Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

ಶಾಲೆಗಳು ಆರಂಭವಾಗುತ್ತಿದ್ದಂತೆಯೇ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್ ನೀಡಿದೆ.

ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ
ವಿಧಾನಸೌಧ
Follow us
ರಮೇಶ್ ಬಿ. ಜವಳಗೇರಾ
|

Updated on:Jun 21, 2023 | 1:01 PM

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ(Egg), ಬಾಳೆ ಹಣ್ಣು(banana) ವಿತರಿಸಲು ಕರ್ನಾಟಕ ಸರ್ಕಾರ ಆದೇಶಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ(Students) ಮೊಟ್ಟೆ ವಿತರಣೆ ಮಾಡುವಂತೆ ಇಂದು(ಜೂನ್ 21) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶುಭ ಕಲ್ಯಾಣ್ ನಿರ್ದೇಶಕರು ಪಿ. ಎಂ. ಪೋಷಣ್, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ (ಮೊಟ್ಟೆ ಸ್ವೀಕರಿಸದ ಮಕ್ಕಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ವಿತರಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದೇಕೆ? ತಜ್ಞರು ಕೊಟ್ಟ ಕಾರಣವೇನು? ಇಲ್ಲಿದೆ ವಿವರ

ಮಧ್ಯಾಹ್ನದ ಬಿಸಿಯೂಟದ ಜೊತೆಗೆ 1ರಿಂದ 8ನೇ ತರಗತಿ ಮಕ್ಕಳಿಗೆ ಅಪೌಷ್ಠಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಪೂರಕ ಪೌಷ್ಠಿಕ ಆಹಾರವಾಗಿ ಬೇಯಿಸಿದ ಮೊಟ್ಟೆ(ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ಒಬ್ಬ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ದಿನಾಂಕ 20-8-2-23ರಿಂದ ಪ್ರಾರಂಭಿಸಿ 15-723 ರವರೆಗೆ ಸರ್ಕಾರದ ಮುಂದಿನ ಆದೇಶ ಬರುವವರೆಗೂ ವಿತರಿಸುವಂತೆ ಈ ಮೂಲಕ ತಿಳಿಸಲಾಗಿದೆ.  ಈ ಸಂಬಂಧ ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ಒಂದು ಮೊಟ್ಟೆ/ಬಾಳೆ ಹಣ್ಣು/ಶೇಂಗಾ ಚಿಕ್ಕಿಯ ಘಟಕ ವೆಚ್ಚ 8ರೂ.ರಂತೆ ನಿಗದಿಪಡಿಸಿರುತ್ತದೆ. ಇದರಂತೆ ಭರಿಸಲು ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಕಲ್ಯಾಣ ಕರ್ನಾಟಕ ವಿಭಾಗದ 8 ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ರಾಯಚೂರು, ವಿಜಯನಗರ, ಬಳ್ಳಾರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 2023-24ನೇ ಸಾಲಿನ ಪಿಎಬಿ ಅನುಮೋದನೆ ಮತ್ತು ಅನುದಾನ ಹಂಚಿಕೆಯಂತೆ ಕೇಂದ್ರ ಮತ್ತು ರಾಜ್ಯದ ಪಾಲಿನ ಪ್ಲೆಕ್ಸಿ ಅನುದಾನದಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಸದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ.

ಇನ್ನು ಉಳಿದಂತೆ 23 ಜಿಲ್ಲೆಗಳಲ್ಲಿ 1ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಫಲಾನುಭವಿ ಮಕ್ಕಳಿಗೆ ಶಾಲೆಯ ಮುಖ್ಯ ಶಿಕ್ಷಕರು ಹಿಂದಿನ ಸಾಲಿನ ಮಾರ್ಗಸೂಚಿಯಂತೆ ಎಸ್​ಡಿಎಂಸಿ ನೇತೃತ್ವದಲ್ಲಿ ಅಗತ್ಯ ಕ್ರಮಕೈಗೊಂಡು ಪೂರಕ ಪೌಷ್ಠಿಕ ಆಹಾರವನ್ನು ವಿತರಿಸುವಂತೆ ತಿಳಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:55 pm, Wed, 21 June 23

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್