ಬೆಂಗಳೂರು ಸೆ.23: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ತುಂಬಾ ಬದಲಾವಣೆಗಳು ಆಗುತ್ತಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (Department of School Education and Literacy) 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ನಿರ್ಧರಿಸಿದೆ. ಮಕ್ಕಳ ಕಲಿಕಾ ದೃಷ್ಟಿಯಿಂದ ಒಂಬತ್ತನೇ ತರಗತಿ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುತ್ತದೆ. ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಪರೀಕ್ಷಾ ಮಂಡಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
ಸಾಕಷ್ಟು ವಿರೋಧಗಳ ಮಧ್ಯೆಯೇ ಪ್ರಸಕ್ತ 2023-24 ನೇ ಸಾಲಿನಲ್ಲಿಯೇ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಇಲಾಖೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುವ ಎಲ್ಲಾ ಅನುದಾನಿತ, ಸರ್ಕಾರಿ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಕಳೆದ ವರ್ಷವಷ್ಟೇ 5 ಮತ್ತು 8 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿತ್ತು.
ಇದನ್ನೂ ಓದಿ: ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶಾಲೆಯ ಸಮಯ ಬದಲಾವಣೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:37 am, Sat, 23 September 23