ಸಮೀಪಿಸುತ್ತಿದೆ ಕರ್ನಾಟಕ ವಿಧಾನಸಭಾ ಚುನಾವಣೆ: ವಿವೇಕ ಕೊಠಡಿಗಳಿಗೆ ಇಂದು ಚಾಲನೆ, ಶಾಲೆಗಳಲ್ಲಿ ಧ್ಯಾನದ ನಿರ್ಧಾರದಿಂದ ಹಿಂದೆ ಸರಿಯದ ಶಿಕ್ಷಣ ಇಲಾಖೆ

ಶಿಕ್ಷಣ ಇಲಾಖೆಯು ಜಾರಿಗೊಳಿಸಿರುವ ಧ್ಯಾನ ಮತ್ತು ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣ ಆದೇಶಗಳೂ ಚುನಾವಣೆ ಉದ್ದೇಶವನ್ನೇ ಹೊಂದಿವೆ ಎಂದು ಹಲವರು ವಿಶ್ಲೇಷಿಸುತ್ತಿದ್ದಾರೆ.

ಸಮೀಪಿಸುತ್ತಿದೆ ಕರ್ನಾಟಕ ವಿಧಾನಸಭಾ ಚುನಾವಣೆ: ವಿವೇಕ ಕೊಠಡಿಗಳಿಗೆ ಇಂದು ಚಾಲನೆ, ಶಾಲೆಗಳಲ್ಲಿ ಧ್ಯಾನದ ನಿರ್ಧಾರದಿಂದ ಹಿಂದೆ ಸರಿಯದ ಶಿಕ್ಷಣ ಇಲಾಖೆ
ಶಿಕ್ಷಣ ಸಚಿವ ಬಿ.ಸಿ.ನಾಗೇಶ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 14, 2022 | 8:42 AM

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿದೆ. ರಾಜ್ಯ ಸರ್ಕಾರವು ಪ್ರತಿಹೆಜ್ಜೆಯನ್ನೂ ಅಳೆದು ತೂಗಿಯೇ ಇರಿಸುತ್ತಿದೆ. ಈ ಮೊದಲು ಮಾಡಿರುವ ಕೆಲ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಮತ್ತೊಂದೆಡೆ ಹಿಂದುತ್ವದ ಆಶಯಗಳಿಗೆ ಪೂರಕವಾದ ನಿರ್ಧಾರಗಳನ್ನು ಒಂದೊಂದಾಗಿ ಜಾರಿಗೊಳಿಸುವ ಮೂಲಕ ಮತಗಳನ್ನು ಕ್ರೋಡೀಕರಿಸಲು ಯತ್ನಿಸುತ್ತಿದೆ. ಶಿಕ್ಷಣ ಇಲಾಖೆಯು ಜಾರಿಗೊಳಿಸಿರುವ ಧ್ಯಾನ ಮತ್ತು ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣ ಆದೇಶಗಳೂ ಇದೇ ಮಾದರಿಯಲ್ಲಿದೆ ಎಂದು ಹಲವರು ವಿಶ್ಲೇಷಿಸುತ್ತಿದ್ದಾರೆ.

ರಾಜ್ಯದ ವಿವಿಧೆಡೆ ತೀವ್ರ ವಿರೋಧ ವ್ಯಕ್ತವಾಗಿದ್ದರೂ ಶಾಲೆಗಳಲ್ಲಿ ಧ್ಯಾನದ ಅಭ್ಯಾಸ ಜಾರಿಗೊಳಿಸುವ ನಿರ್ಧಾರದಿಂದ ಶಿಕ್ಷಣ ಇಲಾಖೆ ಹಿಂದೆ ಸರಿಯುತ್ತಿಲ್ಲ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿಸಬೇಕು ಎಂಬ ಶಿಕ್ಷಣ ಸಚಿವರ ಸೂಚನೆಯನ್ನು ಜಾರಿಗೊಳಿಸಲು ಇಲಾಖೆಯು ಮುಂದಾಗಿದೆ. ಮುಂದಿನ ತಿಂಗಳಿನಿಂದಲೇ ಅಂದರೆ, ಡಿಸೆಂಬರ್​ನಿಂದಲೇ ಈ ಯೋಜನೆ ಜಾರಿಗೆ ಬರಲಿದೆ. ಧ್ಯಾನದ ಚಿಂತನೆಯ ಅನುಷ್ಠಾನದ ಸಾಧ್ಯತೆಯ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಹಲವರಿಂದ ಸಲಹೆ ಪಡೆದಿದೆ.

ಮುಂದಿನ ತಿಂಗಳಿನಿಂದಲೇ, ಅಂದರೆ ಡಿಸೆಂಬರ್​ನಿಂದಲೇ ಶಾಲೆಗಳಲ್ಲಿ ಧ್ಯಾನ ಯೋಜನೆ ಜಾರಿಗೆ ತರಲು ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ. ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಆರೋಗ್ಯ ವೃದ್ಧಿಸಲು, ಸದ್ವಿಚಾರ ಚಿಂತನೆ, ಒತ್ತಡಗಳಿಂದ ಮುಕ್ತವಾಗಿ ಜ್ಞಾನಾರ್ಜನೆ, ಉತ್ತಮ ಗುಣಗಳನ್ನು ರೂಢಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡಿಸಬೇಕು ಎಂದು ಸಚಿವರ ಟಿಪ್ಪಣಿಯು ಸೂಚಿಸಿತ್ತು. ಶಿಕ್ಷಣ ಸಚಿವರ ಈ ನಡೆಗೆ ತೀವ್ರ ವಿರೋಧ ಕೇಳಿ ಬಂದಿತಿತ್ತು ಆದರೆ ಯಾವುದೇ ವಿರೋಧ ಲೆಕ್ಕಿಸದ ಸಚಿವರು ಧ್ಯಾನದ ನಿರ್ಧಾರ ಜಾರಿಗೊಳಿಸಲು ಮುಂದಾಗಿದ್ದಾರೆ.

ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ ಇಂದು ಚಾಲನೆ

ಕಲಬುರ್ಗಿ: ರಾಜ್ಯಾದ್ಯಂತ 8,100 ಶಾಲಾ ಕೊಠಡಿಗಳನ್ನು ‘ವಿವೇಕ’ ಯೋಜನೆಯಡಿ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಲಬುರ್ಗಿ ತಾಲ್ಲೂಕಿನ ಮಡಿಹಾಳ ತಾಂಡ್ಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮುಂಜಾನೆ 11 ಗಂಟೆಗೆ ಈ ಯೋಜನೆಯಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಸಚಿವ ಬಿ.ಸಿ.ನಾಗೇಶ್ ಮತ್ತು ಇತರ ಕೆಲ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸ್ವಾಮಿ ವೇವೇಕಾನಂದ ಹೆಸರಿನಲ್ಲಿ ನಿರ್ಮಿಸಲಾಗುತ್ತಿರುವ ಶಾಲಾ ಕೊಠಡಿಗಳಿಗೆ ‘ವಿವೇಕ’ ಎಂಬ ಹೆಸರು ಇರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯಲು ನಿರ್ಧರಿಸಿದೆ. ₹ 992 ಕೋಟಿ ವೆಚ್ಚದ ಈ ಯೋಜನೆಯು ಸಹ ರಾಜ್ಯದಲ್ಲಿ ಮತ್ತೊಮ್ಮೆ ಹಿಂದುತ್ವದ ಪರ-ವಿರೋಧ ವಾಗ್ವಾದ ಹುಟ್ಟುಹಾಕಬಹುದು ಎಂದು ಹೇಳಲಾಗುತ್ತಿದೆ.

Published On - 8:42 am, Mon, 14 November 22

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ