ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ
ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಾದ್ಯಂತ ಶಾಲೆಗಳು (School) ಪುನರಾರಂಭವಾಗಲಿದೆ. ಬೇಸಿಗೆ ರಜೆ ಮುಗಿಸಿ ಮಕ್ಕಳೆಲ್ಲಾ (Students) ಶಾಲೆಗೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿರುವಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಬಿಡುಗಡೆ ಮಾಡಿದೆ. ಹಾಗಾದ್ರೆ, ಮಾರ್ಗಸೂಚಿಯಲ್ಲಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಏನೆಲ್ಲಾ ಅಂಶಗಳಿವೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು (ಮೇ.26): ಬೇಸಿಗೆ ರಜೆ (Summer Holidays) ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು (Schools) ಆರಂಭವಾಗಲಿವೆ. ಇನ್ನು ಮಕ್ಕಳು (Students) ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಿದೆ. ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು ಸೂಚನೆ ನೀಡಿದೆ.
ಮುಖ್ಯಾಂಶಗಳು
- ಕರ್ನಾಟಕದಲ್ಲಿ ಶಾಲೆ ಆರಂಭಕ್ಕೆ ಕೌಂಟ್ ಡೌನ್
- ಶಾಲೆಗಳ ಆಂಭಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ
- ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟ
- ಶಾಲಾ ಕಟ್ಟಡಗಳ ಸುರಕ್ಷತೆಗೆ ಆದ್ಯತೆ ಕೊಡಲು ಒತ್ತು
ಸುರಕ್ಷತೆಗೆ ಆದ್ಯತೆ ನೀಡಲು ಸೂಚನೆ
ಶಿಕ್ಷಣ ಇಲಾಖೆಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ಶಾಲಾ ಕಟ್ಟಡಗಳ ಸುರಕ್ಷತೆಗೆ ಆದ್ಯತೆ ಕೊಡಲು ಒತ್ತು ನೀಡಲಾಗಿದೆ. ಶಾಲಾ ಕಟ್ಟಡಗಳು, ಶೌಚಾಲಯಗಳು ಅಥವಾ ಅಡುಗೆ ಕೋಣೆಗಳು ಶಿಥಿಲಗೊಂಡಿದ್ರೆ, ತಕ್ಷಣವೇ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ದುರಸ್ತಿ ಅಥವಾ ತೆರವುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಶಾಲೆ ಕಟ್ಟಡದ ಸುರಕ್ಷತೆಗೆ ಕ್ರಮ ವಹಿಸಲು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ: ಮಕ್ಕಳೇ ಮುಗಿಯಿತು ಸಮ್ಮರ್ ಹಾಲಿಡೇಸ್ ಮಜಾ!: ಮೇ 29 ರಿಂದಲೇ ಸ್ಕೂಲ್ ಬೆಲ್ ರೆಡಿ; ಈ ಬಾರಿ ಸಿಗಲಿದೆ ಭರ್ಜರಿ ದಸರಾ ರಜೆ!
ಮಾರ್ಗಸೂಚಿಯ ಪ್ರಮುಖಾಂಶಗಳು
- ಶಾಲಾ ಕಟ್ಟಡಗಳು, ಶೌಚಾಲಯಗಳು ಅಥವಾ ಅಡುಗೆ ಕೋಣೆಗಳು ಶಿಥಿಲಗೊಂಡಿದ್ದರೆ ತಕ್ಷಣವೇ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ದುರಸ್ತಿ ಅಥವಾ ತೆರವುಗೊಳಿಸಬೇಕು.
- 6 ರಿಂದ 14 ವರ್ಷದ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು.
- ಉರ್ದು-ಇಂಗ್ಲೀಷ್ ದ್ವಿಭಾಷಾ ಮಾಧ್ಯಮವೂ ಸಹ ಈ ವರ್ಷವೇ ಆರಂಭ
- ದ್ವಿಭಾಷಾ ಶಿಕ್ಷಣಕ್ಕೆ ಇಲಾಖೆಯಿಂದ ಪೂರ್ವಾನುಮತಿ ಪಡೆದಿರುವ ಶಾಲೆಗಳಲ್ಲಿ ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು ಸೂಚನೆ.
- ಮೇ 28 ಶಾಲೆಗಳ ಸಂಪೂರ್ಣ ಸ್ವಚ್ಛತೆ, ಕುಡಿಯುವ ನೀರು ಮತ್ತು ಸುರಕ್ಷತಾ ತಪಾಸಣೆಗಳನ್ನು ಪೂರ್ಣಗೊಳಿಸಲು ಕೊನೆಯ ದಿನಾಂಕ.
- ಮೇ 29 ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಹಾಜರಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು.
- ಜೂನ್ 1 ರಂದು ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳ ದಾಖಲಾತಿ ಪ್ರಕ್ರಿಯೆ ಅಧಿಕೃತವಾಗಿ ಆರಂಭ.
- ಜೂನ್ 30 – ದಾಖಲಾತಿ ಆಂದೋಲನ ಮುಕ್ತಾಯ.
- ವಿದ್ಯಾರ್ಥಿಗಳು & ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ.




