ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ: ಮುಖ್ಯ ಪರೀಕ್ಷೆಗೆ ಕಠಿಣ ನಿಯಮ

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಲೀಕ್ ಬಳಿಕ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದೆ. ಸದ್ಯ ಹೈ ಅಲರ್ಟ್ ಆಗಿರುವ ಇಲಾಖೆ, ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ವೆಬ್ ಕಾಸ್ಟಿಂಗ್ ಹಾಗೂ ಸಿಸಿಟಿವಿ ಕಣ್ಗಾವಲಿನ ಕಠಿಣ ಪ್ರಯೋಗಕ್ಕೆ ಮುಂದಾಗಿದೆ.

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ: ಮುಖ್ಯ ಪರೀಕ್ಷೆಗೆ ಕಠಿಣ ನಿಯಮ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Oct 22, 2024 | 7:50 AM

ಬೆಂಗಳೂರು, ಅಕ್ಟೋಬರ್ 22: ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಕುಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಹಾಗೂ ಇತರ ಕಠಿಣ ನಿಯಮದ ಪರಿಣಾಮ ಫಲಿತಾಂಶ ಕುಸಿತ ಆಯಿತು ಎಂಬ ಟೀಕೆ ವ್ಯಕ್ತವಾಗಿತ್ತು. ಅದಾದ ಬೆನ್ನಲ್ಲೇ ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುವ ವಿದ್ಯಾರ್ಥಿಗಳ ಎಸ್​ಎಸ್​ಎಲ್​ಸಿ ಫಲಿತಾಂಶ ಹೆಚ್ಚು ಮಾಡಲು ಶಿಕ್ಷಣ ಇಲಾಖೆ ನಾನಾ ಸರ್ಕಸ್ ಮಾಡುತ್ತಿದೆ. ಅದರ ಭಾಗವಾಗಿ ವಾರ್ಷಿಕ ಪರೀಕ್ಷೆ ತಯಾರಿ ಅಂತ ಇದೇ ಮೊಟ್ಟ ಮೊದಲ ಬಾರಿಗೆ ಕೆಎಸ್​​ಇಎಬಿ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ತಯಾರಿ ಮಾಡಿತ್ತು. ಆದರೆ ಇದು ಲೀಕ್ ಆಗಿದ್ದು, ಹೊಡೆತ ನೀಡಿದೆ. ಇದೀಗ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದ್ದು, ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್ ಮಾಡಿದೆ.

ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಈ ವರ್ಷ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ಹೊರತಂದಿತ್ತು. ಆದರೆ, ಈ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆನ್ಲೈನ್ ಅಲ್ಲಿ ಸೋರಿಕೆಯಾಗಿದೆ. ಶಿಕ್ಷಣ ಇಲಾಖೆಯ ಈ ಎಡವಟ್ಟು ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವಂತೆ ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಸಖತ್ ಗರಂ ಆಗಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿದೆ. ಮುಂಬರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಪ್ರಶ್ನಪತ್ರಿಕೆ ಲೀಕ್ ತಡೆಯಲು ಮುಂದಾಗಿದೆ. ಪ್ರತಿಯೊಂದು ಕೊಠಡಿಗೂ ಸಿಸಿಟಿವಿ ಕ್ಯಾಮರ ಹಾಗೂ ತಾಲೂಕು ಮಟ್ಟದಲ್ಲಿ ನೋಡಲ್ ಕೇಂದ್ರ ವೆಬ್ ಕಾಸ್ಟಿಂಗ್ ಮತಷ್ಟು ಬಲಪಡಿಸಲು ಮುಂದಾಗಿದೆ.

ಶಿಕ್ಷಣ ಸಚಿವರಿಂದ ಖಡಕ್ ಎಚ್ಚರಿಕೆ

ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ನಕಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಆದೇಶ

ಏತನ್ಮಧ್ಯೆ, ಮದ್ಯವಾರ್ಷಿಕ ಪರೀಕ್ಷೆಯಲ್ಲಿಯೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು ನಗೆಪಾಟಲಿಗೆ ಕಾರಣವಾಗಿದೆ. ಸದ್ಯ ಕಠಿಣ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಎಷ್ಟರ ಮಟ್ಟಿಗೆ ಅನುಷ್ಠಾನಗೊಳಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್