Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 22ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ; ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ್ರೆ ನೋ ಎಂಟ್ರಿ

SSLC ಪರೀಕ್ಷೆ ಮಾದರಿಯಲ್ಲೇ ದ್ವಿತೀಯ PUC ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದ್ದು ಶಿಕ್ಷಣ ಇಲಾಖೆ ಸಮವಸ್ತ್ರ ಪಾಲನೆ ಕಡ್ಡಾಯ ಆದೇಶ ಹೊರಡಿಸಿದೆ. ಸಮವಸ್ತ್ರವಿರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಕಡ್ಡಾಯ ಮಾಡಲಾಗಿದೆ.

ಏಪ್ರಿಲ್ 22ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ; ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ್ರೆ ನೋ ಎಂಟ್ರಿ
ವಿದ್ಯಾರ್ಥಿನಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Apr 10, 2022 | 8:35 AM

ಬೆಂಗಳೂರು: ಏಪ್ರಿಲ್ 22 ರಿಂದ ಮೇ 18ರವರೆಗೆ 2021-22ನೇ ಸಾಲಿನ ಪಿಯುಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ 6,84,463 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 5,241 ಕಾಲೇಜುಗಳಿಂದ ಪಿಯು ಪರೀಕ್ಷೆ ನೋಂದಣಿ ಆಗಿದೆ. ಒಟ್ಟು 1,076 ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆಸಲು ಸಿದ್ಧತೆಗಳು ನಡೆದಿವೆ.

ಶಿಕ್ಷಣ ಇಲಾಖೆಯಿಂದ ಸಮವಸ್ತ್ರ ಪಾಲನೆ ಕಡ್ಡಾಯ ಆದೇಶ SSLC ಪರೀಕ್ಷೆ ಮಾದರಿಯಲ್ಲೇ ದ್ವಿತೀಯ PUC ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದ್ದು ಶಿಕ್ಷಣ ಇಲಾಖೆ ಸಮವಸ್ತ್ರ ಪಾಲನೆ ಕಡ್ಡಾಯ ಆದೇಶ ಹೊರಡಿಸಿದೆ. ಸಮವಸ್ತ್ರವಿರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಕಡ್ಡಾಯ ಮಾಡಲಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿದ ಸಮವಸ್ತ್ರ ಪಾಲಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಿಕ್ಷಣ ಸಚಿವ ನಾಗೇಶ್ ನೇತೃತ್ವದಲ್ಲಿ ಏ.13ರಂದು ಪರೀಕ್ಷೆ ಸಂಬಂಧ ಜಿಲ್ಲಾಮಟ್ಟದ ಮೀಟಿಂಗ್ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ನಿಷೇಧ ಪ್ರದೇಶವಾಗಿ ಘೋಷಿಸಲಾಗಿದ್ದು ಪರೀಕ್ಷಾ ಕೇಂದ್ರದ ಸಮೀಪದ ಜೆರಾಕ್ಸ್ ಅಂಗಡಿಗಳು ಕ್ಲೋಸ್ ಆಗಲಿವೆ. ಜಿಲ್ಲಾ ಹಾಗೂ 5 ತಾಲೂಕು ಕೇಂದ್ರದ ಉಪಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆ ಠೇವಣಿ. ಪ್ರತಿ ವರ್ಷದಂತೆ ಈ ಬಾರಿಯೂ ಪ್ರಶ್ನೆಪತ್ರಿಕೆ ಇರಲಿದ್ದು 70 ಅಂಕ ಥಿಯರಿ ಹಾಗೂ 30 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್ ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ

ಇದನ್ನೂ ಓದಿ: Second PU exams time table: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ