Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಶಾಕ್: SSLC ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ..!

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಪರೀಕ್ಷೆಗಳು ಅಂದ್ರೆ ಭಯ ನಡುಕ ಶುರುವಾಗಿ ಬೀಡುತ್ತೆ.. ಇನ್ನು ಅದೇಷ್ಟೋ ವಿದ್ಯಾರ್ಥಿಗಳಿಗೆ ಪರೀಕ್ಷೆ ಹತ್ತಿರ ಬರುತ್ತಿದ್ದಂತೆಯೇ ಒತ್ತಡದಲ್ಲಿ ಅನಾರೋಗ್ಯಕ್ಕೆ ಈಡಾಗುತ್ತಿದ್ದಾರೆ. ಇದರ ಮಧ್ಯ ವಿದ್ಯಾರ್ಥಿ ಸ್ನೇಹಿ ಪರೀಕ್ಷೆ ನಡೆಸಬೇಕಿದ್ದ ಶಿಕ್ಷಣ ಇಲಾಖೆ ಬೋರ್ಡ್ ಪ್ರಶ್ನೆ ಪತ್ರಿಕೆ ರೂಪಿಸಲು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು, ಇದಕ್ಕೆ ಎಲ್ಲಡೆ ವಿರೋಧಗಳು ವ್ಯಕ್ತವಾಗುತ್ತಿವೆ.

ವಿದ್ಯಾರ್ಥಿಗಳಿಗೆ ಶಾಕ್: SSLC ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ..!
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on: Sep 09, 2024 | 10:24 PM

ಬೆಂಗಳೂರು, (ಸೆಪ್ಟೆಂಬರ್ 09): ಪ್ರಸಕ್ತ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಹಿಂದೆ ಪೂರ್ವ ಸಿದ್ಧತಾ ಮತ್ತ ವಾರ್ಷಿಕ ಪರೀಕ್ಷೆಗಳಿಗೆ ಮಾತ್ರ ಪ್ರಶ್ನಿ ಪತ್ರಿಕೆ ರೂಪಿಸಿ ಕೊಡಲಾಗುತ್ತಿತ್ತು. ಆದ್ರೆ, ಈ ವರ್ಷದಿಂದ ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನಿ ಪತ್ರಿಕೆ ರೂಪಿಸಿ ಆನ್​ಲೈನ್​ ಮೂಲಕ ರವಾನಿಸುವ ಮಹತ್ವದ ನಿರ್ಧಾರ ಮಾಡಿದೆ. ಮಧ್ಯವಾರ್ಷಿಕ ಪರೀಕ್ಷೆಗಳಿಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಮಯದಲ್ಲಿ ಇಲಾಖೆಯ ಈ ನಿರ್ಧಾರಕ್ಕೆ ಮುಂದಾಗಿರುವುದು ಹಲವರ ವಿರೋಧಕ್ಕೆ ಕಾರಣವಾಗಿದೆ.

ಶಿಕ್ಷಕರು ಹಾಗೂ ಶಾಲೆಗಳ ಹೆಗಲಿಗೆ ಖರ್ಚು

ಈ ವರ್ಷ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ sslc ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಮಂಡಳಿ ಹಂತದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ಶಾಲೆಗಳಿಗೆ ಲಾಗಿನ್ ನೀಡಲು ಮುಂದಾಗಿದೆ. ಆದ್ರೆ, ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ಮುದ್ರಣಕ್ಕೆ ಯಾವುದೇ ಅನುದಾನ ಶಾಲೆಗಳಿಗೆ ನೀಡಿಲ್ಲ. ಶಿಕ್ಷಕರು ಹಾಗೂ ಶಾಲೆಗಳ ಹೆಗಲಿಗೆ ಈ ಖರ್ಚು ಹಾಕಿ ಇಲಾಖೆ ಸುಮ್ಮನಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ದಾನಿಗಳ ಮೊರೆ ಹೋಗಬೇಕಾದ ಸ್ಥಿತಿ ಸರ್ಕಾರಿ ಶಾಲಾ ಶಿಕ್ಷಕರಿಗೆ ಎದುರಾಗಿದೆ.

ಶಿಕ್ಷಕರ ಪರೀಕ್ಷೆಗೂ ಮೊದಲು ಇದನ್ನ ಪ್ರಿಂಟ್ ಮಾಡಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾಗಿದೆ. ಸದ್ಯ ಇದಕ್ಕೆ ಯಾವುದೇ ಅನುದಾನ ನೀಡಿಲ್ಲ. ಒಬ್ಬ ವಿದ್ಯಾರ್ಥಿಗೆ 6 ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಿದ್ಧಪಡಿಸಿ ನೀಡಲು ಕನಿಷ್ಠ 50 ರಿಂದ 60 ರೂಪಾಯಿ ಖರ್ಚಾಗುತ್ತದೆ. ಆದ್ರೆ ಇಲಾಖೆ ಇದಕ್ಕೆ ಅನುದಾನ ನೀಡದೇ ಏಕಾಏಕಿ ಈ ರೀತಿ ನಿರ್ಧಾರಕ್ಕೆ ಮುಂದಾಗಿರುವುದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಕರ್ನಾಟಕ ಶಿಕ್ಷಣದಲ್ಲಿ ಆಂಧ್ರ ಮಾಡೆಲ್: SSLC, PUC ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್

ಇಲಾಖೆಯ ನಿರ್ಧಾರಕ್ಕೆ ವಿರೋಧ

ಇಲಾಖೆಯ ನಿರ್ಧಾರಕ್ಕೆ ಪೋಷಕರ ವಲಯದಲ್ಲಿ ವಿರೋಧ ಕೂಡಾ ಕೇಳಿ ಬರ್ತಿದೆ.. ಶಿಕ್ಷಣದಲ್ಲಿ ಯಾವುದೇ ಬದಲಾವಣೆಗಳನ್ನು ತರಬೇಕಾದರೆ ಅದನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಾಡಬೇಕು. ಅರ್ಧವಾರ್ಷಿಕ ಪರೀಕ್ಷೆಗೆ ಯಾರು ಪ್ರಶ್ನೆ ಪತ್ರಿಕೆ ತಯಾರಿಸಬೇಕು ಎಂಬ ನಿರ್ಧಾರವನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಕೈಗೊಳ್ಳಬೇಕು. ಈಗ, ಪರೀಕ್ಷೆಗಳನ್ನು ಶಾಲಾ ಮಟ್ಟದಲ್ಲೇ ನಡೆಸಿದರು ಕೂಡ, ಮಂಡಳಿಯಿಂದ ಬರುವ ಪ್ರಶ್ನೆ ಪತ್ರಿಕೆಯು, ಈಗಾಗಲೇ ಪರೀಕ್ಷೆಗಳ ಒತ್ತಡದಲ್ಲಿರುವ ವಿದ್ಯಾರ್ಥಿಗಳ ಮೇಲೆ ಇನ್ನಷ್ಟು ಭಾರವನ್ನುಂಟುಮಾಡುತ್ತದೆ.

ಪ್ರಸ್ತುತ ರಾಜ್ಯ ಸರ್ಕಾರವು ಶೈಕ್ಷಣಿಕ ವರ್ಷದ ನಡುವೆ ಈ ರೀತಿ ಹಲವು ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ, ಶಿಕ್ಷಕರ ಹಾಗೂ ತಜ್ಞರ ಅಭಿಪ್ರಾಯಗಳನ್ನು ಪಡೆಯದೆ ಈ ರೀತಿ ಅಪ್ರಜಾತಾಂತ್ರಿಕ ಹಾಗೂ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದನ್ನು ಸರ್ಕಾರವು ಕೈಬಿಡಬೇಕು. ಕೂಡಲೇ ಮಂಡಳಿ ಪ್ರಶ್ನೆ ಪತ್ರಿಕೆಗಳನ್ನು ಕೈಬಿಟ್ಟು ಶಾಲಾ ಮಟ್ಟದಲ್ಲೇ ಪ್ರಶ್ನೆ ಪತ್ರಿಕೆಗಳನ್ನು ರಚಿಸವಂತೆ ಒತ್ತಾಯ ಕೇಳಿ ಬರ್ತಿದೆ. ಇನ್ನು ಇಲಾಖೆಯ ನಡೆಗೆ ಖಾಸಗಿ ಶಾಲೆಗಳ ಒಕ್ಕೂಟವೂ ತಿರುಗಿ ಬೀದಿವೆ.

ಒಟ್ಟಿನಲ್ಲಿ ಪರೀಕ್ಷೆ ಅಂದ್ರೆ ಮಕ್ಕಳ ಮನಸ್ಸಲ್ಲಿ ಹುಮ್ಮಸ್ಸು ಧೈರ್ಯ ಬರುವಂತೆ ಮಾಡಬೇಕಿದ್ದ ಶಿಕ್ಷಣ ಇಲಾಖೆ ಒಂದಲ್ಲ ಒಂದು ಎಡವಟ್ಟು ಮಾಡುತ್ತಿದದೆ. ಮತ್ತೊಂದಡೆ ಶಾಲೆಗಳಿಗೆ ಅನುದಾನವನ್ನೇ ನೀಡದೆ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಮುಂದಾಗಿರೊದಕ್ಕೆ ಶಿಕ್ಷಕರು ಪರದಾಡುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.