ಸದ್ದಿಲ್ಲದೇ ಶಾಲಾ ಪಠ್ಯ ಪುಸ್ತಕ ಪರಿಷ್ಕರಿಸಿದ ಶಿಕ್ಷಣ ಇಲಾಖೆ, ಏನೆಲ್ಲಾ ಬದಲಾವಣೆ? ಇಲ್ಲಿದೆ ವಿವರ

School Textbook Revision: ಸದ್ದಿಲ್ಲದೇ ರಾಜ್ಯ ಸರ್ಕಾರವು 2024-25ನೇ ಸಾಲಿಗೆ ಪಠ್ಯ ಪುಸ್ತಕ ಪರಿಷ್ಕರಿಸಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ 1ರಿಂದ 10ನೇ ತರಗತಿಯ ಕೆಲ ವಿಷಯಗಳ ಪಠ್ಯವನ್ನು ಪರಿಷ್ಕರಿಸಲಾಗಿದೆ. ಮುಖ್ಯವಾಗಿ ಇತ್ತೀಚೆಗೆಷ್ಟೇ ರಾಜ್ಯ ಸರ್ಕಾರ ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿದ್ದು, ಇದನ್ನೂ ಸಹ ಪಠ್ಯದಲ್ಲಿ ಸೇರಿಸಿಲಾಗಿದೆ. ಹಾಗಾದ್ರೆ, ಏನೆಲ್ಲಾ ಬದಲಾವಣೆಯಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಸದ್ದಿಲ್ಲದೇ ಶಾಲಾ ಪಠ್ಯ ಪುಸ್ತಕ ಪರಿಷ್ಕರಿಸಿದ ಶಿಕ್ಷಣ ಇಲಾಖೆ, ಏನೆಲ್ಲಾ ಬದಲಾವಣೆ? ಇಲ್ಲಿದೆ ವಿವರ
ವಿಧಾನಸೌಧ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Mar 05, 2024 | 7:46 PM

ಬೆಂಗಳೂರು, (ಮಾರ್ಚ್ 05): ಅಧಿಕಾರಕ್ಕೆ ಬಂದ ದಿನದಿಂದಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯನ್ನು(School Textbook Revision)  ಗಂಭೀರವಾಗಿ ಪರಿಗಣಿಸಿದ್ದ ಕಾಂಗ್ರೆಸ್‌ ಸರ್ಕಾರ, ಕೊನೆಗೂ ಸದ್ದಿಲ್ಲದೇ ಪಠ್ಯ ಪುಸ್ತಕ ಪರಿಷ್ಕರಿಸಿದೆ. ಡಾ ಮಂಜುನಾಥ್ ಹೆಗಡೆ ಅವರ ನೇತೃತ್ವದಲ್ಲಿ 2024-25ನೇ ಸಾಲಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗಿದ್ದು, ಕೆಲವೊಂದಕ್ಕೆ ಕೋಕ್ ಕೊಟ್ಟು ಹೊಸ ಪಠ್ಯಗಳನ್ನು ಸೇರ್ಪಡೆ ಮತ್ತು ಹಳೇ ಪಠ್ಯಗಳಿಗೆ ತಿದ್ದುಪಡಿ ಮಾಡಿದೆ. 01ನೇ ತರಗತಿಯಿಂದ 10ನೇ ತರಗತಿ ವರೆಗಿನ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕರಿಸಿ ವರದಿಯನ್ನು ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿಯು ಶಿಕ್ಷಣ ಇಲಾಖೆಗೆ ನೀಡಿದೆ.

01 ರಿಂದ 10 ನೇ ತರಗತಿವರೆಗಿನ ಕನ್ನಡ ಪ್ರಥಮ ಮತ್ತು ದ್ವಿತೀಯ ಭಾಷೆ, 09 ಮತ್ತು 10ನೇ ತರಗತಿಯ ಕನ್ನಡ ತೃತೀಯ ಭಾಷೆ ಮತ್ತು 06 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯವನ್ನು ಪರಿಷ್ಕರಣೆಗೆ ವಿಷಯವಾರು ತಜ್ಞರ ಸಮಿತಿಯನ್ನು ಹಾಗೂ ಪಠ್ಯಪುಸ್ತಕಗಳ ಪರಿಷ್ಕರಣಾ ಕಾರ್ಯನಿರ್ವಹಿಸುವ ಸಮಿತಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಹಾಗೂ ಸಲಹೆ ನೀಡುವ ಉದ್ದೇಶಕ್ಕಾಗಿ ನಿವೃತ್ತ ಪ್ರಾಧ್ಯಾಪಕರು ಮಂಜುನಾಥ.ಜಿ.ಹೆಗಡೆ ನೇತೃತ್ವದ ಸಮಿತಿ ರಚಿಸಲಾಗಿತ್ತು. ಪರಿಷ್ಕರಣಾ ಸಮಿತಿಯು ಮುಖ್ಯವಾಗಿ ಈ ಕೆಳಕಂಡ ಅಂಶಗಳಿಗೆ ಆದ್ಯತೆಯನ್ನು ನೀಡಿ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ.

1. ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟುಗಳು ಮತ್ತು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗದಂತೆ ಪರಿಷ್ಕರಣೆಗೆ ಒಳಪಟ್ಟ ಪಠ್ಯಪುಸ್ತಕಗಳ ಮೂಲ ಸ್ವರೂಪ ಬದಲಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ. 2. ಪ್ರಸ್ತುತ ಪರಿಷ್ಕರಣ ಸಮಿತಿಗೆ ಪೂರ್ವದಲ್ಲಿಯೇ ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿದ್ದ 2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ” ಯ ಅಂಶಗಳನ್ನು ಸಮಿತಿಯು ಅಳವಡಿಸಿಕೊಂಡಿದೆ

ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಪರಿಷ್ಕರಿಸಿರುವ ಪ್ರಮುಖ ಅಂಶಗಳು

ಸಮಾಜ ವಿಜ್ಞಾನ ಪರಿಷ್ಕೃತ ಪಠ್ಯಪುಸ್ತಕಗಳು ಸಂವಿಧಾನದ ಪ್ರಸ್ತಾವನೆ, ಲಿಂಗ ಸೂಕ್ಷ್ಮತೆ, ಮಕ್ಕಳ ಹಕ್ಕುಗಳ ಕುರಿತ ಮಾಹಿತಿ, ಪ್ರಜಾಸತ್ತಾತ್ಮಕ ಮತ್ತು ಜಾತ್ಯಾತೀತ ಮೌಲ್ಯಗಳು ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಗಮನದಲ್ಲಿಟ್ಟುಕೊಂಡು ಈ ಕೆಳಕಂಡಂತೆ ಪರಿಷ್ಕರಿಸಲಾಗಿದೆ.

6ನೇ ತರಗತಿ ಪಠ್ಯದಲ್ಲಿ ಏನೇನು ಬದಲಾವಣೆ?

  • ಇತಿಹಾಸದ ಪರಿಚಯ ಮತ್ತು ಆರಂಭಿಕ ಸಮಾಜದ ಕುರಿತ ಮಾಹಿತಿ ಇರುವ ಅಧ್ಯಾಯವನ್ನು ಹೊಸದಾಗಿ ಸೇರಿಸಲಾಗಿದೆ.
  • ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಅಧ್ಯಾಯದಲ್ಲಿ ಎಲ್ಲಾ ಮಾಹಿತಿಗಳನ್ನು ನವೀಕರಿಸಲಾಗಿದೆ ಹಾಗೂ ಹೊಸ ಚಿತ್ರಗಳು ಮತ್ತು ವಿವರಣೆಗಳನ್ನು ಸೇರಿಸಲಾಗಿದೆ.
  • ಚಂದ್ರಶೇಖರ್ ಕಂಬಾರ, ನಾಲ್ವಡಿ ಕೃಷ್ಣರಾಜ ಒಡೆಯರ್, ಎಚ್.ಎಲ್. ನಾಗೇಗೌಡ, ಡಾ. ಸಿದ್ದಲಿಂಗಯ್ಯ, ಶ್ರೀ ಸಿದ್ದೇಶ್ವರ ಸ್ವಾಮಿ, ಶ್ರೀ ಶಾಂತವೇರಿ ಗೋಪಾಲಗೌಡರ ಹಾಗೂ ಕೊಪ್ಪಳದ ಗವಿಮಠದ ಭಾವಚಿತ್ರಗಳನ್ನು ವಿವರಗಳೊಂದಿಗೆ ಸೇರಿಸಲಾಗಿದೆ.
  • ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು ಮತ್ತು ಉತ್ತರ ಭಾರತದ ರಾಜ ಮನೆತನಗಳನ್ನು ಕ್ರಮವಾಗಿ ಒಂದೆಡೆ ತಂದು ಚರ್ಚಿಸಿ, ರಾಜಮನೆತನಗಳ ಪಟ್ಟಿಯನ್ನು ಸೇರಿಸಲಾಗಿದೆ.
  • ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು’ ಅಧ್ಯಾಯದಲ್ಲಿ ‘ಗುಳ್ಳಕಾಯಜ್ಜಿಯ ಕಥೆ’ ಎಂಬ ಜಾನಪದ ಕಥೆ ಪಠ್ಯಕ್ಕೆ ಪೂರಕವಾಗದ ಕಾರಣಕ್ಕೆ ಕೈಬಿಡಲಾಗಿದೆ.
  •  ತಿದ್ದೋಲೆಯ ಪ್ರಕಾರ ವೇದ ಕಾಲದ ಸಂಸ್ಕೃತಿ’ ಮತ್ತು ‘ಹೊಸ ಧರ್ಮಗಳ ಉದಯ’ ಪಾಠಗಳನ್ನು ಸೇರಿಸಲಾಗಿದೆ.
  • ಪೌರ ಮತ್ತು ಪೌರತ್ವ ಪಾಠವನ್ನು ಲಿಂಗ ಸಮಾನತೆಯ ನೆಲೆಯಲ್ಲಿ ಪರಿಷ್ಕರಿಸಲಾಗಿದೆ. ನಮ್ಮ ಸಂವಿಧಾನ ಪಾಠದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಭಾಗಿಯಾದ ಮಹಿಳಾ ಸದಸ್ಯರ ವಿವರ ಮತ್ತು ಭಾವಚಿತ್ರವನ್ನು ಸೇರಿಸಲಾಗಿದೆ.
  • ಸಮಾನತೆಯ ಹಕ್ಕನ್ನು ಚರ್ಚಿಸುವಾಗ ಲಿಂಗತ್ವ ಅಲ್ಪಸಂಖ್ಯಾತರಿಗೆ ಇರುವ ಅವಕಾಶಗಳನ್ನು ಸೇರಿಸಲಾಗಿದೆ. ‘ಸ್ಥಳೀಯ ಆಡಳಿತ’ ದ ಬದಲಿಗೆ ಹೆಚ್ಚು ವಿಸ್ತಾರವಾದ ಹಿನ್ನೆಲೆಯನ್ನು ಒದಗಿಸುವ ‘ಪ್ರಭುತ್ವದ ಪ್ರಕಾರಗಳು’ ಆಧ್ಯಾಯವನ್ನು ಸೇರಿಸಲಾಗಿದೆ. ‘ಸ್ಥಳೀಯ ಆಡಳಿತ’ವು 8ನೇ ತರಗತಿಯ ‘ಸ್ಥಳೀಯ ಸ್ವಯಂ ಸರ್ಕಾರ’ ಅಧ್ಯಾಯದ ಪುನರಾವರ್ತನೆ ಆಗಿರುವುದರಿಂದ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
  • ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕು-ಕರ್ತವ್ಯಗಳು’ ಅಧ್ಯಾಯವನ್ನು ತಿದ್ದುಪಡಿ ಮಾಡಿ, ಮಕ್ಕಳ ಹಕ್ಕುಗಳನ್ನು ಸೇರಿಸಲಾಗಿದೆ.
  • ಅಧ್ಯಾಯಗಳು ಹಾಗೂ ವಿವರಣೆಗಳನ್ನು ವಿಷಯಾನುಕ್ರಮದಲ್ಲಿ ಮರುಜೋಡಣೆ ಮಾಡಲಾಗಿದೆ.
  • ಭೂಪಟಗಳನ್ನು ನವೀಕರಿಸಲಾಗಿದೆ. ಜಿಲ್ಲೆ, ತಾಲ್ಲೂಕು, ಹೋಬಳಿ ಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ನವೀಕರಿಸಲಾಗಿದೆ.

7ನೇ ತರಗತಿ

  • ಭಾರತಕ್ಕೆ ಐರೋಪ್ಯರ ಆಗಮನ ಮತ್ತು ಬ್ರಿಟೀಷ್ ಆಳ್ವಿಕೆಯ ಪರಿಣಾಮಗಳು ಪಾಠದ ವಿವರಣೆಯಲ್ಲಿ ಸ್ಪಷ್ಟತೆಯನ್ನು ತರಲು 2017-18ರ ಪರಿಷ್ಕರಣ ಪಠ್ಯಪುಸ್ತಕದಲ್ಲಿನ ಮಾಹಿತಿಗಳನ್ನು ಪಡೆದು ಮರು ನಿರೂಪಿಸಲಾಗಿದೆ.
  •  ತಿದ್ದೋಲೆಯಂತೆ ‘ಮೈಸೂರು ಮತ್ತು ಇತರ ಸಂಸ್ಥಾನಗಳು’ ಅಧ್ಯಾಯವನ್ನು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಎಂಬ ಅಧ್ಯಾಯವನ್ನು ಸೇರ್ಪಡೆ ಮಾಡುವುದರೊಂದಿಗೆ ಸ್ವಾತಂತ್ರ್ಯ ಚಳವಳಿಯ ನಿರೂಪಣೆಯಲ್ಲಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾಹಿತಿ ಸೇರಿಸಲಾಗಿದೆ.
  • ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ರೆಂದು ದಾಖಲಿಸಲಾಗಿದೆ.
  • ರಿಲಿಜಿಯನ್’ ಗಳು ಎಂಬ ಶೀರ್ಷಿಕೆಯನ್ನು ‘ಧರ್ಮಗಳು’ ಎಂದು ಬದಲಾಯಿಸಲಾಗಿದೆ.
  • ಪೌರನೀತಿಯಲ್ಲಿ ಶಾಸಕಾಂಗ, ಕಾಯಾರ್ಂಗ ಮತ್ತು ನ್ಯಾಯಾಂಗಗಳನ್ನು ಪರಿಚಯಿಸುವ ಅಧ್ಯಾಯವನ್ನು

8ನೇ ತರಗತಿ ಪಠ ಪರಿಷ್ಕರಣೆ

  • ಆಧಾರಗಳು ಎಂಬ ಅಧ್ಯಾಯವನ್ನು ಪರಿಷ್ಕರಿಸಿ, ಪ್ರಾಕ್ತನ ಆಧಾರಗಳ ಅರ್ಥ ಮತ್ತು ಪ್ರಾಮುಖ್ಯತೆಯೊಂದಿಗೆ ವಿಷಯಾಂಶವನ್ನು ಸೇರ್ಪಡೆ ಮಾಡಲಾಗಿದೆ.
  • ಭರತವರ್ಷ ಎಂಬ ಅಧ್ಯಾಯ ಶೀರ್ಷಿಕೆಯನ್ನು ಭರತ ವರ್ಷ ಭಾರತದ ಭೌಗೋಳಿಕ ಲಕ್ಷಣಗಳು ಮತ್ತು ಪ್ರಾಗೈತಿಹಾಸಿಕ ಕಾಲ ಎಂದು ನಿರ್ದಿಷ್ಟ ಪಡಿಸಲಾಗಿದೆ.
  • ಸಿಂಧೂ-ಸರಸ್ವತಿ ನಾಗರಿಕತೆ ಎಂಬ ಅಧ್ಯಾಯ ಶೀರ್ಷಿಕೆಯನ್ನು ಪ್ರಾಚೀನ ಭಾರತದ ನಾಗರಿಕತೆಗಳು: ಸಿಂಧು-ಸರಸ್ವತಿ ನಾಗರಿಕತೆ ಮತ್ತು ವೇದಗಳ ಕಾಲ ಎಂದು ಬದಲಾಯಿಸಿದೆ.
  • ಸನಾತನ ಧರ್ಮ/ಎಂಬ ಅಧ್ಯಾಯದಲ್ಲಿ ಕೆಲವು ಅಂಶಗಳನ್ನು ಸೇರಿಸಿ, ವ್ಯವಸ್ಥಿತವಾದ ನಿರೂಪಣೆಯನ್ನು ನೀಡಲಾಗಿದೆ.
  • ಜೈನ ಮತ್ತು ಬೌದ್ಧ ಮತಗಳು ಶೀರ್ಷಿಕೆಯನ್ನು ಜೈನ ಮತ್ತು ಬೌದ್ಧ ಧರ್ಮಗಳು ಎಂದು ಬದಲಾಯಿಸಿ, ಈ ಧರ್ಮಗಳ ಉದಯದ ಹಿನ್ನೆಲೆಯನ್ನು ಸೇರ್ಪಡೆ ಮಾಡಲಾಗಿದೆ.
  • ಮಳಖೇಡದ ರಾಷ್ಟ್ರಕೂಟರು ಮತ್ತು ಕಲ್ಯಾಣದ ಚಾಲುಕ್ಯರು ಅಧ್ಯಾಯದಲ್ಲಿ ‘ವೀರಶೈವ ಪಂಥದ ಮೌಲ್ಯಗಳು ಬದಲಾಗಿ ಬಸವಾದಿ ಶಿವಶರಣ ಮೌಲ್ಯಗಳು ಪದವನ್ನು ಬಳಸಲಾಗಿದೆ. ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕರೆಂದು ದಾಖಲಿಸಲಾಗಿದೆ.

9ನೇ ತರಗತಿ

  • ಪಾಶ್ಚಾತ್ಯ ರಿಲಿಜಿಯನ್ ಗಳು ಎಂబ ಶೀರ್ಷಿಕೆಯನ್ನು ಪಾಶ್ಚಾತ್ಯ ಧರ್ಮಗಳು ಎಂದು ಬದಲಾಯಿಸಲಾಗಿದೆ.
  • ಕಾಶ್ಮೀರದ ಕಾರ್ಕೋಟರು ಮನೆತನ ಮತ್ತು ಅಹೋಮ್ ರಾಜನಮನೆತನದ ಸಂಕೀರ್ಣ ವಿವರಣೆಯನ್ನು ಸಂಕ್ಷಿಪ್ತಗೊಳಿಸಲಾಗಿದೆ.
  • ಭಕ್ತಿಪಂಥ ಅಧ್ಯಾಯದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಸಂತ ಶಿಶುನಾಳ ಶರೀಫರ ಕುರಿತ ಮಾಹಿತಿಯನ್ನು ಸೇರಿಸಲಾಗಿದೆ.

    10ನೇ ತರಗತಿ

  • ಭಾರತಕ್ಕೆ ಯೂರೋಪಿಯನ್ನರ ಆಗಮನ ಅಧ್ಯಾಯದಲ್ಲಿ ಮಾತಾಂ೯ಡ ವರ್ಮನ ಕುರಿತು ವಿವರಗಳನ್ನು ಸಂಕ್ಷಿಪ್ತಗೊಳಿಸಲಾಗಿದೆ.
  • ಕರ್ನಾಟಕದಲ್ಲಿ ಬ್ರಿಟಿಷ್ ಆಳ್ವಿಕೆಗೆ ಪ್ರತಿರೋಧಗಳು ಅಧ್ಯಾಯದಲ್ಲಿ ಮೈಸೂರಿನ ಅರಸರ ಹಾಗೂ ಕಿತ್ತೂರು, ಸುರಪುರ, ಕೊಪ್ಪಳ, ಹಲಗಲಿಗಳ ಸ್ಥಳೀಯ ಬಂಡಾಯಗಳನ್ನು ಕ್ರಮಬದ್ಧವಾಗಿ ದಾಖಲಿಸಲಾಗಿದೆ.
  • ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು ಅಧ್ಯಾಯದಲ್ಲಿ ಸಾವತ್ರಿಬಾಯಿ ಫುಲೆ, ಯುವ ಬಂಗಾಳಿ ಚಳವಳಿ ಮತ್ತು ಪೆರಿಯಾರ್ ರವರ ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.

Published On - 7:40 pm, Tue, 5 March 24

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ