಎಲ್ ಸಿ ಫಲಿತಾಂಶ ಲೈವ್ ಅಪ್ಡೇಟ್