ಆಗಸ್ಟ್ 30ರಂದು 1ರಿಂದ 8 ನೇ ತರಗತಿವರೆಗಿನ ಶಾಲೆ ಆರಂಭದ ಕುರಿತು ಅಂತಿಮ ತೀರ್ಮಾನ: ಶಿಕ್ಷಣ ಸಚಿವ ಬಿ ಸಿ ನಾಗೇಶ್

ಈ ತಿಂಗಳ ಕೊನೆಯವರೆಗೆ ಶೇಕಡ 80ರಷ್ಟು ಪುಸ್ತಕ ವಿತರಣೆ ಮಾಡುತ್ತೇವೆ. ಬುಕ್ ಬ್ಯಾಂಕ್ ಮಾಡಿ ಪುಸ್ತಕ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಆಗಸ್ಟ್ 30ರಂದು 1ರಿಂದ 8 ನೇ ತರಗತಿವರೆಗಿನ ಶಾಲೆ ಆರಂಭದ ಕುರಿತು ಅಂತಿಮ ತೀರ್ಮಾನ: ಶಿಕ್ಷಣ ಸಚಿವ ಬಿ ಸಿ ನಾಗೇಶ್
ಬಿ.ಸಿ.ನಾಗೇಶ್
Follow us
TV9 Web
| Updated By: guruganesh bhat

Updated on: Aug 26, 2021 | 10:32 PM

ಬೆಳಗಾವಿ: 1 ರಿಂದ 8ನೇ ತರಗತಿಯವರೆಗೆ ಶಾಲೆಗಳು ಆರಂಭಿಸುವ ಕುರಿತು ಆಗಸ್ಟ್ 30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯತಿ ನೇತೃತ್ವದಲ್ಲಿ ಸಭೆ ಕರೆದಿದ್ದು, ಅದೇ ದಿನ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಳಗಾವಿಯಲ್ಲಿ ತಿಳಿಸಿದರು. ಶಾಲೆ ಆರಂಭಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಿತಿಯಲ್ಲಿರುವ ಡಾ. ದೇವಿ ಪ್ರಸಾದ್ ಶೆಟ್ಟಿಯವರು 6 ರಿಂದ 8ನೇ ತರಗತಿ ಆರಂಭ ಮಾಡಬಹುದು ಎಂದಿದ್ದಾರೆ. ಆಗಸ್ಟ್ 30ರಂದು ಸಭೆ ಸೇರಿ ಎಲ್ಲರೂ ನಿರ್ಣಯ ಕೈಗೊಳ್ಳುತ್ತೇವೆ ಎಂದು ಅವರು ಮಾಹಿತಿ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ 57 ಶಿಕ್ಷಕರು ಬಿಟ್ಟು ಎಲ್ಲರೂ ಕೊರೊನಾ ಲಸಿಕೆ ಪಡೆದಿದ್ದಾರೆ. ಶಿಕ್ಷಕರ ಕೊರತೆ ಎಲ್ಲಾ ಕಡೆ ಇದೆ. ಬೆಳಗ್ಗೆ, ಮಧ್ಯಾಹ್ನ ಒಂದೊಂದು ಬ್ಯಾಚ್ ಮಾಡುವ ಸಲಹೆಯೂ ಬಂದಿದೆ. ಮಕ್ಕಳು ಉತ್ಸಾಹದಲ್ಲಿ ಶಾಲೆಗಳಿಗೆ ಬರುತ್ತಿದ್ದಾರೆ. ಪೂರ್ಣ ಕ್ಲಾಸ್ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಶೇಕಡ 56ರಷ್ಟು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯಾಗಿದೆ. ಲಾಕ್‌ಡೌನ್ನಿಂದ್ ಪ್ರಿಂಟಿಂಗ್ ಪ್ರೆಸ್ ಬಂದ್ ಆಗಿದ್ದರಿಂದ ಎಲ್ಲ ಪುಸ್ತಕಗಳೂ ಪ್ರಕಟವಾಗಿಲ್ಲ. ಈ ತಿಂಗಳ ಕೊನೆಯವರೆಗೆ ಶೇಕಡ 80ರಷ್ಟು ಪುಸ್ತಕ ವಿತರಣೆ ಮಾಡುತ್ತೇವೆ. ಬುಕ್ ಬ್ಯಾಂಕ್ ಮಾಡಿ ಪುಸ್ತಕ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಡೋಸ್ ಕೊವಿಡ್ ಲಸಿಕೆ ನೀಡಲು ಕೇಂದ್ರ ಒಪ್ಪಿದೆ: ಸಿಎಂ ಬೊಮ್ಮಾಯಿ ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೊವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. ಇಂದು ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗ ಪ್ರತಿ ದಿನ 3.5 ಲಕ್ಷದಿಂದ 4 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಸೆಪ್ಟೆಂಬರ್ ತಿಂಗಳಿಂದ ಪ್ರತಿ ದಿನ 5 ಲಕ್ಷ ಡೋಸ್ ಲಸಿಕೆ ಹಾಕಲು ರಾಜ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂಬ ಸಂಗತಿಯನ್ನು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರ ಗಮನಕ್ಕೆ ತರಲಾಯಿತು. ರಾಜ್ಯದ ಈ ಪ್ರಸ್ತಾವನೆಗೆ ಅವರು ಒಪ್ಪಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡುವ ಭರವಸೆ ನೀಡಿದರು ಎಂದು ಸಿಎಂ ತಿಳಿಸಿದರು.

ಹೊಸ ಜವಳಿ ನೀತಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದೆ. ದೇಶದಲ್ಲಿಯೇ ಮೊಟ್ಟ ಮೊದಲ ರಾಜ್ಯವಾಗಿ ಕರ್ನಾಟಕ ಅನುಷ್ಠಾನಕ್ಕೆ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: 

(Karnataka Education Minister BC Nagesh says Final decision on school opening from August 1 to 8)