ಕರ್ನಾಟಕ ರಾಜ್ಯದಲ್ಲಿ 5, 8ನೇ ತರಗತಿಗೂ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ

ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದಲ್ಲಿ 5, 8ನೇ ತರಗತಿಗೂ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Dec 13, 2022 | 11:41 AM

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ(Karnataka Education Department) ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು, ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.

ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ಆರೈಕೆ’ ಎಂಬ ಯೋಜನೆ ಮೂಲಕ ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡುತ್ತಿರುವ ಹಾವೇರಿ ಜಿಲ್ಲಾ ಪಂಚಾಯತಿ

ಪ್ರಸ್ತುತ 2022-23ನೇ ಸಾಲಿನಲ್ಲಿ ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಕಲಕಾ ಪ್ರಗತಿಯು ಅನುಪಾಲನೆಯಲ್ಲಿದೆ. ಆದರೆ ಪ್ರಸ್ತುತ 1ನೇ ತರಗತಿಯಿಂದ 9ನೇ ತರಗತಿವರೆಗೆ ಶಾಲಾ ಹಂತದಲ್ಲಿ ಸಿಸಿಇ ಮೌಲ್ಯಾಂಕನ ವಿಶ್ಲೇಷಣೆ ಮಾಡುತ್ತಿರುವುದರಿಂದ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ನಿರ್ವಹಿಸುತ್ತಿಲ್ಲವಾದ್ದರಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ’ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಕಲಕಾ-ಫಲಗಳನ್ನು ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ.

ಪ್ರಯುಕ್ತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲ [K.S.E.A.B] ಇವರ ಹಂತದಲ್ಲಿ ಪ್ರಶ್ನೆ ಪತ್ರಿಕೆ ರೂಪಿಸಿ, ಸರಬರಾಜು ಮಾಡಿ ಶಾಲಾ ಹಂತದಲ್ಲಿ ಪರೀಕ್ಷೆ ನಿರ್ವಹಿಸಿ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪ್ರಗತಿ ಕುಂಠಿತವಾಗಿರುವ ವಿಷಯವಾರು. ಶಾಲಾವಾರು, ಕ್ಲಸ್ಟರ್/ತಾಲ್ಲೂಕುವಾರು ವಿಶ್ಲೇಷಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಿಯಾ ಯೋಜನೆಯನ್ನು ರಚಿಸಿ ಭೋಧನಾ-ಕಲಿಕಾ ಪ್ರಕ್ರಿಯೆಯನ್ನು ಬಲವರ್ಧನೆಗೊಳಸುವ ಉದ್ದೇಶ ಹೊಂದಿದೆ. ಆದ್ದರಿಂದ ಸದರಿ ಪರೀಕ್ಷೆ ನಿರ್ವಹಣೆ ಕುರಿತು ಸಂಬಂಧಿಸಿದ ಅನುಷ್ಠಾನಾಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿ, ಚರ್ಚಿಸಿ ನಿರ್ಣಯಿಸಿದಂತೆ ಪರೀಕ್ಷಾ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಿದ್ಧಪಡಿಸಿ ಅನುಬಂದಿಸಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:29 am, Tue, 13 December 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್