ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ

2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ 1ನೇ ತರಗತಿಗೆ ಮಕ್ಕಳ ದಾಖಲಾತಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಶೈಕ್ಷಣಿಕ ವರ್ಷದ ಜೂನ್ 1ರಿಂದ ಗರಿಷ್ಠ 60 ದಿನಗಳ ಸಡಿಲಿಕೆ ನೀಡಿದೆ. ಮಗುವಿನ ವಯಸ್ಸು ಲೆಕ್ಕಹಾಕಿ ದಾಖಲಾತಿಗೆ ಪರಿಗಣಿಸಲು ಆದೇಶಿಸಲಾಗಿದೆ.

ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ
ಪ್ರಾತಿನಿಧಿಕ ಚಿತ್ರ
Image Credit source: google
Edited By:

Updated on: Apr 10, 2026 | 6:34 PM

ಬೆಂಗಳೂರು, ಏಪ್ರಿಲ್​ 10: ಒಂದನೇ ತರಗತಿ ದಾಖಲಾತಿಗೆ (Class 1st admission) ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಇಲಾಖೆ ವಿನಾಯಿತಿ ನೀಡಿತ್ತು. ಆ ಬಳಿಕವೂ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು, ಪ್ರತಿಭಟನೆ ಕೂಡ ಮಾಡಿದ್ದರು. ಇದೀಗ 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್‌ 1 ರಿಂದ ಗರಿಷ್ಠ60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಶಿಕ್ಷಣ ಇಲಾಖೆ ಟ್ವಿಟ್​

ಇದರಿಂದ ಮಗುವಿನ ಜನ್ಮದಿನವು ಜೂನ್ 1ರಿಂದ ಮುಂದಿನ 60 ದಿನಗಳ ಒಳಗಿದ್ದರೆ (ಜುಲೈ 30ರ ವರೆಗೆ), ಅಂತಹ ಮಕ್ಕಳನ್ನು 1ನೇ ತರಗತಿಗೆ ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪೋಷಕರು ಸಲ್ಲಿಸಿದ ಮನವಿಗಳನ್ನು ಪುರಸ್ಕರಿಸಿ, ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ಕಲಂ 20ರ ಅಡಿಯಲ್ಲಿ ಈ ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: 1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಣೆ ಮಾಡಿದ್ದರು. ಅದರಂತೆ ಇದೀಗ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. 60 ದಿನಗಳ ವಿನಾಯಿತಿ ನೀಡಲಾಗಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡ ಮಕ್ಕಳಿಗೂ 1ನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:32 pm, Fri, 10 April 26

Follow Us