AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET Result 2025 Today: ಇಂದು ಸಿಇಟಿ ಫಲಿತಾಂಶ, ಎಷ್ಟು ಗಂಟೆಗೆ? ರಿಸಲ್ಟ್‌ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿವರ

KCET Result 2025: ಸಿಇಟಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಇದು. ಇಂದು (ಮೇ 24) UG CET-2025 ಫಲಿತಾಂಶ ಪ್ರಕಟ ಮಾಡುವ ಮುಹೂರ್ತ ಫಿಕ್ಸ್ ಆಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟ ಮಾಡಲಿದ್ದಾರೆ. ಹಾಗಾದ್ರೆ, ಎಷ್ಟು ಗಂಟೆ ರಿಸಲ್ಟ್​ ಪ್ರಕಟವಾಗುತ್ತೆ? ಆನ್​ಲೈನ್​ನಲ್ಲಿ ಫಲಿತಾಂಶ ಚೆಕ್​ ಮಾಡುವುದ್ಹೇಗೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

KCET Result 2025 Today: ಇಂದು ಸಿಇಟಿ ಫಲಿತಾಂಶ, ಎಷ್ಟು ಗಂಟೆಗೆ? ರಿಸಲ್ಟ್‌ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿವರ
Cet Result 2025
Follow us
ರಮೇಶ್ ಬಿ. ಜವಳಗೇರಾ
|

Updated on: May 24, 2025 | 6:00 AM

ಬೆಂಗಳೂರು, (ಮೇ 24):  ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶ ಇಂದು(ಮೇ 24) ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ.

ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KEA ಯ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಪರಿಶೀಲಿಸಬಹುದು.

ಇದನ್ನೂ ಓದಿ: ಖಾಸಗಿ ಎಂಜಿನಿಯರಿಂಗ್ ಕಾಲೇಜು ಶುಲ್ಕ ಶೇ 7.5 ಹೆಚ್ಚಳ ಸಾಧ್ಯತೆ: ವಿದ್ಯಾರ್ಥಿಗಳಿಗೆ ದರ ಏರಿಕೆ ಶಾಕ್

ಸಿಇಟಿ ರಿಸಲ್ಟ್ ಚೆಕ್​ ಮಾಡುವ ವಿಧಾನ

ಹಂತ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪೋರ್ಟಲ್ https://cetonline.karnataka.gov.in/kea ಗೆ ಹೋಗಿ.

ಇದನ್ನೂ ಓದಿ
Image
ಕೆಸಿಇಟಿ ನಂತರ ವೃತ್ತಿಪರ ಕೋರ್ಸ್​​​ಗಳ ಆಯ್ಕೆ ಹೇಗೆ?
Image
ಈ ದೇಶಗಳಲ್ಲಿ ನೀವು ಕಡಿಮೆ ವೆಚ್ಚದಲ್ಲಿ ಎಂಬಿಬಿಎಸ್ ಅಧ್ಯಯನ ಮಾಡಬಹುದು
Image
ನೀಟ್ ಇಲ್ಲದೆ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ ಪಡೆಯುವುದು ಹೇಗೆ?
Image
JEE ಅಡ್ವಾನ್ಸ್‌ಡ್ ಪರೀಕ್ಷೆಯನ್ನು ವಿಶ್ವದ 2ನೇ ಕಠಿಣ ಪರೀಕ್ಷೆ!

ಹಂತ 2: ಮುಖಪುಟದಲ್ಲಿ “KCET ಫಲಿತಾಂಶಗಳು 2024” ಎಂದು ಲೇಬಲ್ ಮಾಡಲಾದ ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ.

ಹಂತ 3: ಗೊತ್ತುಪಡಿಸಿದ ಕ್ಷೇತ್ರಗಳಲ್ಲಿ ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳೊಂದಿಗೆ ನಿಮ್ಮ KCET ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

ಹಂತ 4: ಮುಂದುವರೆಯಲು “Submit” ಮೇಲೆ ಕ್ಲಿಕ್ ಮಾಡಿ.

ಹಂತ 5: ನಿಮ್ಮ KCET ಫಲಿತಾಂಶವನ್ನು ಪರದೆಯ ಮೇಲೆ ಬರುತ್ತದೆ.

ಹಂತ 6: ಈ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ಔಟ್‌ ತೆಗೆದಿಟ್ಟುಕೊಳ್ಳಬಹುದು.

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 17, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿದ್ದು, ಇದರ ಫಲಿತಾಂಶ ಪ್ರಟಕವಾಗಲಿದೆ. ಕರ್ನಾಟಕದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ನಿರ್ಣಾಯಕವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು