5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

Moulyankana Exams time table : ಶಾಲೆಗಳ 5,8,9,11ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಯ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್​ ನೀಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 22, 2024 | 8:46 PM

ಬೆಂಗಳೂರು, (ಮಾರ್ಚ್ 22) : 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್​ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್​ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಮಾರ್ಚ್ 25ನೇ ತಾರೀಕಿನಿಂದ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು, ಎಸ್​ಎಸ್​ಎಲ್​ಸಿ ಪರೀಕ್ಷೆಗಳಿರುವ ದಿನಾಂಕ 25-3-24ರ ಸೋಮವಾರ ಮತ್ತು 27-3-24ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಇಲ್ಲದಿರುವ ದಿನಾಂಕ 26-3-24 ರ ಮಂಗಳವಾರ ಮತ್ತು 28-3-24 ರ ಗುರುವಾರದಂದು ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕವನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ಪರೀಕ್ಷೆ ಮುಂದುವರಿಸುವ ಆದೇಶದಲ್ಲಿ ಏನಿದೆ?

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿ, ಈ ಹಿಂದೆ ರಾಜ್ಯ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು ಮೌಲ್ಯಾಂಕನವನ್ನು ಮುಂದುವರೆಸುವಂತೆ ನೀಡಿದ್ದ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ರಾಜ್ಯ ಉಚ್ಛ ನ್ಯಾಯಾಲಯ ವಿಭಾಗೀಯ ಪೀಠಕ್ಕೆ ರವಾನಿಸಿತ್ತು.

ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5.8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿತ್ತು. ಮುಂದುವರೆದು, ರಾಜ್ಯ ಘನ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸದರಿ ದಾವೆಯ ಪ್ರಕರಣವನ್ನು ವಿಚಾರಣೆ ನಡೆಸಿ ದಿನಾಂಕ: 22-3-2024ರಂದು ಅಂತಿಮ ತೀರ್ಪು ನೀಡಿದ್ದು, 5, 8 ಮತ್ತು 9ನೇ ತರಗತಿಗಳು 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ಕಾರ್ಯವನ್ನು ಉಳಿದ ವಿಷಯಗಳಿಗೆ ಮುಂದುವರೆಸಲು ಸೂಚಿಸಿ ಆದೇಶಿಸಿರುತ್ತದೆ. ಅದರಂತೆ ಸದರಿ ಮೌಲ್ಯಾಂಕನ ಕಾರ್ಯವನ್ನು ವಿದ್ಯಾರ್ಥಿಗಳ ಅಭ್ಯಾಸದ ಹಿತದೃಷ್ಟಿಯಿಂದ ದಿನಾಂಕ: 25-3-2024ರಿಂದ ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ

5ನೇ ತರಗತಿ

  • ಮಾರ್ಚ್ 25- ಪರಿಸರ ಅಧ್ಯಯನ
  • ಮಾರ್ಚ್ 26- ಗಣಿತ

8ನೇ ತರಗತಿ

  • ಮಾರ್ಚ್ 25- ತೃತೀಯ ಭಾಷೆ
  • ಮಾರ್ಚ್ 26- ಗಣಿತ
  • ಮಾರ್ಚ್ 27- ವಿಜ್ಞಾನ
  • ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ

  • ಮಾರ್ಚ್ 25- ತೃತೀಯ ಭಾಷೆ
  • ಮಾರ್ಚ್ 26- ಗಣಿತ
  • ಮಾರ್ಚ್ 27- ವಿಜ್ಞಾನ
  • ಮಾರ್ಚ್ 28- ಸಮಾಜ ವಿಜ್ಞಾನ

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ