PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ
ಸ್ನಾತಕೋತ್ತರ ಕೋರ್ಸ್‌ಗಳಾದ ಎಂಬಿಎ, ಎಂಸಿಎ., ಎಂ.ಟೆಕ್, ಎಂಇ., ಎಂ.ಆರ್ಕಿಟೆಕ್ಚರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದ್ರೆ, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ಮತ್ತೆ ಮೂರು ದಿನ ವಿಸ್ತರಣೆ ಮಾಡಿದೆ,
ಬೆಂಗಳೂರು, (ಜೂನ್ 17): ಎಂಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಇತರ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಪಿಜಿಸಿಇಟಿ-24ಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(Karnataka Examinations Authority) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ. ಶುಲ್ಕ ಪಾವತಿಸಲು ಜೂನ್ 21ವರೆಗೆ ಅವಕಾಶ ಇರುತ್ತದೆ. ಈ ಹಿಂದೆ ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಇಂದಿಗೆ ಅಂದರೆ ಜೂನ್ 17ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈಗ ಮತ್ತೆ ಮೂರು ದಿನ ವಿಸ್ತರಣೆ ಮಾಡಲಾಗಿದೆ.
ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಕೆಇಎ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಅರ್ಜಿ ಸಂಖ್ಯೆ ಮತ್ತು ಅರ್ಜಿದಾರರ ಹೆಸರು (ಮೊದಲ ನಾಲ್ಕು ಅಕ್ಷರಗಳು) ನಮೂದಿಸಿ ಡಿಸಿಇಟಿ-2024 ರ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ 10ರಷ್ಟು ಹೆಚ್ಚಳ: ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ
ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿರುವ ವಸ್ತ್ರ ಸಂಹಿತೆಯನ್ನು ತಪ್ಪದೆ ಅನುಸರಿಸಲು ಸೂಚಿಸಲಾಗಿದೆ. ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕೆಂದು ಸ್ಪಷ್ಟಪಡಿಸಲಾಗಿದೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು ಎಂದು ತಿಳಿಸಲಾಗಿದೆ.
2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ (ಎಂಬಿಎ, ಎಂಸಿಎ., ಎಂ.ಟೆಕ್, ಎಂಇ., ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿ ಸಿಇಟಿ-24) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶ ಪರೀಕ್ಷೆ ಜುಲೈ 13ರಂದು ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಜುಲೈ 14ರಂದು ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಈಗಾಗಲೇ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:56 pm, Mon, 17 June 24