AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿದ್ದಾರೆ. ಶಿಕ್ಷಕರ ಕೊರತೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶಗಳನ್ನು ಸುಧಾರಿಸಲು ಕ್ರಮ, ಜನಸ್ಪಂದನಾ ಕಾರ್ಯಕ್ರಮಗಳನ್ನು ಕಡ್ಡಾಯಗೊಳಿಸುವುದು ಮತ್ತು ಮಾದಕ ದ್ರವ್ಯ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಸೇರಿದಂತೆ ಇತರ ಪ್ರಮುಖ ನಿರ್ಧಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Anil Kalkere
| Updated By: ವಿವೇಕ ಬಿರಾದಾರ|

Updated on:May 31, 2025 | 10:02 PM

Share

ಬೆಂಗಳೂರು, ಮೇ 31: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ (Government School) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ‌ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆ ಸಭೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಎಲ್ಲವನ್ನೂ ಕೊಡುತ್ತಿದ್ದೇವೆ. 1 ರಿಂದ 1.50 ಲಕ್ಷ ವಿದ್ಯಾರ್ಥಿಗಳು ಸಂಖ್ಯೆ ಕಡಿಮೆ ಆಗುತ್ತಿದೆ. 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಿದ್ದೇನೆ. ಮಂಗಳೂರು, ಉಡುಪಿ, ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಎಸ್​ಎಲ್​ಸಿ, ಪಿಯುಸಿ ಫಲಿತಾಂಶ ಕಡಿಮೆ ಬಂದಿದೆ. ಹೀಗಾಗಿ, 5 ಸಾವಿರ ಕೋಟಿ‌ ರೂಪಾಯಿ ಕೊಡುತ್ತಿದ್ದೇನೆ ಎಂದು ಹೇಳಿದರು.

ಡಿಸಿಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು

ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು. ಶಾಲೆ, ಆಸ್ಪತ್ರೆ, ಅಂಗನವಾಡಿ, ವಸತಿ‌ಶಾಲೆ, ರುದ್ರ ಭೂಮಿಗೆ ಸರ್ಕಾರಿ ಜಮೀನು, ನಿವೇಶ ಕೊಡಬೇಕು. ಸರ್ಕಾರಿ ಜಮೀನು ಇಲ್ಲದಿದ್ದರೇ, ಖರೀದಿ ಮಾಡಿ ಕೊಡಬೇಕು. ಇದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದೇನೆ. ಎಸ್​​ಸಿ, ಎಸ್​ಟಿಗಳಿಗೆ ಸಿಂಧುತ್ವ ಪ್ರಮಾಣ ಪತ್ರ ಒಂದು ತಿಂಗಳೊಳಗೆ ನೀಡಬೇಕು ಎಂದು ಹೇಳಿದ್ದೇನೆ ಎಂದು ಹೇಳಿದರು.

ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣ ದೂರು ದಾಖಲಿಸಿ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದ್ದೇನೆ ಎಂದು ತಿಳಿಸಿದರು.

ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು. ಮಾದಕ ವಸ್ತು ಮಾರಾಟ ಮಾಡುವವರ ಅಂಗಡಿ ಮತ್ತಿತರ ಕೇಂದ್ರಗಳ ಪರವಾನಗಿ ರದ್ದುಗೊಳಿಸುವ ಸ೦ಬ೦ಧ ಕಾನೂನು ತಿದ್ದುಪಡಿ ತರುತ್ತೇವೆ ಎಂದು ಹೇಳಿದರು.

2023ರಲ್ಲಿ 6,767 ಪ್ರಕರಣಗಳು, 2024ರಲ್ಲಿ 4,188 ಪ್ರಕರಣಗಳು ದಾಖಲಾಗಿವೆ. ಈ ವರ್ಷ ಇದುವರೆಗೆ 1,793 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಗಳಲ್ಲಿ ಮಾದಕ ದ್ರವ್ಯ ದ೦ಧೆಯನ್ನು ಮಟ್ಟಹಾಕಲು ಡಿಸಿ ಹಾಗೂ ಎಸ್ಪಿ ಅವರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯಬಿದ್ದರೆ ಇನ್ನಷ್ಟು ಕಠಿಣ ಕಾಯ್ದೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ. ಶಾಲಾ, ಕಾಲೇಜುಗಳಲ್ಲಿ ಮಾದಕ ದ್ರವ್ಯ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: ಆರ್ಮಿ ಕ್ಯಾಂಟೀನ್​ಗಳಿಗೆ ಅಬಕಾರಿ ಸುಂಕ ವಿಧಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಜಿಲ್ಲಾಧಿಕಾರಿಗಳು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಪೊಲೀಸ್ ಇಲಾಖೆಗೆ ಎಲ್ಲಾ ಸಹಕಾರ ನೀಡಬೇಕು. ಗೂಂಡಾ ಕಾಯ್ದೆಯಡಿ ಬಾಕಿಯಿರುವ ಎಲ್ಲಾ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಅಂತ ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 pm, Sat, 31 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ