
ಶಿವಮೊಗ್ಗ, ಅಕ್ಟೋಬರ್ 20: ಸರ್ಕಾರಿ ಶಾಲೆ(Government School)ಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ
ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶವಿರಲಿದೆ.ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ನವೆಂಬರ್ ಎರಡನೇ ವಾರದಲ್ಲಿ ಸಿಎಂ ಗುದ್ದಲಿ ಪೂಜೆ ಮಾಡಲಿದ್ದಾರೆ, ಎಐ ಆಧಾರಿತ ಶಿಕ್ಷಣ ನೀಡಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ.ಈಗ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುವುದು.6ನೇ ತರಗತಿಯಿಂದಲೇ ಸ್ಕಿಲ್ ಸ್ಕೂಲ್ ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಓದಿ: ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ
ಜಾತಿ ಸಮೀಕ್ಷೆ ಬಗ್ಗೆ ಮಾಹಿತಿ
ಜಾತಿ ಸಮೀಕ್ಷೆ ಶೇ.90.12ರಷ್ಟು ಆಗಿದೆ, ಸಮೀಕ್ಷೆ ಅಗತ್ಯ ತುಂಬಾ ಇದೆ. ಇದರಿಂದ ಬಜೆಟ್ಗೆ ಅನುಕೂಲವಾಗಲಿದೆ. ದೊಡ್ಡ ದೊಡ್ಡ ಉದ್ಯಮಿಗಳು ಸಹ ಸಹಕಾರ ನೀಡಬೇಕಾಗುತ್ತದೆ ಎಂದು ಇನ್ಫೋಸಿಸ್ ಹೆಸರನ್ನು ಬಳಸದೆ ಮನವಿ ಮಾಡಿದರು. ಎಲ್ಲರೂ ಸಹ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲೆಯಲ್ಲಿ ಶೇ. 97 ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ.
ನಿನ್ನೆಗೆ ಶಿಕ್ಷಕರನ್ನು ಸಮೀಕ್ಷೆಗೆ ಬಳಸುವುದನ್ನು ನಿಲ್ಲಿಸಲಾಗಿದೆ. ಕೆಲವರು ಮತವೇ ಹಾಕುವುದಿಲ್ಲ.ಅಂತಹವರು ಮಾತ್ರ ಎಲ್ಲಾ ಸೌಲಭ್ಯವನ್ನು ಕೇಳುತ್ತಾರೆ. ಇಂತಹವರು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದರು.
ಆರ್ಎಸ್ಎಸ್ ಬಗ್ಗೆ ಹೇಳಿಕೆ
ಆರ್ಎಸ್ಎಸ್ ಚಡ್ಡಿಯಿಂದ ಪ್ಯಾಂಟ್ಗೆ ಬದಲಾಗಿದೆ, ಆದರೆ ಅಜೆಂಡಾ ಮಾತ್ರ ಬದಲಾಗಿಲ್ಲ, ಆರ್ ಎಸ್ ಎಸ್ ಹಾದಿ ತಪ್ಪಿಸುವ ವ್ಯವಸ್ಥೆ ಆಗಿದೆ.ಇವರು ಜನಗಣಮನ ಹೇಳಲ್ಲ, ರಾಷ್ಟ್ರಧ್ವಕ್ಕೆ ಗೌರವಕೊಡಲ್ಲ ಎಂದು ಹೇಳಿದರು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ